
CHITRADURGA NEWS | 03 OCTOBER 2024
ಚಿತ್ರದುರ್ಗ: ದೈಹಿಕ ನ್ಯೂನತೆ ಹಾಗೂ ಇತರೆ ಕಾರಣಗಳಿಂದ ಗೃಹ ಆಧಾರಿತ ಶಿಕ್ಷಣ(home-based education centers) ಪಡೆಯುತ್ತಿರುವ ವಿಶೇಷ ಮಕ್ಕಳಿಗೆ ಅವರ ಮನೆಯಲ್ಲಿ ಫೀಜಿಯೋಥೆರಪಿ ಚಿಕಿತ್ಸೆ ನೀಡುವಂತೆ ಜಿಲ್ಲಾ ಪಂಚಾಯಿತಿ ಸಿಇಓ(CEO) ಎಸ್.ಜೆ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕ್ಲಿಕ್ ಮಾಡಿ ಓದಿ: Rain: ವಿವಿ ಸಾಗರಕ್ಕೆ ಒಳಹರಿವು ಹೆಚ್ಚಳ | ಇಂದಿನ ಜಲಾಶಯದ ನೀರಿನ ಮಟ್ಟ ಎಷ್ಟಿದೆ ?


ಗುರುವಾರ ನಗರದ ಹಲವು ಬಡಾವಣೆಗಳ ಗೃಹ ಆಧಾರಿತ ಶಿಕ್ಷಣ ಕೇಂದ್ರ ಹಾಗೂ ವಿಶೇಷ ಚೇತನ ಮಕ್ಕಳ ಮನೆಗಳಿಗೆ ಭೇಟಿ ನೀಡಿದ ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಗೃಹಾಧಾರಿತ ಶಿಕ್ಷಣ ಎಂದರೆ ಶಾಲೆಗೆ ಹಾಜರಾಗಲು ಸಾಧ್ಯವಾಗದ ತೀವ್ರ ದೈಹಿಕ ನ್ಯೂನ್ಯತೆಯುಳ್ಳ ಮಕ್ಕಳಿಗೆ ಮನೆಯಲ್ಲಿಯೇ ತಮಗೆ ಅವಶ್ಯಕತೆಯಿರುವ ದೈನಂದಿನ ಕೌಶಲ್ಯಗಳ ತರಬೇತಿ ಹಾಗೂ ಫೀಜಿಯೋಥೆರಪಿ ಸೇವೆಯನ್ನು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ತರುವುದಾಗಿದೆ. ಇಂತಹ ಮಕ್ಕಳಿಗೆ ಆಧಾರ್ ಹಾಗೂ ಯು.ಡಿ.ಐ.ಡಿ ಕಾರ್ಡ್ ನೀಡಬೇಕು.
ಮಾಸಾಶನಕ್ಕೆ ಅರ್ಹರಿರುವರಗೆ ಮಾಸಾಶನ ಸೌಲಭ್ಯ ಒದಗಿಸುವುದರೊಂದಿಗೆ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನ, ಆರೋಗ್ಯ ಇಲಾಖೆಗಳು ತಿಂಗಳಲ್ಲಿ ಒಂದು ದಿನಾಂಕವನ್ನು ನಿಗಧಿಪಡಿಸಿ ಗೃಹಾಧಾರಿತ ಶಿಕ್ಷಣ ಕೇಂದ್ರಗಳ ಮಕ್ಕಳಿಗೆ ದೊರೆಯುವ ಎಲ್ಲಾ ಸೌಲಭ್ಯವನ್ನು ಒದಗಿಸುವಂತೆ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಹೇಳಿದರು.
