
CHITRADURGA NEWS | 20 JULY 2024
ಚಿತ್ರದುರ್ಗ: ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ರಾಷ್ಟ್ರೀಯ ಹೆದ್ದಾರಿ ಕ್ಯಾದಿಗೆರೆಯಿಂದ ಸೀಬಾರ ಬೈಪಾಸ್‍ನಲ್ಲಿ ವಾಹನವೊಂದು ಡಿಕ್ಕಿಯಾಗಿ ಕರಡಿ(bear) ಮೃತಪಟ್ಟಿದೆ.
ತಮಟಕಲ್ಲು ಬಳಿ ಹೆದ್ದಾರಿಯ ಬೈಪಾಸ್‍ನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ತೀವ್ರ ಗಾಯಗೊಂಡಿರುವ ಕರಡಿ ಸ್ಥಳದಲ್ಲೇ ಮೃತಪಟ್ಟಿದೆ.
ಜೋಗಿಮಟ್ಟಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಸುತ್ತಲೂ ಬೆಟ್ಟ ಗುಡ್ಡಗಳಿರುವುದರಿಂದ ಕರಡಿ ಸೇರಿದಂತೆ ವನ್ಯಜೀವಿಗಳು ಅತ್ತಿಂದಿತ್ತ ಓಡಾಡುವುದು ಸಾಮಾನ್ಯ.
ಆದರೆ, ಹೊಸದಾಗಿ ನಿರ್ಮಾಣವಾಗಿರುವ ಹೆದ್ದಾರಿಯಲ್ಲಿ ಈ ಪ್ರಾಣಿಗಳು ಸಂಚರಿಸುವಾಗ ಅಪಘಾತಗಳಾಗುತ್ತಿರುವುದು ಆತಂಕದ ವಿಚಾರವಾಗಿದೆ.
ಇದನ್ನೂ ಓದಿ: ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಿ | ಎಡಿಸಿ ಬಿ.ಟಿ.ಕುಮಾರಸ್ವಾಮಿ
ಈ ಹಿಂದೆಯೂ ಸಾಕಷ್ಟು ಅಪಘಾತಗಳು ಇಲ್ಲಿ ಸಂಭವಿಸಿದ್ದು, ವನ್ಯಜೀವಿಗಳು ಜೀವ ಕಳೆದುಕೊಳ್ಳುತ್ತಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
