ಮುಖ್ಯ ಸುದ್ದಿ
Support; ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಶೋಷಿತ ಸಮುದಾಯ, ಹಿಂದುಳಿದ ವರ್ಗಗಳಿಂದ ಧರಣಿ
CHITRADURGA NEWS | 25 SEPTEMBER 2024
ಚಿತ್ರದುರ್ಗ: ಮುಖ್ಯಮಂತ್ರಿ(CM) ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಬಿಜೆಪಿ(BJP), ಜೆಡಿಎಸ್(JDS) ಕುತಂತ್ರ, ರಾಜ್ಯಪಾಲ(Governor)ರ ನಡೆ ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ನಗರದ ಅಂಬೇಡ್ಕರ್ ಪ್ರತಿಮೆ ಎದುರು ಬುಧವಾರ ಧರಣಿ ನಡೆಸಲಾಯಿತು.
ಕ್ಲಿಕ್ ಮಾಡಿ ಓದಿ: BJP Protest; ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಚಿತ್ರದುರ್ಗ ಬಿಜೆಪಿಯಿಂದ ಪ್ರತಿಭಟನೆ
ತೋಳಿಗೆ ಕಪ್ಪುಪಟ್ಟಿ ಧರಿಸಿದ್ದ ಪ್ರತಿಭಟನಾಕಾರರು ಬಿಜೆಪಿ, ಜೆಡಿಎಸ್ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಈ ವೇಳೆ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್ ಮಾತನಾಡಿ, 5 ಉಚಿತ ಗ್ಯಾರೆಂಟಿಗಳನ್ನು ರಾಜ್ಯದ ಜನತೆಗೆ ನೀಡಿ ನುಡಿದಂತೆ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮ್ಯನವರಿಗೆ ವಿನಾ ಕಾರಣ ತೊಂದರೆ ಕೊಡಬೇಕೆಂದು ಬಿಜೆಪಿ ಮತ್ತು ಜೆಡಿಎಸ್ ಷಡ್ಯಂತ್ರ ನಡೆಸುತ್ತಿದೆ.
ಪ್ರಜಾಪ್ರಭುತ್ವದಲ್ಲಿ ಕಾನೂನು ಮತ್ತು ಮಾನವೀಯತೆ ಎರಡು ಸಮನಾಗಿದೆ. 99 ಅಪರಾಧಿಗಳಿಗೆ ಶಿಕ್ಷೆಯಾಗಲಿ. ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು. ಶೋಷಿತ ಸಮುದಾಯ ಹಾಗೂ ಅಹಿಂದ ಜಾತಿಗಳು ಸಿದ್ದರಾಮಯ್ಯನವರ ಬೆನ್ನಿಗೆ ನಿಂತಿದೆ ಎಂದು ಹೇಳಿದರು.
ಕ್ಲಿಕ್ ಮಾಡಿ ಓದಿ: Cyber ಪೊಲೀಸರ ಕಾರ್ಯಾಚರಣೆ | ಅಂತಾರಾಜ್ಯ ಡ್ರಗ್ಸ್ ಪೆಡ್ಲರ್ ಬಂಧನ
ಮೂಡಾ, ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲದಿದ್ದರೂ ಕೋಮುವಾದಿ ಬಿಜೆಪಿಯವರು ಎಲ್ಲಿ ತಮ್ಮ ಹಗರಣಗಳು ಬಯಲಾಗುತ್ತವೋ ಎನ್ನುವ ಆತಂಕದಿಂದ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಂಡು ಕಿರುಕುಳ ಕೊಡುತ್ತಿದ್ದಾರೆ. ಕಾನೂನು ರೀತಿಯ ಹೋರಾಟದಲ್ಲಿ ಸಿದ್ದರಾಮಯ್ಯನವರು ಗೆಲ್ಲುತ್ತಾರೆಂಬ ವಿಶ್ವಾಸವಿದೆ ಎಂದರು.
