
CHITRADURGA NEWS | 30 JULY 2024
ಚಿತ್ರದುರ್ಗ: ದಾವಣಗೆರೆ ಜಿಲ್ಲೆಯ ಹರಿಹರದ ಗಾಂಧಿನಗರದಲ್ಲಿ ಮನೆಯ ಬೀಗ ಮುರಿದು ಬಂಗಾರದ ಆಭರಣ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು (Arrest) ಬಂಧಿಸಿದ್ದಾರೆ.
ಹರಿಹರದ ಶೇಖ್ ಫಹಾನ್ ಮಸೂದ್ ಅವರ ಮನೆಯಲ್ಲಿ ಜುಲೈ 20ರಂದು ಕಳವು ನಡೆದಿತ್ತು. ಹರಿಹರ ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ವೇದಾವತಿ ನದಿ ಹರಿಯುವ ದೃಶ್ಯ ನಯನ ಮನೋಹರ
ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿ ಚಿತ್ರದುರ್ಗ ತಾಲ್ಲೂಕಿನ ಪಾಮರಹಳ್ಳಿ ನಿವಾಸಿ ಮಕ್ದುಮ್ ಅಲಿಯಾಸ್ ಕುಟ್ಟಿ ಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಕಳವು ಮಾಡಿದ್ದ ₹1.10 ಲಕ್ಷ ಮೌಲ್ಯದ 15 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 100 ಗ್ರಾಂ ತೂಕದ ಬೆಳ್ಳಿ ಆಭರಣ ವಶಪಡಿಸಿಕೊಳ್ಳಲಾಗಿದೆ.
ಆರೋಪಿ ವಿರುದ್ಧ ಚಿತ್ರದುರ್ಗ ಟೌನ್ ಪೊಲೀಸ್ ಠಾಣೆಯಲ್ಲಿ ಸಹ ಈ ಹಿಂದೆ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
