By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
    ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
    4 hours ago
    ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ
    ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
    16 hours ago
    ಶಾಸಕರಾದ ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಪ್ರಗತಿ ಪರಿಶೀಲನಾ ಸಭೆಯ ಸಿದ್ಧತೆ ಪರಿಶೀಲನೆ
    ಬರದ ನಾಡಲ್ಲಿ ಮುಖ್ಯಮಂತ್ರಿ ಪ್ರಗತಿ ಪರಿಶೀಲನಾ ಸಭೆ | ಅನುಭವ ಮಂಟಪದಲ್ಲಿ ಭರದ ತಯಾರಿ
    16 hours ago
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    1 day ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 days ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 weeks ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಶುಭ ಸುದ್ದಿ
    5 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    1 day ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    3 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 23 | ಹತ್ತಿ ರೇಟ್ ಎಷ್ಟಿದೆ?
    21 hours ago
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    4 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    4 hours ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    5 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    6 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    6 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    endometrial cancer that plague women
    ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
    4 hours ago
    cow's milk to children
    ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
    5 hours ago
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    1 day ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    1 day ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    2 days ago
Reading: Narendra modi: 2027ಕ್ಕೆ ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪೂರ್ಣ | ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Narendra modi: 2027ಕ್ಕೆ ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗ ಪೂರ್ಣ | ಪ್ರಧಾನಿ ನರೇಂದ್ರ ಮೋದಿಯಿಂದ ಉದ್ಘಾಟನೆ

chitradurganews.com
Last updated: 3 October 2024 00:07
chitradurganews.com
2 years ago
Share
V.Somanna railway meating
ಅಧಿಕಾರಿಗಳ ಸಭೆ
SHARE

CHITRADURGA NEWS | 02 october 2024

ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಹಾಗೂ ಪಾವಗಡ-ರಾಯದುರ್ಗ ನೂತನ ರೈಲ್ವೆ ಯೋಜನೆ 2027ರ ಜನವರಿಯೊಳಗೆ ಪೂರ್ಣಗೊಂಡು ಲೋಕಾರ್ಪಣೆಯಾಗಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ತುಮಕೂರು-ಚಿತ್ರದುರ್ಗ-ದಾವಣಗೆರೆ ಹಾಗೂ ರಾಯದುರ್ಗ-ಪಾವಗಡ ನೂತನ ರೈಲ್ವೆ ಮಾರ್ಗಗಳ ಭೂಸ್ವಾಧೀನ ಪ್ರಕ್ರಿಯೆ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಇದನ್ನೂ ಓದಿ: ಕೆರೆಗಳಿಗೆ ನೀರು ತುಂಬಿಸುವುದು ನನ್ನ ಮೊದಲ ಆದ್ಯತೆ | ಶಾಸಕ ಎಂ.ಚಂದ್ರಪ್ಪ

2140 ಕೋಟಿ ರೂ. ವೆಚ್ಚದಲ್ಲಿ ನೂತನ ರೈಲ್ವೆ ಮಾರ್ಗಗಳ ನಿರ್ಮಾಣ ಕಾರ್ಯಕ್ಕೆ ಯೋಜನೆ ರೂಪಿಸಲಾಗಿದೆ. ಈ ಮೊದಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಶೇ.50-50ರ ಅನುಪಾತದಲ್ಲಿ ಯೋಜನೆ ಜಾರಿಗೊಳಿಸುವ ತೀರ್ಮಾನಿಸಲಾಗಿತ್ತು. ಇದನ್ನು ಬದಲಿಸಿ ರಾಜ್ಯ ಸರ್ಕಾರ ಭೂ ಸ್ವಾಧೀನ ವೆಚ್ಚವನ್ನು ಭರಿಸಿ, ಯೋಜನೆಗೆ ಭೂಮಿ ಹಸ್ತಾಂತರಿಸಿದರೆ ರೈಲ್ವೆ ಇಲಾಖೆಯಿಂದಲೇ ಯೋಜನೆಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.

Davangere, Chitradurga and Tumkur direct train route
ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ನೇರ ರೈಲು ಮಾರ್ಗ

ಎರಡು ನೂತನ ರೈಲ್ವೆ ಮಾರ್ಗಗಳಿಗೆ 2409 ಎಕರೆ ಭೂಮಿ ಅವಶ್ಯಕತೆ ಇದ್ದು, ಇದರಲ್ಲಿ ಕೇವಲ 280 ಎಕರೆ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಇದೆ. ರೈಲ್ವೆ ಮಾರ್ಗಕ್ಕೆ ಈಗಾಗಲೆ 1100 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ಪ್ರಧಾನಮಂತ್ರಿಗಳ ಸೂಚನೆಯಂತೆ 2027ರ ಜನವರಿ ವೇಳೆಗೆ ನೂತನ ರೈಲ್ವೆ ಮಾರ್ಗಗಳ ನಿರ್ಮಾಣ ಮಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra modi)  ಹಾಗೂ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರಿಂದ ಲೋಕಾರ್ಪಣೆ ಮಾಡುವುದಾಗಿ ಸಚಿವ ವಿ.ಸೋಮಣ್ಣ ತಿಳಿಸಿದರು.

ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಆದ್ಯತೆ:

ಪ್ರಸ್ತುತ ನೂತನ ರೈಲ್ವೆ ಮಾರ್ಗಗಳನ್ನು ನಿರ್ಮಾಣ ಮಾಡುವ ವೇಳೆ ರೈಲ್ವೆ ಕೆಳ ಸೇತುವೆ ನಿರ್ಮಾಣದ ಬದಲಿಗೆ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಚಿವ ವಿ.ಸೋಮಣ್ಣ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆ ನೀರು ಸಂಗ್ರಹಗೊಂಡು ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿರುವ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿನ ರೈಲ್ವೆ ಕೆಳಸೇತುವೆ ದುರಸ್ತಿ ಕಾರ್ಯವನ್ನು ಸಂಸದ ಗೋವಿಂದ ಎಂ ಕಾರಜೋಳ ಅವರ ಸಲಹೆ ಪಡೆದು, ರೈಲ್ವೆ ಕೆಳ ಸೇತುವೆಗಳ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

156 ಎಕರೆ ಭೂಸ್ವಾಧೀನ ಪ್ರಕ್ರಿಯೆ ಬಾಕಿ:

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ 1211 ಎಕರೆ ಭೂ ಸ್ವಾಧೀನಕ್ಕೆ ರೈಲ್ವೆ ಇಲಾಖೆಯಿಂದ ಕೋರಲಾಗಿತ್ತು. ಇದುವರೆಗೆ 1026 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.

ಭರಮಸಾಗರ-ಚಿತ್ರದುರ್ಗ, ಚಿತ್ರದುರ್ಗ-ಹಿರಿಯೂರು ಹಾಗೂ ಹಿರಿಯೂರು-ತಾವರಕೆರೆ ನಡುವೆ ಮೂರು ಹಂತದಲ್ಲಿ ಭೂಸ್ವಾಧೀನ ನಡೆಸಲಾಗುತ್ತಿದೆ. ಒಟ್ಟು 156 ಎಕರೆ ಭೂಸ್ವಾಧೀನದ ಅಂತಿಮ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಶೇ.90ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಹಂತಗಳಲ್ಲಿ ಈಗಾಗಲೇ ರೈಲ್ವೆ ಇಲಾಖೆಯಿಂದ ಕಾಮಗಾರಿಗಳನ್ನು ಆರಂಭಿಸಲಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸಭೆಯಲ್ಲಿ ಮಾಹಿತಿ ನೀಡಿದರು.

ಬೆಳೆ ಕಟಾವಿನ ನಂತರ ಕೆಲಸ ಮಾಡಿ:

ನೇರ ರೈಲ್ವೆ ಮಾರ್ಗ ಯೋಜನೆಯ ದಾವಣಗೆರೆ- ಭರಮಸಾಗರ-ಚಿತ್ರದುರ್ಗ ಮಧ್ಯದಲ್ಲಿ ಭೂಸ್ವಾಧೀನಪಡಿಸಿಕೊಂಡ ಜಮೀನಿನಲ್ಲಿ ರೈತರು ಬೆಳೆಗಳನ್ನು ಬೆಳೆದಿದ್ದಾರೆ. ರೈತರಿಗೆ ತೊಂದರೆಯಾಗದಂತೆ ಇನ್ನೂ 1 ತಿಂಗಳ ಬಳಿಕ ಬೆಳೆ ಕಟಾವು ನಂತರ ರೈಲ್ವೆ ಕಾಮಗಾರಿಗಳನ್ನು ಆರಂಭಿಸುವಂತೆ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೈಲ್ವೇ ಇಲಾಖೆಯಲ್ಲಿ ಕ್ರಾಂತಿಕಾರಕ ಬದಲಾವಣೆ:

ರೈಲ್ವೆ ಇಲಾಖೆಯಲ್ಲಿ ಸಾಕಷ್ಟು ಕ್ರಾಂತಿಕಾರಕ ಬದಲಾವಣೆಗಳನ್ನು ತರಲಾಗಿದೆ. ಪ್ರಯಾಣಿಕರ ಸುರಕ್ಷತೆ ಹಿತದೃಷ್ಟಿಯಿಂದ ಹಾಗೂ ರೈಲ್ವೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ “ಕವಚ್” ರಕ್ಷಣಾ ವ್ಯವಸ್ಥೆಯನ್ನು ಪ್ರತಿ ರೈಲಿನಲ್ಲಿಯೂ ಅಳವಡಿಸಲು ಚಿಂತನೆ ನಡೆಸಲಾಗಿದೆ.

