
CHITRADURGA NEWS | 23 AUGUST 2024
ಚಿತ್ರದುರ್ಗ: ವಾಣಿವಿಲಾಸ ಸಾಗರ (VaniVilasa Sagara) ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಾಗಿದ್ದು, ಆಗಸ್ಟ್ 23 ಶುಕ್ರವಾರ ಬೆಳಗ್ಗೆ 8 ಗಂಟೆಗೆ ನಡೆಸಿದ ಮಾಪನದ ವೇಳೆ ಬರೋಬ್ಬರಿ 2195 ಕ್ಯೂಸೆಕ್ ನೀರು ಹರಿದು ಬಂದಿದೆ.
ದಿನೇ ದಿನೇ ವಿವಿಸಾಗರಕ್ಕೆ ಹರಿಯುವ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಭದ್ರಾ ಜಲಾಶಯದಿಂದ 700 ಕ್ಯೂಸೆಕ್ ನೀರಿನ ಜೊತೆಗೆ ಎತ್ತಿನ ಹೊಳೆಯಿಂದ ಪ್ರಾಯೋಗಿಕವಾಗಿ ಹರಿಸುವ ನೀರು ಕೂಡಾ ಈಗ ವಿವಿ ಸಾಗರದತ್ತ ಮುಖ ಮಾಡಿದೆ.
ಇದನ್ನೂ ಓದಿ: ದಿನ ಭವಿಷ್ಯ | 23 ಆಗಸ್ಟ್ | ಚಿತ್ರದುರ್ಗ ನ್ಯೂಸ್
130 ಅಡಿ ಎತ್ತರದ ವಾಣಿವಿಲಾಸ ಸಾಗರ ಜಲಾಶಯದಲ್ಲಿ ಸದ್ಯ 117.70 ಅಡಿವರೆಗೆ ನೀರು ಬಂದಿದೆ. 30 ಟಿಎಂಸಿ ಅಡಿ ಸಾಮಥ್ರ್ಯದ ಜಲಾಶಯದಲ್ಲಿ ಈಗ 20.59 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 122.95 ಅಡಿ ನೀರಿತ್ತು. ಕಳೆದ ವರ್ಷ ಜಲಾಶಯದಲ್ಲಿ 24.51 ಟಿಎಂಸಿ ಅಡಿ ನೀರಿನ ಸಂಗ್ರಹವಿತ್ತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
