ಮುಖ್ಯ ಸುದ್ದಿ
BJP Protest; ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಚಿತ್ರದುರ್ಗ ಬಿಜೆಪಿಯಿಂದ ಪ್ರತಿಭಟನೆ
CHITRADURGA NEWS | 25 SEPTEMBER 2024
ಚಿತ್ರದುರ್ಗ: ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಲುಕಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಚಿತ್ರದುರ್ಗ ಬಿಜೆಪಿ(BJP) ಘಟಕದಿಂದ ನಗರದ ಒನಕೆ ಓಬವ್ವ ವೃತ್ತದಲ್ಲಿ ಬುಧವಾರ ಪ್ರತಿಭಟನೆ(protest) ನಡೆಸಲಾಯಿತು.
ಕ್ಲಿಕ್ ಮಾಡಿ ಓದಿ: Cyber ಪೊಲೀಸರ ಕಾರ್ಯಾಚರಣೆ | ಅಂತಾರಾಜ್ಯ ಡ್ರಗ್ಸ್ ಪೆಡ್ಲರ್ ಬಂಧನ
ಪ್ರತಿಭಟನೆಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿ, ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದನ್ನು ಎತ್ತಿ ಹಿಡಿದಿರುವ ಹೈಕೋರ್ಟ್ ತನಿಖೆ ನಡೆಸುವಂತೆ ತೀರ್ಪು ನೀಡಿದ್ದರು, ಸಿದ್ದರಾಮಯ್ಯ ಭಂಡತನ ತೋರುವ ಬದಲು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು.
ಸ್ವಾರ್ಥ ಕುಟುಂಬ ರಾಜಕಾರಣಕ್ಕೆ ಬಲಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲವೆಂದು ಎಲ್ಲವನ್ನು ಸಮರ್ಥಿಸಿಕೊಳ್ಳುವುದು ಸರಿಯಲ್ಲ. ಏನಿದ್ದರೂ ಕಾನೂನು ಮೂಲಕ ಹೋರಾಟ ನಡೆಸಿ ನಿರಪರಾಧಿ ಎನ್ನುವುದನ್ನು ಸಾಬೀತುಪಡಿಸಲಿ ಎಂದರು.
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ಮೂಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ಸಿಕ್ಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಲಿತರ ಪರ ಎಂದು ಹೇಳಿಕೊಳ್ಳುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಕಲ್ಯಾಣಕ್ಕಾಗಿ ಬಳಸಬೇಕಾಗಿದ್ದ 24 ಸಾವಿರ ಕೋಟಿ ರೂ.ಗಳನ್ನು ಅನ್ಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಂಡಿರುವುದರಿಂದ ಕೂಡಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸಿದರು.
ಕ್ಲಿಕ್ ಮಾಡಿ ಓದಿ: Sasvehalli irrigation: ಶಿವಕುಮಾರ ಸ್ವಾಮೀಜಿ ಹುಟ್ಟೂರು ಮುತ್ತುಗದೂರು ಕೆರೆಗೆ ಹರಿದ ಭದ್ರೆ | ಭಕ್ತರಲ್ಲಿ ಸಂಭ್ರಮ
ಕರ್ನಾಟಕ ವಾಲ್ಮೀಕಿ ಅಭಿವೃದ್ದಿ ನಿಗಮದ 187 ಕೋಟಿ ರೂ.ಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ಆಂಧ್ರ ಚುನಾವಣೆಗೆ ಖರ್ಚು ಮಾಡಿದ್ದಾರೆ. ಬಳ್ಳಾರಿಯ ಚುನಾವಣೆಗೂ ಈ ಹಣ ಬಳಕೆಯಾಗಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುವ ಅರ್ಹತೆಯಿಲ್ಲ. ರಾಜೀನಾಮೆ ಕೊಡುವತನಕ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್, ಜಿ.ಟಿ.ಸುರೇಶ್ ಸಿದ್ದಾಪುರ, ಯುವ ಮುಖಂಡರುಗಳಾದ ಡಾ.ಸಿದ್ದಾರ್ಥ, ಜಿ.ಎಸ್.ಅನಿತ್‍ಕುಮಾರ್, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ವಕ್ತಾರ ನಾಗರಾಜ್ ಬೇಂದ್ರೆ ಸೇರಿದಂತೆ ಇತರರು ಭಾಗವಹಿಸಿದ್ದರು.