
CHITRADURGA NEWS | 21 AUGUST 2024
ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಮಂಗಳವಾರ ತಡರಾತ್ರಿ ಸುರಿದ ಮಳೆಗೆ ಕೋರ್ಟ್ ಆವರಣದಲ್ಲಿದ್ದ ಬೃಹದಾಕಾರದ ಬೇವಿನ ಮರವೊಂದು ಧರೆಗುರುಳಿದೆ (Rain Damage).
ಜಿಲ್ಲಾ ನ್ಯಾಯಾಲಯದ ಬಲ ಭಾಗದಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸುತ್ತಿದ್ದ ಜಾಗದಲ್ಲಿದ್ದ ಬೇವಿನ ಮರ ಬೇರುಸಹಿತ ನೆಲಕ್ಕುರುಳಿದೆ.
ಇದನ್ನೂ ಓದಿ: ರಾತ್ರೋರಾತ್ರಿ ಕಣ್ಮುಚ್ಚಿ ಸುರಿದ ಮಳೆ | ಕೋಡಿ ಬಿದ್ದ ಕೆರೆಗಳು ಗ್ರಾಮಗಳು ಜಲಾವೃತ
ಮರದ ಕೆಳಗೆ ನಿಲ್ಲಿಸಿದ್ದ ಕಾರು ಹಾಗೂ ಟೆಂಪೊ ಮಾದರಿಯ ವಾಹನಗಳ ಮೇಲೆ ಮರ ಬಿದ್ದಿದ್ದು, ಎರಡೂ ವಾಹನ ಜಖಂ ಆಗಿವೆ.

ಇಲ್ಲಿಂದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಇದ್ದ ಕೆಲ ಕೇಬಲ್ ಸಂಪರ್ಕಗಳು ಕೂಡಾ ತುಂಡಾಗಿವೆ. ರಾತ್ರಿ ಮರ ಉರುಳಿದ್ದರಿಂದ ಹೆಚ್ಚಿನ ಅವಘಡ ಸಂಭವಿಸಿಲ್ಲ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
