ಮುಖ್ಯ ಸುದ್ದಿ
Congress: ನಗರಸಭೆ 15ನೇ ವಾರ್ಡ್ ಸದಸ್ಯರಾಗಿ ನರಸಿಂಹಮೂರ್ತಿ ಆಯ್ಕೆ | ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನ
CHITRADURGA NEWS | 28 NOVEMBER 2024
ಚಿತ್ರದುರ್ಗ: ನಗರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾಗಿದ್ದ ಪೊಲೀಸ್ ಮಲ್ಲಿಕಾರ್ಜುನ್ ಅವರ ನಿಧನದಿಂದ ತೆರವಾಗಿದ್ದ ನಗರಸಭೆಯ 15ನೇ ವಾರ್ಡ್ಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್(Congress) ಅಭ್ಯರ್ಥಿ ನರಸಿಂಹಮೂರ್ತಿ ಜಯ ಸಾಧಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ನ.23 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿ0ದ ಸ್ಪರ್ಧಿಸಿದ್ದ ನರಸಿಂಹಮೂರ್ತಿ 1330 ಮತ ಪಡೆದಿದ್ದರು. ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪಟಾಕಿ ಸಿಡಿಸಿ, ಸಹಿ ಹಂಚಿ ಸಂಭ್ರಮಿಸಲಾಯಿತು.
ಇದೇ ವೇಳೆ ಜಿಲ್ಲಾ ಕಾಂಗ್ರೆಸ್‌ನಿಂದ ಈ.ನರಸಿಂಹಮೂರ್ತಿ ಅವರನ್ನು ಸನ್ಮಾನಿಸಲಾಯಿತು.
ಕ್ಲಿಕ್ ಮಾಡಿ ಓದಿ: ಪ್ರೀತಿಸಿ ಮದುವೆಯಾಗಿದ್ದಕ್ಕೆ ಬಿತ್ತು ಹೆಣ | ಭೀಕರವಾಗಿ ಕೊಲೆಯಾದ ಯುವಕ
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ನಾಗರಾಜ್ ಪೈಲೆಟ್, ನಾಗರಾಜ್ ಜಾನ್ಹವಿ, ನಗರಸಭೆ ನಾಮನಿರ್ದೇಶಕ ಸದಸ್ಯ ಹೆಚ್.ಶಬ್ಬೀರ್ ಭಾಷಾ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷೀಕಾಂತ್, ಸಿರಿಗೆರೆ ಪ್ರಕಾಶ್ ಇದ್ದರು.