
CHITRADURGA NEWS | 18 OCTOBER 2024
ಹಿರಿಯೂರು: ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ(VV Sagar) ಮಾರಿಕಾಂಬ ದೇವಸ್ಥಾನದ ಮುಂಭಾಗದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ರೂ.5 ಕೋಟೆ ವೆಚ್ಚದಲ್ಲಿ ನಿರ್ಮಿಸಲಾಗಿರುವ ಯಾತ್ರಿನಿವಾಸ, ಉದ್ಯಾನವನ(Park)ಗಳ ಜೊತೆಗೆ ಶೌಚಾಲಯಗಳನ್ನು ನಿರ್ಮಿಸಲಾಗಿದೆ.
ಕ್ಲಿಕ್ ಮಾಡಿ ಓದಿ: House; ಮನೆಗಳು ಅರ್ಹರಿಗೆ ಹಂಚಿಕೆಯಾಗಲಿ | ಸಂಸದ ಗೋವಿಂದ ಎಂ.ಕಾರಜೋಳ
ಈ ಕಟ್ಟಡಗಳನ್ನು ಖಾಸಗಿ ಸಂಸ್ಥೆಗಳು ಹಸ್ತಾಂತರಿಸಿಕೊಳ್ಳಲು ಇಚ್ಚಿಸಿದ್ದಲ್ಲಿ, ಪ್ರವಾಸೋದ್ಯಮ ಇಲಾಖೆಗೆ “ಆಸಕ್ತಿಯ ಅಭಿವ್ಯಕ್ತ” Expression of Interest (EOI) ಸಲ್ಲಿಸುವಂತೆ ಸೆಪ್ಟೆಂಬರ್-2024ರ ಮಾಹೆಯ ಮೊದಲ ವಾರದಲ್ಲಿ ಅರ್ಜಿ ಸಲ್ಲಿಸುವಂತೆ ಕೋರಲಾಗಿರುತ್ತದೆ.
ಆದರೆ ಇಲ್ಲಿಯವರೆಗೂ ಯಾವುದೇ ಅರ್ಜಿಗಳು ಸ್ವೀಕೃತವಾಗಿರುವುದಿಲ್ಲ. ಹಾಗಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು 2024ರ ನವೆಂಬರ್ 11 ರವರೆಗೆ ವಿಸ್ತರಿಸಲಾಗಿದೆ.
ಕ್ಲಿಕ್ ಮಾಡಿ ಓದಿ: Rain report; ಸತತ ಮಳೆಗೆ ಜಿಲ್ಲೆಯಲ್ಲಿ 80 ಮನೆಗಳು ಹಾನಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ ಇಲ್ಲಿದೆ ಮಾಹಿತಿ
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಕಾಮನಬಾವಿ ಬಡಾವಣೆ, ಕೋಟೆ ಸಮೀಪದ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