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ನವರ ಕುತಂತ್ರದಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೊಂದರೆ ಅನುಭವಿಸುವಂತಾಗಿದೆ. ಅಧಿಕಾರದಲ್ಲಿದ್ದಾಗ ವಿರೋಧಿಗಳು ಎಲ್ಲರ ಮೇಲೂ ಆರೋಪ ಹೊರಿಸುವುದು ಸಹಜ. ಅದೇ ರೀತಿ ಈಗಿನ ಮುಖ್ಯಮಂತ್ರಿಯ ವಿರುದ್ದವೂ ಪಿತೂರಿ ನಡೆಯುತ್ತಿದೆ ಎಂದು ಹೇಳಿದರು.
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಟಿ.ಜಗದೀಶ್ ಮಾತನಾಡಿ, ದೇಶದ ಯಾವ್ಯಾವ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆಯೋ ಅಲ್ಲೆಲ್ಲಾ ಪ್ರಧಾನಿ ಮೋದಿ ಖ್ಯಾತೆ ಮಾಡುತ್ತಿರುವುದೆ ಸಾಧನೆಯಾಗಿದೆ. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲರನ್ನು ಜೈಲಿಗೆ ಕಳಿಸಿದರು. ತಮಿಳುನಾಡು, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಅಸ್ಥಿತರಗೊಳಿಸಿ ವಾಮ ಮಾರ್ಗದಲ್ಲಿ ಬಿಜೆಪಿ ಅಧಿಕಾರ ಹಿಡಿಯುತ್ತಿದೆ.
ಮಹಾರಾಷ್ಟ್ರದಲ್ಲಿ ಬಹುಮತವಿದ್ದ ಕಾಂಗ್ರೆಸ್ ಸರ್ಕಾರವನ್ನು ಕೆಡವಿದ ಬಿಜೆಪಿ ವಿರುದ್ದ ನಮ್ಮ ಹೋರಾಟ ನಿರಂತರವಾಗಿರುತ್ತದೆಂದು ಎಚ್ಚರಿಸಿದರು.
ಕ್ಲಿಕ್ ಮಾಡಿ ಓದಿ: Sasvehalli irrigation: ಶಿವಕುಮಾರ ಸ್ವಾಮೀಜಿ ಹುಟ್ಟೂರು ಮುತ್ತುಗದೂರು ಕೆರೆಗೆ ಹರಿದ ಭದ್ರೆ | ಭಕ್ತರಲ್ಲಿ ಸಂಭ್ರಮ
ದೇಶದಲ್ಲಿ ಪ್ರಜಾಪ್ರಭುತ್ವ ಸಂವಿಧಾನ ಉಳಿಯಬೇಕಾದರೆ ಕೇಂದ್ರ ಎನ್‍ಡಿಎ ಸರ್ಕಾರವನ್ನು ಕಿತ್ತೊಗೆಯಬೇಕು. ಯಾವ ತಪ್ಪು ಮಾಡದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಕೆ ರಾಜೀನಾಮೆ ಕೊಡಬೇಕು. ಅಹಿಂದ, ಶೋಷಿತ ಸಮುದಾಯಗಳು ಘೋರ ಪ್ರತಿಭಟನೆ ನಡೆಸಬೇಕಾಗುತ್ತದೆಂದು ಹೇಳಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಮಂಜಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪರಿಶಿಷ್ಟ ವರ್ಗ ವಿಭಾಗದ ಅಧ್ಯಕ್ಷ ಮಂಜುನಾಥ್, ಎಸ್ಸಿ ವಿಭಾಗದ ಉಪಾಧ್ಯಕ್ಷ ಡಿ.ಕುಮಾರ್ ಪಿಳ್ಳೆಕೆರನಹಳ್ಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತನಂದಿನಿಗೌಡ ಅನೇಕರು ಭಾಗವಹಿಸಿದ್ದರು.