
CHITRADURGA NEWS | 08 AUGUST 2024
ಚಿತ್ರದುರ್ಗ: ಜುಲೈ 13 ರಂದು ಜರುಗಿದ ರಾಷ್ಟ್ರೀಯ ಲೋಕ ಅದಾಲತ್ (Lok Adalat) ನಲ್ಲಿ ಜಿಲ್ಲೆಯಲ್ಲಿ ಬಾಕಿ ಇದ್ದ 4,973 ವ್ಯಾಜ್ಯ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ಹೇಳಿದರು.

ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ‘1,16,278 ವ್ಯಾಜ್ಯ ಪೂರ್ವ ಪ್ರಕರಣಗಳ ಜೊತೆಗೆ, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ 10 ಜೋಡಿಗಳ ಮನ ಒಲಿಸಿ ಪುನಃ ಒಂದು ಮಾಡಲಾಗಿದೆ. ಈ ಮೂಲಕ ಕೌಟುಂಬಿಕ ವಿಘಟನೆ ತಪ್ಪಿ, ಮಕ್ಕಳಿಗೆ ತಂದೆ ತಾಯಿ ಪ್ರೀತಿ ದೊರೆಯುವಂತಾಗಿದೆ’ ಎಂದು ಅಭಿಪ್ರಾಯಪಟ್ಟರು.
‘ಸರ್ವೋಚ್ಚ ನ್ಯಾಯಾಲಯ ಸ್ಥಾಪನೆಯಾದ 75 ವರ್ಷಗಳ ಅಂಗವಾಗಿ ಜುಲೈ 29 ರಿಂದ ಆಗಸ್ಟ್ 3ರವರೆಗೆ ವಿಶೇಷ ಲೋಕ ಆದಲಾತ್ ಆಯೋಜಿಸಲಾಗಿತ್ತು. ಇದರಲ್ಲಿ ಸರ್ವೋಚ್ಚ ನ್ಯಾಯಾಲಯದ ಮುಂದಿರುವ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲು ಕೈಗೆತ್ತಿಕೊಳ್ಳಲಾಗಿತ್ತು. ಜಿಲ್ಲೆಗೆ ಸಂಬಂಧಿಸಿದಂತೆ 22 ಪ್ರಕರಣಗಳನ್ನು ಸಂಧಾನಕ್ಕಾಗಿ ಗುರುತಿಸಲಾಗಿತ್ತು. ಇದರಲ್ಲಿ 3 ಪ್ರಕರಣಗಳು ಇತ್ಯರ್ಥಗೊಂಡು ಸುಖಾಂತ್ಯ ಕಂಡಿವೆ. ಇದೊಂದು ದಾಖಲೆಯ ಮೈಲುಗಲ್ಲಾಗಿದೆ’ ಎಂದು ಹೇಳಿದರು.

‘ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಪಕ್ಷಗಾರರು ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭ ಹಾಗೂ ಶೀಘ್ರವಾಗಿ ಯಾವುದೇ ಶುಲ್ಕ, ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು. ಅದಾಲತ್‌ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗ, ಕಾರ್ಮಿಕ, ವೇತನ, ವಿದ್ಯುತ್, ನೀರು ಇತರೆ ಸೇವಾ ಶುಲ್ಕದ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅವಕಾಶವಿದೆ’ ಎಂದರು.
‘ನ್ಯಾಯಾಲಯದ ವ್ಯಾಜ್ಯದಲ್ಲಿರುವ ನಾನ್ ಕಾಂಪೌಡಬಲ್ ಹಾಗೂ ಗಂಭೀರ ತರದ ಅಪರಾಧಿಕ ಪ್ರಕರಣಗಳನ್ನು ಹೊರತು ಪಡಿಸಿ, ಇತರೆ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಬಹುದು. ಕಕ್ಷಿದಾರರು ನೇರವಾಗಿ ಅಥವಾ ವಕೀಲರ ಮೂಲಕ ಅದಾಲತ್‌ನಲ್ಲಿ ಭಾಗವಹಿಸಬಹುದು’ ಎಂದು ತಿಳಿಸಿದರು.
‘ಸಾರ್ವಜನಿಕರು ಲೋಕ ಅದಾಲತ್ ಕುರಿತು ಹೆಚ್ಚಿನ ಪ್ರಶ್ನೆ ಮತ್ತು ಮಾಹಿತಿ ಬೇಕಾದಲ್ಲಿ ಇ-ಮೇಲ್ dlsachitradurga2@gmail.com ಹಾಗೂ ಸದಸ್ಯ ಕಾರ್ಯದರ್ಶಿ ಕಚೇರಿ ಮೊಬೈಲ್ ಸಂಖ್ಯೆ 9141193935 ಹಾಗೂ ದೂರವಾಣಿ ಸಂಖ್ಯೆ 08194- 222322 ಸಂಪರ್ಕಿಸಬಹುದು’ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ವಿಜಯ್ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
