
CHITRADURGA NEWS | 30 JULY 2024
ಚಿತ್ರದುರ್ಗ: ಭದ್ರಾ ಮೇಲ್ದಂಡೆ (Upper Bhadra Project ) ಬಗ್ಗೆ ಮಾಜಿ ಪ್ರಧಾನಿ, ರಾಜ್ಯಸಭೆಯ ಜೆಡಿಎಸ್ ಸದಸ್ಯ ಎಚ್.ಡಿ.ದೇವೇಗೌಡ ಧ್ವನಿ ಎತ್ತಿದ್ದಾರೆ.
ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಸೋಮವಾರ ಪಾಲ್ಗೊಂಡು ಸುಮಾರು 40 ನಿಮಿಷ ಮಾತನಾಡಿದ ಅವರು, ‘ಹನಿ ನೀರಾವರಿ ಮೂಲಕ ಮಧ್ಯ ಕರ್ನಾಟಕದ ಜಿಲ್ಲೆಗಳಿಗೆ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಹಾಗೂ ಅಗತ್ಯ ಅನುದಾನ ನೀಡಬೇಕು’ ಎಂದು ಆಗ್ರಹಿಸಿದರು.
ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಕ್ರಮ | ಎಫ್ಐಆರ್ ದಾಖಲಿಸಿ
‘ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಎಂದು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಕೇಂದ್ರಕ್ಕೆ ಶಿಫಾರಸು ಮಾಡಿತ್ತು. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಮೈದುಂಬಿದ ವೇದಾವತಿ | ವಿವಿ ಸಾಗರಕ್ಕೆ ಬರೋಬ್ಬರಿ 4737 ಕ್ಯೂಸೆಕ್ ನೀರು
ಕೇಂದ್ರದ ಬಜೆಟ್ನಲ್ಲಿ ಆಂಧ್ರ ಪ್ರದೇಶ ಹಾಗೂ ಬಿಹಾರಕ್ಕೆ ವಿಶೇಷ ಅನುದಾನ ನೀಡಿದ್ದು ತಪ್ಪಲ್ಲ. ದೇಶದ ಕೃಷಿ ಸಮುದಾಯ ಬಿಕ್ಕಟ್ಟು ಎದುರಿಸುತ್ತಿದೆ. ಕೃಷಿ ಕ್ಷೇತ್ರದಲ್ಲಿ ದುಡಿಯುವವರ ಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ. ಕೃಷಿ ಬಿಕ್ಕಟ್ಟು ಬಗೆಹರಿಸುವ ಬಗ್ಗೆ ಸರ್ಕಾರಗಳು ಹೆಚ್ಚು ಗಮನ ಹರಿಸಬೇಕು ಎಂದು ಕಿವಿ ಮಾತು ಹೇಳುತ್ತಲೆ, ಕರ್ನಾಟಕದ ಕುಡಿಯುವ ನೀರಿನ ಸಂಕಷ್ಟದ ಸ್ಥಿತಿಯನ್ನು ಬಿಚ್ಚಿಟ್ಟರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
