
CHITRADURGA NEWS | 18 JULY 2024
ಚಿತ್ರದುರ್ಗ: ಎಚ್.ಆಂಜನೇಯ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಜುಲೈ 20 ರಂದು ಸಂಜೆ 4ಕ್ಕೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ (Talent Award) ಸಮಾರಂಭ ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್.ಆಂಜನೇಯ ಚಾರಿಟೆಬಲ್ ಟ್ರಸ್ಟ್ ಉದ್ಘಾಟನೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡುವರು.
ಇದನ್ನೂ ಓದಿ: Gold coin case: ಚಿನ್ನದ ನಾಣ್ಯ ವಂಚನೆ ಪ್ರಕರಣ | ತೋಟದ ಮನೆಯಲ್ಲಿ ಬಚ್ಚಿಟ್ಟಿದ್ದ ಹಣ ವಶ

ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಮುಂಡರಗಿ ನಾಗರಾಜ್ ಭಾಗವಹಿಸುವರು.
ಇದನ್ನೂ ಓದಿ: ಬೇಲಿ ಮೇಲಿನ ಹಣ್ಣು ತಿಂದು ಮಕ್ಕಳು ಅಸ್ವಸ್ಥ | ಆಸ್ಪತ್ರೆಗೆ ದಾಖಲು
ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳಿಸಿದ ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜುಲೈ 20ರಂದು ಮಧ್ಯಾಹ್ನ 1.30 ರಿಂದ 2.30 ರವರೆಗೆ ಭೋಜನ, ಭೂಮಿ ತಾಯಿ ಬಳಗದಿಂದ ವಾದ್ಯಗೋಷ್ಠಿ, ಮೈಸೂರು ನಗಾರಿ ಮಂಜು ತಂಡದಿಂದ ನಗಾರಿ ಕುಣಿತ ಹಮ್ಮಿಕೊಳ್ಳಲಾಗಿದೆ. ಸಂಜೆ 4.30ಕ್ಕೆ ಮುಖ್ಯಮಂತ್ರಿಗಳಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಟ್ರಸ್ಟ್ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
