
CHITRADURGA NEWS | 07 NOVEMBER 2024
ಚಿತ್ರದುರ್ಗ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ(All India Literary Conference) ಸರ್ವಾಧ್ಯಕ್ಷರ ಆಯ್ಕೆಗೆ ಚಿತ್ರದುರ್ಗ ಜಿಲ್ಲೆಯಿಂದ ಮೂರು ಹೆಸರು ಪ್ರಸ್ತಾಪಕ್ಕೆ ನಿರ್ಧರಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಗುರುವಾರದ ಹತ್ತಿ ರೇಟ್ ಇಲ್ಲಿದೆ

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿ.20 ರಿಂದ 22 ರವರೆಗೆ ಮೂರು ದಿನಗಳ ಕಾಲ ಮಂಡ್ಯದಲ್ಲಿ ಏರ್ಪಡಿಸಲಾಗಿದೆ.
ಉಪ ಚುನಾವಣೆ ಮುಗಿದ ತಕ್ಷಣ ಮೂರು ದಿನಗಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಗಾಗಿ ರಾಜ್ಯ ಕಾರ್ಯಕಾರಿಣಿ ಸಭೆ ಕರೆಯಲಾಗುವುದು.
ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಗೆ ಚಿತ್ರದುರ್ಗ ಜಿಲ್ಲೆಯಿಂದ ಮೂರು ಹೆಸರುಗಳನ್ನು ಪ್ರಸ್ತಾಪಿಸಲು ಜಿಲ್ಲಾ ಕಸಾಪ ನಿರ್ಧರಿಸಿದೆ.
ಕ್ಲಿಕ್ ಮಾಡಿ ಓದಿ: ತೊಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಬಸಪ್ಪ ಬೋಗಿ ಅಮಾನತು
ಸಾಹಿತ್ಯ ಮತ್ತು ಕೆರೆಗಳಿಗೆ ನೀರು ತುಂಬಿಸುವ ಕಾರ್ಯದಿಂದ ಜಿಲ್ಲೆ ಮತ್ತು ರಾಜ್ಯದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳು, ಸಾಹಿತಿ ಮತ್ತು ಇತಿಹಾಸಕಾರ ಡಾ.ಬಿ.ರಾಜಶೇಖರಪ್ಪ, ಖ್ಯಾತ ಸಾಹಿತಿ ಬಿ.ಎಲ್.ವೇಣು ರವರನ್ನು ಹೆಸರುಗಳನ್ನು ಪ್ರಸ್ತಾಪಿಸಲು ಜಿಲ್ಲಾ ಕಸಾಪ ನಿರ್ಧರಿಸಿದೆ.
ಪ್ರಸಕ್ತ ಸಾಲಿನಲ್ಲಿ ಈ ಮೂವರ ಹೆಸರುಗಳನ್ನು ಚಿತ್ರದುರ್ಗ ಜಿಲ್ಲೆಯ ವತಿಯಿಂದ ರಾಜ್ಯ ಕಾರಿಣಿ ಸಭೆಯಲ್ಲಿ ಪ್ರಸ್ತಾಪಿಸಲು ನಿರ್ಧರಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ನ.13ರಂದು ಜಿಲ್ಲಾ ಸಿರಿಧಾನ್ಯ ಪಾಕ ಸ್ಪರ್ಧೆ | ಅರ್ಜಿ ಆಹ್ವಾನ
ಸಮ್ಮೇಳನಾಧ್ಯಕ್ಷರ ಅಂತಿಮ ನಿರ್ಧಾರ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅಂತಿಮಗೊಳ್ಳಲಿದೆ. ಈ ಬಗ್ಗೆ ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
