By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    10 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    10 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    11 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    14 hours ago
    coconut water
    ಬೇಸಿಗೆಯಲ್ಲಿ ಎಳ ನೀರು ಕುಡಿಯುವಾಗ ಈ ತಪ್ಪುಗಳನ್ನು ಮಾಡಬೇಡಿ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    23 hours ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    7 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    23 hours ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
    Banana and aloe vera
    ಬೇಸಿಗೆಯಲ್ಲಿ ಒಣ ಚರ್ಮದಿಂದ ಪರಿಹಾರ ಪಡೆಯಲು ಈ ಫೇಸ್ ಪ್ಯಾಕ್ ಹಚ್ಚಿ
    3 days ago
    Sour teak
    ತಿಂದ ತಕ್ಷಣ ಹುಳಿ ತೇಗು ಬರುತ್ತದೆಯೇ? ಹಾಗಾದ್ರೆ ಊಟವಾದ ತಕ್ಷಣ ಈ ತಪ್ಪುಗಳನ್ನು ಮಾಡಬೇಡಿ
    3 days ago
Reading: Wayanad: ಕೇರಳಿಗರ ಮನಗೆದ್ದ ದುರ್ಗದ ಮಗಳು | ದೊಡ್ಡೇರಿಯ ಮೇಘಶ್ರೀ ವಯನಾಡ್ ಡಿಸಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Wayanad: ಕೇರಳಿಗರ ಮನಗೆದ್ದ ದುರ್ಗದ ಮಗಳು | ದೊಡ್ಡೇರಿಯ ಮೇಘಶ್ರೀ ವಯನಾಡ್ ಡಿಸಿ

chitradurganews.com
Last updated: 4 August 2024 11:22
chitradurganews.com
2 years ago
Share
Wayanad Dc meghashree
ವಯನಾಡ್ ಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ
SHARE

CHITRADURGA NEWS | 04 AUGUST 2024

ಚಿತ್ರದುರ್ಗ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ, ಕಂಡು ಕೇಳರಿಯದ ದುರಂತ ಕೇರಳಾದ ವಯನಾಡ್(Wayanad) ಜಿಲ್ಲೆಯಲ್ಲಿ ನಡೆದಿದೆ. ಭಾರೀ ಮಳೆಯಿಂದ ಗುಡ್ಡ ಕುಸಿದು ನದಿಯ ದಿಕ್ಕೇ ತಪ್ಪಿ ನಾಲ್ಕು ಊರುಗಳು ಅಕ್ಷರಶಃ ಕೊಚ್ಚಿ ಹೋಗಿವೆ. ಮಳೆಯ ನೀರಿನಲ್ಲಿ ನೂರಾರು ಜನ ಹೆಣವಾಗಿ ಹೋಗಿದ್ದಾರೆ.

ಇಂತಹ ಅತೀ ದೊಡ್ಡ ದುರಂತ ನಡೆದ ಸ್ಥಳದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಜಿಲ್ಲಾಧಿಕಾರಿ ಓರ್ವ ಕನ್ನಡತಿ. ಮಾತ್ರವಲ್ಲ, ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಮನೆ ಮಗಳು ಎನ್ನುವುದು ನಮಗೆಲ್ಲಾ ಹೆಮ್ಮೆಯ ಸಂಗತಿ.

ಇದನ್ನೂ ಓದಿ: SP ಧರ್ಮೇಂದರ್ ಕುಮಾರ್ ಮೀನಾ ವರ್ಗಾವಣೆ | ಸಂಶೋಧನಾ ಸಂಸ್ಥೆಯ ವಿಜ್ಞಾನಿಯಾಗಿ ನೇಮಕ

ಕಣ್ಣೂರು, ತಿರುವನಂತಪುರ, ಕಾಸರಗೋಡಿನಲ್ಲಿ ಕೆಲಸ ಮಾಡಿರುವ ಮೇಘಶ್ರೀ, ಕೇರಳಾದ ಎಸ್ಸಿ-ಎಸ್ಟಿ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಕಳೆದ ಜುಲೈ 10 ರಂದು ವಯನಾಡ್ ಜಿಲ್ಲಾಧಿಕಾರಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಒಂದೇ ತಿಂಗಳಲ್ಲಿ ಅತೀ ದೊಡ್ಡ ದುರಂತ ಎದುರಾಗಿದ್ದು, ಜನರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದ್ದಾರೆ.

Wayanad DC Meghashree
ವಯನಾಡ್ ಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ ತಂದೆ ಮತ್ತು ಪತಿಯೊಂದಿಗೆ.