ಕ್ಲಿಕ್ ಮಾಡಿ ಓದಿ: Accident: ಕಾರು ಅಪಘಾತ | ಸರ್ಕಾರಿ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮೃತ
ಚಿತ್ರದುರ್ಗ ತಾಲ್ಲೂಕಿನಲ್ಲಿ ಒಟ್ಟು 34 ಮಕ್ಕಳು ಗೃಹಾಧಾರಿತ ಶಿಕ್ಷಣ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಇಲ್ಲಿ ಮಕ್ಕಳ ಬೆಳವಣಿಗೆ ಹಾಗೂ ಆರೋಗ್ಯ ಕುರಿತಾದ ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಶಿಕ್ಷಣ ಇಲಾಖೆ ಸಮನ್ವಯದೊಂದಿಗೆ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಹಾಗೂ ಎಪಿಡಿ ಸಂಸ್ಥೆಯ ಸದಸ್ಯರು ಹಾಗೂ ಯು.ಆರ್. ಡಬ್ಲ್ಯೂ ಅವರು ಮನೆ ಮನೆಗೆ ಭೇಟಿ ನೀಡಿ ಮಕ್ಕಳನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಈ ವೇಳೆ ಸೆರೆಬರಲ್ ಪಾಲಿಸಿ ನ್ಯೂನ್ಯತೆಯಿಂದ ಬಳಲುತ್ತಿರುವ ಮಗುವಿನ ಮನೆಗೆ ಭೇಟಿ ನೀಡಿದ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ತಕ್ಷಣ ಮಗುವಿನ ರೋಗ ವಿಧಾನವನು ಪರೀಕ್ಷಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ನೀಡುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ ಅವರಿಗೆ ಸೂಚಿಸಿದರು.
ನಂತರ ತಂದೆ ತಾಯಿಯರಿಂದ ದೂರವಿದ್ದು, ಅಜ್ಜಿಯ ಆಶ್ರಯದಲ್ಲಿ ಬೆಳುತ್ತಿರುವ ಮಗುವಿಗೆ ಇಲಾಖೆ ಹಾಗೂ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪನಿರ್ದೇಶಕಿ ಭಾರತಿ ಬಣಕಾರ್ ಅವರಿಗೆ ಹೇಳಿದರು.
ನ್ಯೂನತೆಯಿಂದ ಬಳುತ್ತಿರುವ ಒಂದೇ ಕುಟುಂಬದ ಎರೆಡು ಮಕ್ಕಳ ಮನೆಗೆ ಭೇಟಿ ನೀಡಿದ ಸಿಇಓ ಇಬ್ಬರಲ್ಲಿ ಒಂದು ಮಗು ಗೃಹಾಧಾರಿತ ಶಿಕ್ಷಣವನ್ನು ಯಶಸ್ವಿಯಾಗಿ ಪಡೆದು ಔಪಚಾರಿಕ ಶಾಲಾ ಶಿಕ್ಷಣಕ್ಕೆ ತೆರಳುತ್ತಿರುವ ಸಂಗತಿ ತಿಳಿದು ಹರ್ಷ ವ್ಯಕ್ತಪಡಿಸಿದರು.
ಕ್ಲಿಕ್ ಮಾಡಿ ಓದಿ: BESCOM ಮಹತ್ವದ ಸೂಚನೆ | ಅಕ್ಟೋಬರ್ 4 ರಿಂದ 6 ರವರೆಗೆ ಬಿಲ್ ಪಾವತಿಸುವ ಮುನ್ನಾ ಈ ಸುದ್ದಿ ಓದಿ
ಬಿ.ಆರ್.ಸಿ ಕೇಂದ್ರದಲ್ಲಿ ಸ್ಥಾಪಿತವಾಗಿರುವ ಸಮನ್ವಯ ಶಿಕ್ಷಣ ಸಂಪನ್ಮೂಲ ಕೇಂದ್ರಕ್ಕೆ ಭೇಟಿ ನೀಡಿ. ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಕೇಂದ್ರದಲ್ಲಿ ಕಲ್ಪಿಸಲಾದ ಸೌಲಭ್ಯಗಳನ್ನು ಸಮಗ್ರವಾಗಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಮಕ್ಕಳ ಪೋಷಕರೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ. ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣಾಧಿಕಾರಿಗಳಾದ ಡಾ. ಜಿ.ಪಿ ರೇಣುಪ್ರಸಾದ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
