
CHITRADURGA NEWS | 20 AUGUST 2024
ಚಿತ್ರದುರ್ಗ: ಸೋಮವಾರ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ 29.6 ಮಿ.ಮೀ ಮಳೆ(Rain)ಯಾಗಿದ್ದು, ಇದು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಮಳೆಯಾಗಿದೆ.
ಕ್ಲಿಕ್ ಮಾಡಿ ಓದಿ: South Western Railway: ನೈರುತ್ಯ ರೈಲ್ವೆಗೆ ಬಂಪರ್ | ವೇಗ ಪಡೆಯಲಿದೆ ನೇರ ಮಾರ್ಗ ಕಾಮಗಾರಿ
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 12.6 ಮಿ.ಮೀ, ನಾಯಕನಹಟ್ಟಿ 10.5 ಮಿ.ಮೀ, ತಳಕು 15.7 ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 7.5 ಮಿ.ಮೀ, ಭರಮಸಾಗರ 5.2 ಮಿ.ಮೀ, ಹಿರೇಗುಂಟನೂರು 6.5 ಮಿ.ಮೀ, ತುರುವನೂರು 15 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 12.3 ಮಿ.ಮೀ, ಐಮಂಗಲ 11.4 ಮಿ.ಮೀ, ಧರ್ಮಪುರ 19.7 ಮಿ.ಮೀ, ಜೆ.ಜೆ.ಹಳ್ಳಿ 14 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 6.2 ಮಿ.ಮೀ, ಬಿ.ದುರ್ಗ 6.6 ಮಿ.ಮೀ, ರಾಮಗಿರಿ 4.4 ಮಿ.ಮೀ, ತಾಳ್ಯ 3.2 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 9.7 ಮಿ.ಮೀ, ಮಾಡದಕೆರೆ 9 ಮಿ.ಮೀ, ಮತ್ತೋಡು 11.2 ಮಿ.ಮೀ, ಶ್ರೀರಾಂಪುರ 26 ಮಿ.ಮೀ ಮಳೆಯಾಗಿದೆ.
ಕ್ಲಿಕ್ ಮಾಡಿ ಓದಿ: council election: ಪೈಪೋಟಿ ನಡುವೆ ಅವಿರೋಧ ಆಯ್ಕೆ | ನಗರಸಭೆಯಲ್ಲಿ ಒಗ್ಗಟ್ಟು ಪ್ರದರ್ಶನ
ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರುನಲ್ಲಿ 3.1 ಮಿ.ಮೀ ಹಾಗೂ ದೇಮಸಮುದ್ರದಲ್ಲಿ 5.4 ಮಿ.ಮೀ ಮಳೆಯಾಗಿದೆ.
1 ಜೀವಹಾನಿ, 31 ಮನೆಗಳು ಭಾಗಶಃ ಹಾನಿ:
ಸೋಮವಾರ ಸುರಿದ ಮಳೆಗೆ 1 ಜೀವಹಾನಿ ಹಾಗೂ ಜಿಲ್ಲೆಯಾದ್ಯಂತ ಒಟ್ಟು 31 ಮನೆಗಳು ಭಾಗಶಃ ಹಾನಿ, 3 ಹೆಕ್ಟೇರ್ ತೋಟಗಾರಿಕೆ ಬೆಳೆ, 1.6 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 12 ಮನೆಗಳು ಭಾಗಶಃ ಹಾನಿ, ಚಳ್ಳಕೆರೆ ತಾಲ್ಲೂಕಿನಲ್ಲಿ 5 ಮನೆಗಳು ಭಾಗಶಃ ಹಾನಿ ಹಾಗೂ 3 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿ, 1 ಜೀವಹಾನಿಯಾಗಿದೆ.
ಹೊಸದುರ್ಗ ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿವೆ. ಹಿರಿಯೂರು ತಾಲ್ಲೂಕಿನಲ್ಲಿ 8 ಮನೆಗಳು ಭಾಗಶಃ ಹಾನಿಯಾಗಿದ್ದು, 1.61 ಹೆಕ್ಟೇರ್ ಕೃಷಿ ಬೆಳೆಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