ವಯನಾಡ್ ಜಿಲ್ಲೆಯ ನಾಲ್ಕು ಗ್ರಾಮಗಳು ಕೊಚ್ಚಿ ಹೋದ ದಿನದಿಂದ ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಡಿ.ಆರ್.ಮೇಘಶ್ರೀ, ಬೆಳಗ್ಗೆ 6 ಗಂಟೆಗೆ ಸ್ಥಳಕ್ಕೆ ಬಂದವರು ಮರುದಿನ ನಸುಕಿನ ಮೂರು ಗಂಟೆವರೆಗೆ ಕಾರ್ಯಾಚರಣೆಯ ನೇತೃತ್ವ ವಹಿಸಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:  ಬಾಲ್ಯ ವಿವಾಹ ಪ್ರಕರಣ | ಎಫ್‌ಐಆರ್‌ ದಾಖಲು

ಮೃತರ ಸಾಮೂಹಿಕ ಅಂತ್ಯಕ್ರಿಯೆ ನಡೆದಾಗಲೂ ಖುದ್ದು ಹಾಜರಿದ್ದು, ಎಲ್ಲ ಕ್ರಿಯೆಗಳನ್ನು ಮಾಡಿಸುವ ಮೂಲಕ ಕನ್ನಡತನ ಮೆರೆದಿದ್ದಾರೆ. ಇಂತಹ ಬಿಕ್ಕಟ್ಟಿನ ಸಂದರ್ಭದ ಪ್ರತಿ ಕ್ಷಣವೂ ಅಮೂಲ್ಯ. ಈ ಕ್ಷಣ ಇಲ್ಲಿದ್ದು, ಸಾಧ್ಯವಾದಷ್ಟು ಜನರ ಕೆಲಸ ಮಾಡಬೇಕು ಎನ್ನುವುದು ಮೇಘಶ್ರೀ ಅಭಿಪ್ರಾಯ.

ಹೌದು ವಯನಾಡ್ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಿ.ಆರ್.ಮೇಘಶ್ರೀ ಮೂಲತಃ ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದವರು.

ಇದನ್ನೂ ಓದಿ: ಕರ್ತೃ ಗದ್ದುಗೆಗೆ ಆ್ಯಕ್ಷನ್ ಪ್ರಿನ್ಸ್‌ ನಮನ | ಮುರುಘಾ ಮಠದಲ್ಲಿ ಅಭಿಮಾನಿಗಳ ದಂಡು

ಮೇಘಶ್ರೀ ಅವರ ತಂದೆ ರುದ್ರಮುನಿ, ಎಸ್‌ಬಿಐನಲ್ಲಿ ಮುಖ್ಯ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ತಾಯಿ ರುಕ್ಮಿಣಿ ದೇವಿ.

ದೊಡ್ಡೇರಿಯಲ್ಲಿರುವ ಮೇಘಶ್ರೀ ಅವರ ತಂದೆ ರುದ್ರಮುನಿ ಮಾಧ್ಯಮದವರ ಜೊತೆಗೆ ಮಾತನಾಡಿದ್ದು, ಕಳೆದ ಸೋಮವಾರದವರೆಗೆ ನಾನು ವಯನಾಡ್‌ನಲ್ಲಿದ್ದೆ. ಅಂದು ಮಧ್ಯಾಹ್ನ ಬೆಂಗಳೂರಿಗೆ ಬಂದೆ. ಈ ಘಟನೆ ಮಧ್ಯರಾತ್ರಿ ನಡೆದಿದೆ. ಕೆಲವೇ ಕ್ಷಣಗಳಲ್ಲಿ ಮಗಳು ಮೇಘಶ್ರೀ ಸ್ಥಳಕ್ಕೆ ಧಾವಿಸಿದ್ದರು ಎಂದು ಸ್ಮರಿಸಿದರು.

ಇದನ್ನೂ ಓದಿ: ಅಭಿಮಾನಿಗೆ ಸಮಾಧಾನ ಮಾಡಿದ ಧ್ರುವ ಸರ್ಜಾ | ಸೆಲ್ಫಿ ಕ್ಲಿಕ್..ಕ್ಲಿಕ್‌

ತುರ್ತು ಪರಿಸ್ಥಿತಿಯಲ್ಲಿ ನನ್ನ ಮಗಳು ಮೇಘಶ್ರೀ ವಯನಾಡಿನ ಜನರ ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದಾಳೆ ಈ ಕ್ಷಣ ಕಷ್ಟವಾದರೂ ಹೆಮ್ಮೆ ಅನ್ನಿಸುತ್ತದೆ. ಅಲ್ಲಿನ ಪರಿಸ್ಥಿತಿ ನೆನೆಸಿಕೊಂಡಾಗ ಆತಂಕವಾಗುತ್ತದೆ. ನನ್ನ ಮಗಳ ಒತ್ತಡದ ಪರಿಸ್ಥಿತಿ ಕಂಡಾಗಲೂ ಉದ್ವಿಗ್ನಗೊಳ್ಳುತ್ತೇನೆ. ಆದರೆ, ಒಬ್ಬ ದೇಶದ ಪ್ರಜೆಯಾಗಿ ಜನ ಸಂಕಷ್ಟದಲ್ಲಿದ್ದಾಗ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿಕೊಡಬೇಕು ಎಂದು ಹೇಳಿದ್ದೇನೆ ಎಂದರು.