ಕವಚ್ ವ್ಯವಸ್ಥೆಯು ವಿಮಾನದ ಬ್ಲಾಕ್‍ಬಾಕ್ಸ್ ಮಾದರಿಯಲ್ಲಿ ರೈಲಿನ ಎಲ್ಲ ಚಲನವಲನಗಳನ್ನು ಸಂಗ್ರಹಿಸಲಿದೆ. ಇದರಿಂದ ಅಪಘಾತಗಳು ಉಂಟಾದ ಸಂದರ್ಭದಲ್ಲಿ ತಾಂತ್ರಿಕ ಲೋಪದೋಷಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ ಎಂದರು.

ಇದನ್ನೂ ಓದಿ: ಮಾಡದಕೆರೆ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ದೇಶದ 24 ರಾಜ್ಯಗಳ 303 ಜಿಲ್ಲೆಗಳಲ್ಲಿ 103 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ರಾಜ್ಯದಲ್ಲಿ 10 ವಂದೇ ಭಾರತ್ ಕಾರ್ಯಾಚರಣೆ ನಡೆಸುತ್ತಿವೆ. ಕೇವಲ ಮೂರು ವರ್ಷಗಳಲ್ಲಿ ಈ ಸಾಧನೆ ಮಾಡಲಾಗಿದೆ. ರೈಲು ಸಂಚಾರದ ವೇಗ ಹೆಚ್ಚಳಕ್ಕೆ ಕ್ರಮಕೈಗೊಂಡಿದ್ದು, ಗಂಟೆಗೆ ಗರಿಷ್ಟ 160 ಕಿ.ಮೀ ವೇಗದ ಮಿತಿಯನ್ನು ತಲುಪಲು ಪ್ರಯತ್ನಿಸಲಾಗುತ್ತಿದೆ.

ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ 49 ಸಾವಿರ ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯ ಮಾಡಲಾಗಿದೆ. ಶೇ.27 ರಷ್ಟು ಇದ್ದ ರೈಲ್ವೆ ಮಾರ್ಗಗಳ ವಿದ್ಯುದೀಕರಣವನ್ನು ಶೇ.98ರಷ್ಟು ಪ್ರಗತಿ ಸಾಧಿಸಲಾಗಿದೆ. ದೇಶದ ಎಲ್ಲ ಜಿಲ್ಲಾ ಕೇಂದ್ರಗಳ ರೈಲ್ವೆ ನಿಲ್ದಾಣಗಳನ್ನು ಏರ್‍ಪೋರ್ಟ್‍ಗಳ ಮಾದರಿಯಲ್ಲಿ ನವೀಕರಣಗೊಳಿಸಲಾಗುತ್ತಿದೆ.

ಕೇರಳ, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಹಾದುಹೋಗಿರುವ 741 ಕಿ.ಮೀ ಉದ್ದದ ಕೊಂಕಣ ರೈಲ್ವೆಯನ್ನು ರೈಲ್ವೆ ಇಲಾಖೆಯ ನೇರ ಆಡಳಿತಕ್ಕೆ ಒಳಪಡಿಸಿ, ಹಳಿಗಳ ಡಬ್ಲಿಂಗ್ ಮಾಡುವ ಕಾರ್ಯಕ್ಕೆ ರೈಲ್ವೆ ಖಾತೆ ಸಚಿವ ಅಶ್ವಿನ್ ವೈಷ್ಣವ್ ಒಲವು ತೋರಿದಿದ್ದಾರೆ.

ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಅನುದಾನ | ಸಚಿವ ವಿ.ಸೋಮಣ್ಣ ಭರವಸೆ

ಉತ್ತರ ಪ್ರದೇಶದ ಪ್ರಯಾಗ್ ರಾಜ್‍ನಲ್ಲಿ ಬರುವ ಜನವರಿಯಲ್ಲಿ ಕುಂಭಮೇಳ ಜರುಗಲಿದ್ದು, ಸುಮಾರು 40 ಕೋಟಿಗೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ರೈಲ್ವೆ ಇಲಾಖೆಯಿಂದ 600 ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಲಾಗುವುದು. ಪ್ರಯಾಗ್ ರಾಜ್‍ಗೆ ತೆರಳುವ ಭಕ್ತರಿಗೆ ಏಕರೂಪದ ಟಿಕೆಟ್ ವ್ಯವಸ್ಥೆ ಮಾಡುವ ಚಿಂತನೆ ನಡೆಸಲಾಗಿದ್ದು, ಟಿಕೆಟ್ ಪಡೆದವರು ಯಾವುದೇ ರೈಲಿನಲ್ಲಿ ಪ್ರಯಾಣಿಸಬಹುದಾಗಿದೆ ಎಂದರು.

