Connect with us

    Chancellor post: ವಿಶ್ವವಿದ್ಯಾಲಯ ಕುಲಾಧಿಪತಿ ರಾಜ್ಯಪಾಲರ ಬಳಿಯಿರಲಿ | ಎಬಿವಿಪಿ ಪ್ರತಿಭಟನೆ

    ಎಬಿವಿಪಿ ಪ್ರತಿಭಟನೆ

    ಮುಖ್ಯ ಸುದ್ದಿ

    Chancellor post: ವಿಶ್ವವಿದ್ಯಾಲಯ ಕುಲಾಧಿಪತಿ ರಾಜ್ಯಪಾಲರ ಬಳಿಯಿರಲಿ | ಎಬಿವಿಪಿ ಪ್ರತಿಭಟನೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 02 DECEMBER 2024

    ಚಿತ್ರದುರ್ಗ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಡೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

    ಕ್ಲಿಕ್ ಮಾಡಿ ಓದಿ: ಮುರುಘಾ ಮಠದಲ್ಲಿ ಜ್ಞಾನ ದೀಪೋತ್ಸವ | ದೀಪಾರತಿ, ಪುಷ್ಪಾರ್ಚನೆ ಮಾಡಿ ಭಕ್ತಿ ಸಮರ್ಪಣೆ

    ವಿಶ್ವವಿದ್ಯಾಲಯಗಳು ಶಿಕ್ಷಣದ ಭಾಗವಾಗಬೇಕೆ ಹೊರತು, ರಾಜಕಾರಣದ ಕೇಂದ್ರವಾಗಬಾರದು ಎಂಬ ಉದ್ದೇಶದಿಂದ ಸಾಂವಿಧಾನಿಕ ಹುದ್ದೆಯಾದ ರಾಜ್ಯಪಾಲರಿಗೆ ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆ ಮೀಸಲಾಗಿದೆ. ಆದರೆ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರಿಂದ ಮುಖ್ಯಮಂತ್ರಿಗಳಿಗೆ ನೀಡುವ ನಿರ್ಧಾರ ತೆಗೆದುಕೊಂಡಿದೆ.

    ಇದರಿಂದ ವಿಶ್ವವಿದ್ಯಾಲಯಗಳು ರಾಜಕೀಯ ಕೇಂದ್ರಗಳಾಗುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಈ ಹುದ್ದೆ ರಾಜ್ಯಪಾಲರ ಬಳಿಯೇ ಇರಬೇಕು ಎಂದು ಎಬಿವಿಪಿ ಆಗ್ರಹಿಸಿದೆ.

    ರಾಜ್ಯ ಸರ್ಕಾರದ ನಡೆಯನ್ನ ಗಮನಿಸಿದರೆ ಮುಖ್ಯಮಂತ್ರಿಗಳು ದ್ವೇಷದ ರಾಜಕಾರಣ ಮಾಡಿದಂತಿದೆ. ಮೂಡಾ ಹಗರಣದಲ್ಲಿ ಪ್ರಾಸಿಕ್ಯುಶನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಮುಖ್ಯಮಂತ್ರಿಗಳು ತಮ್ಮ ಸ್ವಾರ್ಥಕ್ಕಾಗಿ ಅಧಿಕಾರ ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ವಿಶ್ವವಿದ್ಯಾಲಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಈ ರೀತಿಯ ಚಟುವಟಿಕೆಗಳು ಸೂಕ್ತವಲ್ಲ.

    ಕ್ಲಿಕ್ ಮಾಡಿ ಓದಿ: ರೈತ ಉತ್ಪಾದಕ ಸಂಸ್ಥೆಗಳಿಂದ ಮೈಸೂರು ಕಿಸಾನ್ ಮಾಲ್ ಸ್ಥಾಪನೆ | ಅರ್ಜಿ ಸಲ್ಲಿಸಲು ಡಿ.16 ರವರೆಗೆ ವಿಸ್ತರಣೆ

    ಸಂವಿಧಾನಿಕ ಹುದ್ದೆಗಳ ವಿರುದ್ಧ ಸರ್ಕಾರ ಈ ರೀತಿಯ ನಿರ್ಣಯಗಳಿಂದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ರಾಜಕೀಯ ಬೆರೆತಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ನಿರ್ಣಯವನ್ನು ಕೈಬಿಟ್ಟು ಉನ್ನತ ಶಿಕ್ಷಣದ ಉನ್ನತೀಕರಣಕ್ಕಾಗಿ ಪ್ರಯತ್ನಿಸಬೇಕಾಗಿದೆ ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.

    ಪ್ರತಿಭಟನೆಯಲ್ಲಿ ವಿಭಾಗ ಸಹಸಂಚಾಲಕ ಗೋಪಿ, ಜಿಲ್ಲಾ ಸಂಚಾಲಕ ಕನಕರಾಜ್ ಕೋಡಿಹಳ್ಳಿ, ನಗರ ಸಹ ಕಾರ್ಯದರ್ಶಿ ಸಂಜಯ್, ಚಂದನ, ಜಿಲ್ಲಾ ಸಾಮಾಜಿಕ ಜಾಲತಾಣದ ಆದರ್ಶ, ಕಾರ್ಯಕರ್ತರಾದ ತಿಪ್ಪೇಶ್, ರಾಜು, ಧನಂಜಯ್, ಶ್ರೇಯಸ್, ಜೀವನ್, ಸಂಜು, ರಘು ಇತರರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top