ವಯನಾಡಿಗೆ ಆಗಮಿಸಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಕೂಡಾ ಮೇಘಶ್ರೀ ಕರ್ತವ್ಯ ನಿಷ್ಠೆಗೆ ತಬ್ಬಿ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ವಿವಿ ಸಾಗರ | ಇಂದಿನ ಜಲಾಶಯದ ನೀರಿನ ಮಟ್ಟ ಎಷ್ಟಿದೆ

ಸದ್ಯ ನನ್ನ ಮಗಳು ಕರ್ತವ್ಯದಲ್ಲಿದ್ದು, ಮಕ್ಕಳನ್ನು ಅಳಿಯ ನೋಡಿಕೊಳ್ಳುತ್ತಿದ್ದಾರೆ. ಮೊಮ್ಮಕ್ಕಳನ್ನು ನೋಡಿಕೊಳ್ಳಲು ಮೂರು ದಿನಗಳಲ್ಲಿ ನಾನು ಅಲ್ಲಿಗೆ ತೆರಳುತ್ತೇನೆ ಎಂದು ರುದ್ರಮುನಿ ಹೇಳಿದರು.

Meghashree Family
ವಯನಾಡ್ ಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ ಅವರ ದೊಡ್ಡೇರಿ ಕುಟುಂಬ

ನೀವು ಗಾಬರಿ ಆಗಬೇಡಿ, ನಮಗೆ ಎಲ್ಲಾ ರೀತಿಯ ರಕ್ಷಣೆ ಇರುತ್ತದೆ ಎಂದು ಮೇಘಶ್ರೀ ತನ್ನ ಕುಟುಂಬಕ್ಕೆ ಹೇಳಿ ಕಾರ್ಯನಿರತರಾಗಿದ್ದಾರೆ.

ಖಾಸಗಿ ಉದ್ಯೋಗ ತೊರೆದು ಡಿಸಿಯಾದ ಮೇಘಶ್ರೀ:

ದೊಡ್ಡೇರಿಯ ಮೇಘಶ್ರೀ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಓದಿದ್ದಾರೆ. ಮರ‍್ನಾಲ್ಕು ವರ್ಷಗಳ ಕಾಲ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಆನಂತರ ಖಾಸಗಿ ಉದ್ಯೋಗ ತೊರೆದು ಐಎಎಸ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು.

ಇದನ್ನೂ ಓದಿ: ಯಾದಗಿರಿಯ PSI ಪರಶುರಾಮ್ ಸಾವು | CBI ತನಿಖೆಗೆ ವಹಿಸುವಂತೆ ಕರುನಾಡ ವಿಜಯಸೇನೆಯಿಂದ ಒತ್ತಾಯ 

2016ರಲ್ಲಿ ತಮ್ಮ ಎರಡನೇ ಪ್ರಯತ್ನದಲ್ಲೇ ಯುಪಿಎಸ್‌ಸಿ ಪರೀಕ್ಷೆ ಪಾಸ್ ಮಾಡಿದ್ದರು. ಅವರಿಗೆ ಈಗ ಎರಡೂವರೆ ವರ್ಷದ ವಿಸ್ಮಯಾ ಹಾಗೂ 6 ತಿಂಗಳ ಧೃತಿಯಾ ಎಂಬ ಇಬ್ಬರು ಮಕ್ಕಳಿದ್ದಾರೆ.

ಮೇಘಶ್ರೀ ಅವರ ಪತಿ ವಿಕ್ರಂ ಸಿಂಹ, ಹರ್ತಿಕೋಟೆ ವೀರೇಂದ್ರ ಸಿಂಹ ಅವರ ಪುತ್ರ. ಸದ್ಯ ವಿಕ್ರಂ ಸಿಂಹ ವಿಜ್ಞಾನಿಯಾಗಿದ್ದು ಕೇರಳಾದಲ್ಲೇ ನೆಲೆಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Challakere TalukChitradurga daughter MeghashreecloudburstDodderiDR Meghashreehill collapseKannada UpdatesKarnataka Latest NewsKeralaWayanadWayanad DCಕನ್ನಡ ಅಪ್ಡೇಟ್ಸ್ಕರ್ನಾಟಕ ಲೇಟೆಸ್ಟ್ ನ್ಯೂಸ್ಕೇರಳಾಗುಡ್ಡ ಕುಸಿತಚಳ್ಳಕೆರೆ ತಾಲೂಕುಚಿತ್ರದುರ್ಗದ ಮಗಳು ಮೇಘಶ್ರೀಡಿ.ಆರ್.ಮೇಘಶ್ರೀದೊಡ್ಡೇರಿಮೇಘಸ್ಪೋಟವಯನಾಡ್ವಯನಾಡ್ ಡಿಸಿ
Share This Article
Facebook Email Print
Previous Article ಭೌತಶಾಸ್ತ್ರ ವಿಷಯದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು Award; ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು | ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Next Article ಶ್ರೀ ಬೃಹನ್ಮಠ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪಾರಸ್ಕಾರ ಹೆತ್ತವರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಿ | ಡಾ.ಶ್ರೀ ಬಸವಕುಮಾರ ಸ್ವಾಮೀಜಿ
Leave a Comment

Leave a Reply Cancel reply

Your email address will not be published. Required fields are marked *

ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
ಮುಖ್ಯ ಸುದ್ದಿ
ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
ಮುಖ್ಯ ಸುದ್ದಿ
ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up