
CHITRADURGA NEWS | 13 NOVEMBER 2024
ಚಿತ್ರದುರ್ಗ: ಕೃಷಿ ಹೊಂಡ, ಬದು ನಿರ್ಮಾಣ, ಹಸುಗಳ ವಿತರಣೆಯಲ್ಲಿ ಅಕ್ರಮ ನಡೆದಿರುವ ಅನುಮಾನ ವ್ಯಕ್ತವಾಗಿದ್ದು, ಸರ್ಕಾರದ ಹಣ ಮಧ್ಯವರ್ತಿಗಳ ಪಾಲಾಗಬಾರದು. ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ಎಲ್ಲಿ ಲೋಪವಾಗಿದೆ ಎನ್ನುವುದನ್ನು ಪರಿಶೀಲಿಸಿ ವರದಿ(submit report) ನೀಡಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಎಚ್ಚರಿಕೆ ನೀಡಿದರು.
ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ಶಿವಮೊಗ್ಗ, ಚನ್ನಗಿರಿ ಮಾರುಕಟ್ಟೆಯಲ್ಲಿ 50 ಸಾವಿರ ದಾಟಿದ ರಾಶಿ
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತಾಲ್ಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ದ್ಯಾಮವ್ವನಹಳ್ಳಿ ಪಂಚಾಯಿತಿಯಲ್ಲಿ ಹಸುಗಳ ವಿತರಣೆಯಲ್ಲಿ ಗೋಲ್ಮಾಲ್ ಆಗಿದೆ. ಎಲ್ಲೆಲ್ಲಿ ಏನೇನು ಕಾಮಗಾರಿಗಳು ಆಗಿವೆ. ಎಲ್ಲಿ ಇನ್ನು ಆರಂಭಗೊಂಡಿಲ್ಲ. ವಿಳಂಭವಾಗಲು ಏನು ಕಾರಣ ಎನ್ನುವುದು ಪರಿಶೀಲಿಸಿ ಮುಂದಿನ ಸಭೆಯ ವೇಳೆಗೆ ವರದಿ ಕೊಡಬೇಕು. ನಿರ್ಲಕ್ಷೆ ವಹಿಸುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಸೂಚಿಸಿದರು.
ಕ್ಲಿಕ್ ಮಾಡಿ ಓದಿ: ಜಿಲ್ಲೆಯಾದ್ಯಂತ ಸಹಕಾರಿ ಸಪ್ತಾಹ | ಸಚಿವ ಕೆ.ಎನ್.ರಾಜಣ್ಣ ಭಾಗೀ | ಕೋಗುಂಡೆ ದ್ಯಾಮಣ್ಣ
ಒಂದು ಚೀಲ ಶೇಂಗಾ ಬೀಜವನ್ನು ಮೂವರು ರೈತರಿಗೆ ವಿತರಣೆ ಮಾಡುತ್ತಿರುವುದಾಗಿ ದೂರುಗಳು ಕೇಳಿ ಬರುತ್ತಿವೆ. ರೈತ ಸಂಪರ್ಕ ಕೇಂದ್ರದಲ್ಲಿ ರೈತರ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ಆಪಾದನೆಗಳಿವೆ. ಮತ್ತೆ ಇಂತಹ ತಪ್ಪುಗಳು ಮರುಕಳಿಸಬಾರದು. ರೈತರ ಬಿತ್ತನೆ ಬೀಜಗಳಿಗೆ ಯಾವುದೇ ಕೊರತೆಯಾಗದಂತೆ ದಾಸ್ತಾನು ಮಾಡಿಕೊಳ್ಳಬೇಕೆಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಶಾಸಕರು ತಾಕೀತು ಮಾಡಿದರು.
573 ಕೃಷಿ ಹೊಂಡ ಹಾಗೂ ಬದು ನಿರ್ಮಾಣ ಗುರಿಯಲ್ಲಿ 243 ಪೂರ್ಣಗೊಂಡಿದೆ. ಉಳಿದವು ಏಕೆ ಆಗಿಲ್ಲ. ರೈಲು ಮಾರ್ಗಕ್ಕೆ ರೈತರ ಎಷ್ಟು ಜಮೀನುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎನ್ನುವುದನ್ನು ಪರಿಶೀಲಿಸಿ ವರದಿ ಕೊಡಿ. ಈಗ ನೀಡಿರುವ ವರದಿ ಸರಿಯಿಲ್ಲ. ನಮ್ಮನ್ನು ಸಮಾಧಾನ ಪಡಿಸಲು ಮನಬಂದಂತೆ ಸಭೆಗೆ ವರದಿ ಕೊಡುವುದು ಬೇಡ. ಸಭೆಗೆ ತಪ್ಪು ಮಾಹಿತಿ ಬೇಕಾಗಿಲ್ಲ. ನೈಜ ಸ್ಥಿತಿಯನ್ನು ತಿಳಿಸಿ ಎಂದು ಅಧಿಕಾರಿಗಳನ್ನು ಎಚ್ಚರಿಸಿದರು.
