
CHITRADURGA NEWS |07 SEPTEMBER 2024
ಚಿತ್ರದುರ್ಗ: ರಸ್ತೆ ಬದಿಯಲ್ಲಿ ಎರಡು ವರ್ಷದ ಪುಟಾಣಿ ಮಗು ಪತ್ತೆಯಾಗಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ.
ಹಿರಿಯೂರು ತಾಲ್ಲೂಕಿನ ಆಲೂರು ಕ್ರಾಸ್ ಸಮೀಪದಲ್ಲಿ ಎರಡು ವರ್ಷ ಗಂಡು ಮಗು ಪತ್ತೆಯಾಗಿದೆ. ಮಗುವನ್ನು ಬಿಟ್ಟು ಪೋಷಕರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಮಗುವಿನ ಹೆಸರು, ವಿಳಾಸ ತಿಳಿದು ಬಂದಿಲ್ಲ. ಆದರೆ ಮಗುವಿನ ಜೊತೆ ಅದೇ ಸ್ಥಳದಲ್ಲಿ ಫ್ಯಾಶನ್ ಪ್ರೋ ಬೈಕ್ ಕೂಡಾ ಪತ್ತೆಯಾಗಿದೆ. ಸ್ಥಳೀಯರು ಮಗುವಿನ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕ್ಲಿಕ್ ಮಾಡಿ ಓದಿ: ದಶಾವತಾರ ಮಂಟಪದಲ್ಲಿ ಹಿಂದೂ ಮಹಾ ಗಣಪತಿ ವಿರಾಜಮಾನ | ಮೊಳಗಿದ ಹರ್ಷೋದ್ಘಾರ
ಕೂಡಲೇ ಸ್ಥಳಕ್ಕಾಗಮಿಸಿದ ಹಿರಿಯೂರು ನಗರ ಠಾಣೆ ಪಿಐ ರಾಘವೇಂದ್ರ ಕಾಂಡಿಕೆ ಬೈಕ್ ಹಾಗೂ ಮಗುವನ್ನು ರಕ್ಷಣೆ ಮಾಡಿದ್ದಾರೆ. ಕುಡಿದ ಮತ್ತಿನಲ್ಲಿ ಮಗುವಿನ ತಂದೆ ಬಿಟ್ಟು ಹೋಗಿರುವ ಅನುಮಾನ ವ್ಯಕ್ತವಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಮಗುವಿದ್ದು, ಪೋಷಕರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
