By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Rain problem: ಆಯಿಲ್‌ಸಿಟಿಗೆ ವರುಣಾಘಾತ | ನೀರಿನಲ್ಲೇ ನಿಂತು ರಾತ್ರಿ ಕಳೆದ ಜನರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Rain problem: ಆಯಿಲ್‌ಸಿಟಿಗೆ ವರುಣಾಘಾತ | ನೀರಿನಲ್ಲೇ ನಿಂತು ರಾತ್ರಿ ಕಳೆದ ಜನರು

ಮುಖ್ಯ ಸುದ್ದಿ

Rain problem: ಆಯಿಲ್‌ಸಿಟಿಗೆ ವರುಣಾಘಾತ | ನೀರಿನಲ್ಲೇ ನಿಂತು ರಾತ್ರಿ ಕಳೆದ ಜನರು

News Desk Chitradurga News
Last updated: 21 August 2024 14:01
News Desk Chitradurga News
10 months ago
Share
CLK
ಜಲಾವೃತಗೊಂಡ ಚಳ್ಳಕೆರೆ ನಗರದ ರಹೀಂ ನಗರ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 21 AUGUST 2024
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ನಗರಕ್ಕೆ ವರುಣಾಘಾತವಾಗಿದ್ದು, ಜನರು ತಲ್ಲಣಿಸಿದ್ದಾರೆ.  ನೀರಿನಲ್ಲೇ ನಿಂತು ರಾತ್ರಿ ಕಳೆದಿದ್ದಾರೆ.

ಚಳ್ಳಕೆರೆ ನಗರದ ತಗ್ಗು ಪ್ರದೇಶದ ನಿವಾಸಿಗಳ ಗೋಳು ಕೇಳುವವರು ಇಲ್ಲವಾಗಿದೆ‌. ರಾಜ‌ಕಾಲುವೆ ಅಕ್ಕ ಪಕ್ಕದ ನಿವಾಸಿಗಳು ಅಂಗೈಯಲ್ಲಿ ಜೀವ ಹಿಡಿದುಕೊಂಡು ಇಡೀ ರಾತ್ರಿ ನಿದ್ದೆಯಿಲ್ಲದೆ ಕಾಲ ದೂಡಿದ್ದಾರೆ. ರಹೀಂ ನಗರ, ಸೂಜಿಮಲ್ಲೇಶ್ವರ ನಗರ, ಹಳೆ ನಗರ, ಕಾಟಪನಹಟ್ಟಿ, ಅಂಬೇಡ್ಕರ್ ನಗರ, ಪಾವಗಡ ರಸ್ತೆ ಹೀಗೆ ಅನೇಕ ಕಡೆ ನಿವಾಸಿಗಳ ಪಾಡು ಹೇಳತೀರದಾಗಿದೆ.

ಕ್ಲಿಕ್ ಮಾಡಿ ಓದಿ: ಚಿತ್ರದುರ್ಗದ ಈ ಗ್ರಾಮಕ್ಕೆ ರಾಜ್ಯದಲ್ಲೇ ಅತಿ ಹೆಚ್ಚು ಮಳೆ | ತುಂಬಿ ಹರಿದ ಹಳ್ಳಕೊಳ್ಳ

ರಾಜಕಾಲುವೆಯಲ್ಲಿ ಸ್ವಚ್ಚತೆ ಇಲ್ಲದೆ ಗಿಡಗಂಟೆ ಬೆಳೆದು ಮಳೆಯ ನೀರು ಮುಂದಕ್ಕೆ ಸಾಗದೆ ಮನೆಗಳಿಗೆ ನೀರು‌ ನುಗ್ಗಿ ಅವಾಂತರ ಸೃಷ್ಟಿಸಿದೆ. ಮನೆಯಲ್ಲಿರುವ ದವಸ ಧಾನ್ಯ ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿ ಹೋಗಿವೆ.

ನಗರ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ‌ ಸಾವರರು ಪರದಾಡುವಂತಾಯಿತು. ಪಾವಗಡರಸ್ತೆಯ ನೀಲಕಂಠೇಶ್ವರ ದೇವಸ್ಥಾನ ಸಮೀಪ ರಸ್ತೆ ಮೇಲೆ ನೀರು ಹರಿದ ಕಾರಣ ರಸ್ತೆ ಬಂದ್ ಆಗಿದೆ. ಕಾಟಪನಹಟ್ಟಿಗೆ ಹೋಗುವ ಪಾದಗಟ್ಟೆ‌ ಸಮೀಪದ ಹಳ್ಳ ತುಂಬಿ ಹರಿದ ಪರಿಣಾಮ ರಸ್ತೆಯನ್ನು ತಾತ್ಕಾಲಿಕ ಬಂದ್‌ ಮಾಡಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BandhNightOil CitypeopleRajkaluveVarunaghataWatershedಆಯಿಲ್‌ಸಿಟಿಜನರುಜಲಾವೃತಬಂದ್ರಾಜಕಾಲುವೆರಾತ್ರಿವರುಣಾಘಾತ
Share This Article
Facebook Email Print
Previous Article beadaredi hall Heavy rain: ಚಿತ್ರದುರ್ಗದ ಈ ಗ್ರಾಮಕ್ಕೆ ರಾಜ್ಯದಲ್ಲೇ ಅತಿ ಹೆಚ್ಚು ಮಳೆ | ತುಂಬಿ ಹರಿದ ಹಳ್ಳಕೊಳ್ಳ
Next Article Holalkere Police station Students missing: ಆತಂಕ ಮೂಡಿಸಿದ 6 ವಿದ್ಯಾರ್ಥಿಗಳ ನಾಪತ್ತೆ ಪ್ರಕರಣ | ವಸತಿ ಶಾಲೆಯಿಂದ ಬೆಳಗ್ಗೆ ತೆರಳಿದ್ದ ಮಕ್ಕಳು | ಬೆಂಗಳೂರಿನಲ್ಲಿ ಪತ್ತೆ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up