ಹೊಸದುರ್ಗ
ಪ್ರವಾಸಕ್ಕೆ ತೆರಳಿದ್ದ ಖಾಸಗಿ ಶಾಲೆ ಬಸ್ ಅಪಘಾತ | ಸಣ್ಣ ಪುಟ್ಟ ಗಾಯಗಳಿಂದ ಪಾರಾದ 40 ಮಕ್ಕಳು
Published on
CHITRADURGA NEWS | 08 DECEMBER 2024
ಚಿತ್ರದುರ್ಗ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಹೊಸದುರ್ಗದ (ಸಂತ ಆಂಥೋಣಿ) ಖಾಸಗಿ ಶಾಲೆ ಬಸ್ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಪಘಾತವಾಗಿದ್ದು, ಬಸ್ಸಿನಲ್ಲಿದ್ದ ಸುಮಾರು 40 ಮಕ್ಕಳು ಗಾಯಗೊಂಡಿದ್ದಾರೆ.
ಜೋಯಿಡಾ ತಾಲೂಕಿನ ಗಣೇಶ ಗುಡಿ ಎಂಬಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಇದನ್ನೂ ಓದಿ: ವ್ಯಾಪಾರ ಹೆಚ್ಚಾಗವಂತೆ ಪೂಜೆ ಮಾಡುವುದಾಗಿ ಹೇಳಿ ಚಿನ್ನ ಕದ್ದು ಎಸ್ಕೇಪ್
ಘಟನೆಯಲ್ಲಿ ಬಸ್ಸಿನಲ್ಲಿದ್ದ 40 ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಜೋಯಿಡಾ ಮತ್ತು ದಾಂಡೇಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
Continue Reading
Related Topics:Bus accident, Chitradurga Latest, Chitradurga news, Chitradurga Updates, dandeli, Educational tour, featured, Hosadurga, Kannada News, Private School, zoida, ಕನ್ನಡ ಸುದ್ದಿ, ಖಾಸಗಿ ಶಾಲೆ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ಚಿತ್ರದುರ್ಗ ಲೇಟೆಸ್ಟ್, ಜೋಯಿಡಾ, ದಾಂಡೇಲಿ, ಬಸ್ ಅಪಘಾತ, ಶೈಕ್ಷಣಿಕ ಪ್ರವಾಸ, ಹೊಸದುರ್ಗ
Click to comment