
CHITRADURGA NEWS | 12 JULY 2024
ಚಿತ್ರದುರ್ಗ: ದಾವಣಗೆರೆ ಚಿತ್ರದುರ್ಗ ತುಮಕೂರು ನೇರ ರೈಲು ಮಾರ್ಗದ ಕಾಮಗಾರಿ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ಸಂಸದ ಗೋವಿಂದ ಎಂ.ಕಾರಜೋಳ ತಿಳಿಸಿದರು.
ಡಿಸಿ ಕಚೇರಿಯಲ್ಲಿ ನಡೆದ ರೈಲ್ವೇ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಹಾಗೂ ಭರಮಸಾಗರ ನಡುವಿನ 29 ಕಿ.ಮೀ ಉದ್ದದ ರೈಲ್ವೇ ಭೂಸ್ವಾಧೀನ ಪ್ರಕ್ರಿಯೆ ಶೇ.90 ರಷ್ಟು ಮುಕ್ತಾಯಗೊಂಡಿದೆ. ಭೂಮಿ ಹಸ್ತಾಂತರ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಚಿತ್ರದುರ್ಗ-ಚಳ್ಳಕೆರೆ-ಪಾವಗಡ ರಸ್ತೆಯನ್ನು ಹೆದ್ದಾರಿ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ | ಗೋವಿಂದ ಕಾರಜೋಳ
ಭರಮಸಾಗರ-ಚಿತ್ರದುರ್ಗ ನಡುವಿನ ಕಾಮಗಾರಿಯ ಟೆಂಡೆರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರದಲ್ಲೇ ನಮ್ಮ ರಾಜ್ಯದವರೇ ಆಗಿರುವ ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಂದ ಕಾಮಗಾರಿಯ ಭೂಮಿ ಪೂಜೆ ಮಾಡಿಸುವಂತೆ ರೈಲ್ವೇ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆ ಜಿಲ್ಲೆ ಅಗತ್ಯವಾಗಿದೆ. ಯೋಜನೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಒಟ್ಟು 1210 ಎಕೆರೆ ಭೂಮಿ ಅಗತ್ಯವಿದೆ. ಇದರಲ್ಲಿ 1053 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು ರೈಲ್ವೇ ಇಲಾಖೆಗೆ ನೀಡಲಾಗಿದೆ.
ಇದನ್ನೂ ಓದಿ: ಬಿ.ಜಿ.ಕೆರೆ ಹೆದ್ದಾರಿ ಸಮಸ್ಯೆ | ಫೂಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಟೆಂಡರ್ | ಗೋವಿಂದ ಕಾರಜೋಳ
ಬಾಕಿ ಇರುವ 145 ಎಕರೆ ಭೂ ಸ್ವಾಧೀನ ಪ್ರಕ್ರಿಯ ಅಂತಿಮ ಹಂತದಲ್ಲಿದೆ. ಯೋಜನೆ ವಿಳಂಭವಾಗದಂತೆ ರೈಲ್ವೇ ಕಾಮಗಾರಿಗೆ ಅಗತ್ಯ ಇರುವ ಭೂಮಿ ಸ್ವಾಧೀನ ಹಾಗೂ ರೈಲ್ವೇ ಇಲಾಖೆಗೆ ಭೂಮಿ ಹಸ್ತಾಂತರಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಮಾಡುವಂತೆ ಸಂಸದ ಗೋವಿಂದ ಎಂ ಕಾರಜೋಳ ಭೂಸ್ವಾಧೀನಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಭೂಸ್ವಾಧೀನಾಧಿಕಾರಿ ವಿವೇಕ್, ನೈರುತ್ಯ ರೈಲ್ವೇ ಮುಖ್ಯ ಇಂಜಿನಿಯರ್ ಪರದೀಪ್ ಪುರಿ, ಕಾರ್ಯಪಾಲಕ ಇಂಜಿನಿಯರ್ ರಜತ್ ತುನಹಾ, ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಬಿ.ಪುರುಷೊತಮ್, ವಿಭಾಗೀಯ ಸಹಾಯಕ ಇಂಜಿನಿಯರ್ ನಿತ್ಯಾನಂತದ ಸ್ವಾಮಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