ಸಭೆಯಲ್ಲಿ ಸಂಸದ ಗೋವಿಂದ ಎಂ ಕಾರಜೋಳ, ಶಾಸಕರಾದ ಎಂ.ಚಂದ್ರಪ್ಪ, ಟಿ.ರಘುಮೂರ್ತಿ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ನೇರ ರೈಲ್ವೆ ಮಾರ್ಗ ಭೂಸ್ವಾಧೀನಾಧಿಕಾರಿ ವೆಂಕಟೇಶ್, ಬೆಂಗಳೂರು ಕಂಟೋನ್‍ಮೆಂಟ್ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ ಸಂದೀಪ್ ಶರ್ಮಾ, ಮುಖ್ಯ ಇಂಜಿನಿಯರ್‍ಗಳಾದ ಪ್ರದೀಪ್ ಪುರಿ, ಸಂಜಯ್ ಬನ್ಸಾರಿ, ವಿಭಾಗೀಯ ಇಂಜಿನಿಯರ್ ರಜತ್, ಮೈಸೂರು ರೈಲು ವಿಭಾಗದ ಮಂಡಲ ವಾಣಿಜ್ಯ ವ್ಯವಸ್ಥಾಪಕ ಗಿರೀಶ್ ಕಲಗೊಂಡ, ತಹಶೀಲ್ದಾರ್ ಡಾ.ನಾಗವೇಣಿ ಇತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:2027ಕ್ಕೆ ಪೂರ್ಣChitradurgaChitradurga newsChitradurga UpdatesComplete by 2027Davangere-Chitradurga-Tumkur Rail LineDirect Rail LineKannada Latest NewsNarendra ModiTrainV. Somannaಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲು ಮಾರ್ಗನರೇಂದ್ರ ಮೋದಿನೇರ ರೈಲು ಮಾರ್ಗರೈಲುವಿ.ಸೋಮಣ್ಣ
Share This Article
Facebook Email Print
Previous Article SJM DENTAL ಕಾಲೇಜಿನಲ್ಲಿ ಪದವಿ ಪ್ರದಾನ | 55 ವಿದ್ಯಾರ್ಥಿಗಳಿಗೆ BDS ಪ್ರಮಾಣ ಪತ್ರ SJM DENTAL ಕಾಲೇಜಿನಲ್ಲಿ ಪದವಿ ಪ್ರದಾನ | 55 ವಿದ್ಯಾರ್ಥಿಗಳಿಗೆ BDS ಪ್ರಮಾಣ ಪತ್ರ
Next Article ಬೆಸ್ಕಾ BESCOM ಮಹತ್ವದ ಸೂಚನೆ | ಅಕ್ಟೋಬರ್ 4 ರಿಂದ 6 ರವರೆಗೆ ಬಿಲ್ ಪಾವತಿಸುವ ಮುನ್ನಾ ಈ ಸುದ್ದಿ ಓದಿ
Leave a Comment

Leave a Reply Cancel reply

Your email address will not be published. Required fields are marked *

endometrial cancer that plague women
ಮಹಿಳೆಯರನ್ನು ಕಾಡುವ ಎಂಡೊಮೆಟ್ರಿಯಲ್ ಕ್ಯಾನ್ಸರ್‍ನ ಲಕ್ಷಣಗಳ ಬಗ್ಗೆ ತಿಳಿಯಿರಿ
Life Style
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ
ಪದವಿ ವಿದ್ಯಾರ್ಥಿಗಳಿಗೆ ಕೆರಿಯರ್ ಕನೆಕ್ಟ್ ಕಾರ್ಯಕ್ರಮಕ್ಕೆ ಚಾಲನೆ 
ಮುಖ್ಯ ಸುದ್ದಿ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
ಹೊಳಲ್ಕೆರೆ
cow's milk to children
ಒಂದು ವರ್ಷದೊಳಗಿನ ಮಕ್ಕಳಿಗೆ ಹಸುವಿನ ಹಾಲು ನೀಡಿದರೆ ಏನಾಗುತ್ತದೆ ಗೊತ್ತಾ?
Life Style
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up