CHITRADURGA NEWS | 13 SEPTEMBER 2024
ಚಿತ್ರದುರ್ಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ(Democracy Day) ಹಿನ್ನೆಲೆಯಲ್ಲಿ ಸೆ.15 ರಂದು ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹಿರಿಯೂರು ಮಾರ್ಗದಲ್ಲಿ ಸು.140 ಕಿ.ಮೀ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕ್ಲಿಕ್ ಮಾಡಿ ಓದಿ: TEMPLE: ವದ್ದಿಕೆರೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಹುಂಡಿ ಎಣಿಕೆ | 96.32 ಲಕ್ಷ ರೂ.ಸಂಗ್ರಹ
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸ್ವ-ಸಹಾಯ ಸಂಘಗಳ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.
ಮಾನವ ಸರಪಳಿ ರಚನೆಯನ್ನು ಮೊಳಕಾಲ್ಮೂರು ತಾಲ್ಲೂಕಿನ ತಮ್ಮೇನಹಳ್ಳಿ ಗೇಟ್ನಿಂದ, ಹಿರಿಯೂರು ನಗರದ ಟಿ.ಬಿ.ವೃತ್ತದವರಗೆ ಹಾದು ಹೊಗಿರುವ ರಾಷ್ಟ್ರೀಯ ಹೆದ್ದಾರಿ 150(ಎ) ಹಾಗೂ ಹಿರಿಯೂರು ನಗರದ ಟಿ.ಬಿ ವೃತ್ತದಿಂದ ಜೆ.ಜೆ.ಹಳ್ಳಿ ಬಾರ್ಡರ್ ವರೆಗೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಸ್ತೆಗಳ ಎಡಭಾಗದಲ್ಲಿ ನಿರ್ಮಾಣ ಮಾಡಲಾಗುವುದು.
ಕ್ಲಿಕ್ ಮಾಡಿ ಓದಿ: DCC ಬ್ಯಾಂಕ್ ಅಧ್ಯಕ್ಷ ಸ್ಥಾನ | ಅವಿರೋಧವಾಗಿ ಆಯ್ಕೆ ಆಗ್ತಾರಾ ಡಿ.ಸುಧಾಕರ್ !
ಈ ಕಾರಣದಿಂದ ಸಾರ್ವಜನಿಕರ ಸುರಕ್ಷತೆ, ವಾಹನ ಸುಗಮ ಸಂಚಾರದ ದೃಷ್ಠಿಯಿಂದ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹಿರಿಯೂರು ಮಾರ್ಗದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೆ.15 ರಂದು ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಗಯವರೆಗೆ ಎಡ ಭಾಗದಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿರ್ಬಂಧಿಸಿ(restriction) ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