ತಾಲ್ಲೂಕಿನಾದ್ಯಂತ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟು ಶುದ್ದ ಕುಡಿಯುವ ನೀರಿನ ಘಟಕಗಳಿವೆ ಎಂದು ಶಾಸಕರು ಪ್ರಶ್ನಿಸಿದಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಇಂಜಿನಿಯರ್ ಉತ್ತರಿಸುತ್ತ 106 ಶುದ್ದ ಘಟಕದಲ್ಲಿ 81 ಮಾತ್ರ ಸುಸ್ಥಿತಿಯಲ್ಲಿದೆ ಎಂದು ಮಾಹಿತಿ ನೀಡಿದಾಗ ಉಳಿದವು ಕೆಟ್ಟಿದ್ದರೂ ಏಕೆ ಇದುವರೆವಿಗೂ ರಿಪೇರಿ ಮಾಡಿಸಿಲ್ಲ. ಎಲ್ಲೆಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳು ಕೆಟ್ಟಿವೆ ಎನ್ನುವುದನ್ನು ಪರಿಶೀಲಿಸುವುದಕ್ಕಾಗಿ ಸ್ಥಳಕ್ಕೆ ಭೇಟಿ ನೀಡಿ ವರದಿ ಕೊಡಿ ಸೂಚಿಸಿದರು.
ಪೊಲೀಸರು ಯಾಕೆ ಸಭೆಗೆ ಬಂದಿಲ್ಲ:
ಸೊಂಡೆಕೊಳ ಗ್ರಾಮದಲ್ಲಿ ಶಾಲೆಯೊಂದರ ಕಿಟಕಿ ಬಾಗಿಲುಗಳನ್ನು ಮುರಿದಿರುವುದಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್.ದಾಖಲಾಗಿದೆ. ಮಕ್ಕಳಿಗೆ ಶೌಚಾಲಯವಿಲ್ಲ ಎಂದು ಕೆಡಿಪಿ ನಾಮ ನಿರ್ದೇಶಕ ಸದಸ್ಯ ನಾಗರಾಜ್ ಸಭೆಯ ಗಮನಕ್ಕೆ ತಂದಾಗ ಎಲ್ಲಿ ಪೊಲೀಸರು ಒಬ್ಬರು ಸಭೆಗೆ ಬಂದಿಲ್ಲ ಎಂದು ಹುಡುಕಾಡಿದ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಚಿತ್ರದುರ್ಗ ಡಿವೈಎಸ್ಪಿಗೆ ನೋಟಿಸ್ ನೀಡಿ ದಾವಣಗೆರೆ ಪೂರ್ವ ವಲಯದ ಐ.ಜಿ.ಪಿ. ಹಾಗೂ ಗೃಹ ಮಂತ್ರಿಗಳ ಗಮನಕ್ಕೂ ತನ್ನಿ ಎಂದು ಸೂಚಿಸಿ ಮೊಬೈಲ್ ಮೂಲಕ ಪೊಲೀಸ್ ಅಧಿಕಾರಗಳನ್ನು ತರಾಟೆ ತೆಗೆದುಕೊಂಡರು. ಈ ವೇಳೆ ಅರ್ಧ ಗಂಟೆಯಲ್ಲಿ ಪೊಲೀಸರು ಸಭೆಗೆ ಆಗಮಿಸಿದರು.
ಕ್ಲಿಕ್ ಮಾಡಿ ಓದಿ: ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ 60 ದಿನ ಉಚಿತ ಪ್ರಸಾದ | 25ನೇ ವರ್ಷದ ಬ್ರಹ್ಮೋತ್ಸವ
ರೇಷ್ಮೆ ಬೆಳೆಗಾರರಿಗೆ ಮನೆ ಕೊಡುವಾಗ ಗಮನಕ್ಕೆ ತನ್ನಿ:
ರೇಷ್ಮೆ ಬೆಳೆಯುವ ರೈತರಿಗೆ ಮನೆಗೆಳನ್ನು ಮಂಜೂರು ಮಾಡಬೇಕಾದರೆ ನನ್ನ ಗಮನಕ್ಕೆ ತರಬೇಕು. ನೀವುಗಳೇ ನಿರ್ಧಾರ ತೆಗೆದುಕೊಂಡರೆ ಸಹಿಸುವುದಿಲ್ಲ. ಇನ್ನು ಮುಂದೆ ಯಾವುದೇ ಕಾರಣಕ್ಕೂ ನನಗೆ ತಿಳಿಸದೆ ಮನೆಗಳನ್ನು ನೀಡಬಾರದೆಂದು ರೇಷ್ಮೆ ಇಲಾಖೆ ಅಧಿಕಾರಿಗೆ ತರಾಟೆ ತೆಗೆದುಕೊಂಡರು. ಮಲ್ಲಾಪುರ, ಅನ್ನೇಹಾಳ್, ಸೊಂಡೆಕೊಳ, ಭೀಮಸಮುದ್ರ, ಮೇಗಳಹಳ್ಳಿಯಲ್ಲಿ ಅಡುಗೆ ಕೋಣೆಗಳು ಸರಿಯಿಲ್ಲ. ಮಲ್ಲನಕಟ್ಟೆಯಲ್ಲಿ ಶಾಲೆ ಅರ್ಧಕ್ಕೆ ನಿಂತಿದೆ. ಮಕ್ಕಳಿಗೆ ಏನಾದರೂ ಅನಾಹುತವಾದರೆ ಯಾರು ಹೊಣೆ? ಅಡುಗೆ ಕೋಣೆಗಳ ಕಾಮಗಾರಿ ಬೇಗ ಮುಗಿಸಬೇಕೆಂದರು.
ಸಭೆಯಲ್ಲಿ ತಾಪಂ ಆಡಳಿತಾಧಿಕಾರಿ ಬಿ.ಆನಂದ್, ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ತಹಶೀಲ್ದಾರ್ ನಾಗವೇಣಿ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
