ಮುಖ್ಯ ಸುದ್ದಿ
Guarantee: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿ ಉದ್ಘಾಟಿಸಿದ ಶಾಸಕ ವೀರೇಂದ್ರ ಪಪ್ಪಿ
CHITRADURGA NEWS | 14 NOVEMBER 2024
ಚಿತ್ರದುರ್ಗ: ನಗರದ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಗ್ಯಾರಂಟಿ(Guarantee) ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಚಿತ್ರದುರ್ಗ ತಾಲ್ಲೂಕು ನೂತನ ಕಚೇರಿಯನ್ನು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟಿಸಿದರು.
ಕ್ಲಿಕ್ ಮಾಡಿ ಓದಿ: ಸಿರಿಧಾನ್ಯಗಳಿಗೆ ಸೂಕ್ತ ವೇದಿಕೆಗೆ ಪ್ರಯತ್ನ | ಜಿ.ಪಂ ಸಿಇಓ ಸೋಮಶೇಖರ್ ಭರವಸೆ
ನಂತರ ಮಾತನಾಡಿದ ಶಾಸಕರು, ಬಡ ಜನರ ಏಳಿಗೆಗಾಗಿ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ಅರ್ಹ ಫಲಾನುಭವಿಗಳಿಗೆ ದೊರಕಬೇಕು. ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಈ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ದೊರಕುವಂತಾಗಬೇಕು ಎಂದರು.
ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳ ಲಾಭ ತಲುಪಿಸಲು ಪ್ರಯತ್ನಿಸುವಂತೆ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿಯ ಪದಾಧಿಕಾರಿಗಳಿಗೆ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಸೂಚನೆ ನೀಡಿದರು.
ಸರ್ಕಾರ ಈ ಐದು ಯೋಜನೆಯಿಂದ ಯಾವ ಅರ್ಹ ಫಲಾನುಭವಿಗಳು ಸಹಾ ಹೊರಗೆ ಉಳಿಯದಂತೆ ನೋಡಿಕೊಳ್ಳಬೇಕಿದೆ. ಸರ್ಕಾರ ಜನತೆ ಆರ್ಥಿಕವಾಗಿ ಸಬಲರಾಗಲಿ ಎಂದು ಈ ರೀತಿಯ ಯೋಜನೆಗಳನ್ನು ಜಾರಿ ಮಾಡಿದೆ.
ಕ್ಲಿಕ್ ಮಾಡಿ ಓದಿ: ಅಡಿಕೆ ವ್ಯಾಪಾರಿ ಆತ್ಮಹತ್ಯೆ | ಡೆತ್ ನೋಟ್ ಪತ್ತೆ
ಗ್ಯಾರಂಟಿ ಯೋಜನೆಗಳ ಬಗ್ಗೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಆವಕಾಶ ವಂಚಿತರನ್ನು ಗುರುತಿಸಿ ಅವರಿಗೆ ಈ ಸೌಲಭ್ಯ ಸಿಗುವಂತೆ ಮಾಡಿ, ಸಮಿತಿಗೆ ನನ್ನಿಂದ ಎಲ್ಲಾ ರೀತಿಯ ಸಹಕಾರ ಸಿಗಲಿದೆ ಎಂದರು.
ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಣ್ಣ ಮಾತನಾಡಿ, ತಾಲ್ಲೂಕು ಮಟ್ಟದ ಪದಾಧಿಕಾರಿಗಳು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಸಂಚಾರ ಮಾಡುವುದರ ಮೂಲಕ ಈ ಯೋಜನೆಯಿಂದ ಹೂರಗೆ ಉಳಿದವರನ್ನು ಗುರುತಿಸಿ ಅವರಿಗೆ ಈ ಯೋಜನೆ ಸಿಗುವಂತೆ ಮಾಡಬೇಕಿದೆ.
ಇದ್ದಲ್ಲದೆ ನಗರದಲ್ಲಿ ಎರಡು ವಾರ್ಡ ಗ್ರಾಮಾಂತರ ಪ್ರದೇಶಗಳಲ್ಲಿ ಮೂರು ಪಂಚಾಯಿತಿಗಳಲ್ಲಿ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸುವುದರ ಮೂಲಕ ಈ ಯೋಜನೆಯ ಫಲವನ್ನು ಪಡೆಯುತ್ತಿರುವವರಿಂದ ಅನಿಸಿಕೆ, ಹಾಗೂ ಯಾರಿಗೆ ಸಿಕ್ಕಿಲ್ಲ, ಯಾಕೆ ಸಿಕ್ಕಿಲ್ಲ ಎಂಬ ಮಾಹಿತಿಯನ್ನು ಪಡೆಯಬೇಕು ಇದ್ದಲ್ಲದೆ ಅಧಿಕಾರಿಗಳು ಹಾಗೂ ಫಲಾನುಭವಿಗಳ ಮಧ್ಯೆ ಸಂವಾದವನ್ನು ನಡೆಸುವಂತೆ ಕರೆ ನೀಡಿದರು.
ಕ್ಲಿಕ್ ಮಾಡಿ ಓದಿ: ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ
ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಚಿತ್ರದುರ್ಗ ತಾಲ್ಲೂಕು ಘಟಕದ ವತಿಯಿಂದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಎಂ.ಕೆ. ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಮುದಸಿರ್ ನವಾಜ್, ಕುಮಾರಸ್ವಾಮಿ, ರಮೇಶ್, ಆಸೋಕ್ ನಾಯ್ಡ್, ಸಾಧಿಕ್, ದಿನೇಶ್, ಮಂಜುನಾಥ್, ಹನೀಫ್, ಪ್ರಕಾಶ್ ನಾಯ್ಕ್, ವಿನಯಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.