
CHITRADURGA NEWS | 15 NOVEMBER 2024
ಹಿರಿಯೂರು: ತಾಲ್ಲೂಕಿನ ಬಬ್ಬೂರು ಫಾರಂನ(Babbur Farm) ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಇದೇ ನ.16 ಮತ್ತು 17ರಂದು ಎರಡು ದಿನಗಳ ಕೃಷಿಮೇಳ ಆಯೋಜಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಸಮಾಜಶಾಸ್ತ್ರ ರಾಷ್ಟ್ರೀಯ ಸಮ್ಮೇಳನ | ಎಂಎಲ್ಸಿ ಕೆ.ಎಸ್.ನವೀನ್ ಚಾಲನೆ

ಶಿವಮೊಗ್ಗ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತಕ್ಕೊಳಪಟ್ಟಿರುವ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ವತಿಯಿಂದ ಆಯೋಜಿಸಲಾಗಿದೆ.
ಈ ಕೃಷಿಮೇಳದ ಆಕರ್ಷಣೆಯಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಪ್ರಾತ್ಯಕ್ಷೀಕೆಗಳು, ವಿವಿಧ ಬೆಳೆಗಳ ಸಂಶೋಧನಾ ಪ್ರಾತ್ಯಕ್ಷೀಕೆಗಳು, ಜೇನುಕೃಷಿ ಮತ್ತು ಕೀಟ ವಿಸ್ಮಯ, ಗ್ರಾಮೀಣ ಕೃಷಿ ಹವಾಮಾನ ಘಟಕ, ಬಾಡಿಗೆ ಆಧಾರಿತ ಯಂತ್ರೋಪಕರಣಗಳ ಘಟಕ, ಕೃಷಿ ಸಂಬಂಧಿತ ವಸ್ತುಪ್ರದರ್ಶನ ಮಳಿಗೆಗಳು, ಸಿರಿಧಾನ್ಯ ಮಹತ್ವ, ಸುಧಾರಿತ ಉತ್ಪಾದನಾ ತಾಂತ್ರಿಕತೆಗಳು ಹಾಗೂ ಮೌಲ್ಯವರ್ಧನೆ, ತೋಟಗಾರಿಕೆ ಬೆಳೆಗಳಲ್ಲಿ ಸಮಗ್ರ ಬೇಸಾಯ ಕ್ರಮಗಳು, ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ ಹಾಗೂ ಆಧುನಿಕ ಕೃಷಿ ಯಂತ್ರೋಪಕರಣಗಳ ಉಪಯೋಗ ಮತ್ತು ಬಳಕೆ ಕುರಿತು ತಾಂತ್ರಿಕ ಸಮಾವೇಶ ಜರುಗಲಿದೆ.
ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್
ಹೆಚ್ಚಿನ ಸಂಖ್ಯೆಯಲ್ಲಿ ರೈತಬಾಂಧವರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೇಂದ್ರದ ಸಹ ಸಂಶೋಧನಾ ನಿರ್ದೇಶಕರಾದ ಡಾ. ಶರಣಪ್ಪ ಜಂಗಂಡಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
