ಮುಖ್ಯ ಸುದ್ದಿ
ನೇರ ರೈಲು ಮಾರ್ಗದ ಭೂ ಸ್ವಾಧೀನ ಶೀಘ್ರ ಮುಗಿಸಿ | ಡಿಸಿ ವೆಂಕಟೇಶ್
CHITRADURGA NEWS | 12 DECEMBER 2024
ಚಿತ್ರದುರ್ಗ: ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ, ಕಾಮಗಾರಿ ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಕ್ಲಿಕ್ ಮಾಡಿ ಓದಿ: ಎಸ್.ನಿಜಲಿಂಗಪ್ಪ ಮನೆ ಖರೀದಿ ಮಾಡಿದ ಸರ್ಕಾರ | ದಶಕಗಳ ಗೊಂದಲಕ್ಕೆ ಇತಿಶ್ರೀ | ತಹಶೀಲ್ದಾರ್ ಹೆಸರಿಗೆ ನೊಂದಣಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕಾ ಅದಾಲತ್‍ನಲ್ಲಿ ಇತ್ಯರ್ಥಪಡಿಸುವ ಬಗ್ಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೈಲ್ವೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಲೋಕ್ ಅದಾಲತ್‍ನಲ್ಲಿ ಇತ್ಯರ್ಥ ಪಡಿಸುವ ಪ್ರಕರಣಗಳನ್ನು ನಿಯಾಮಾನುಸಾರ ಇತ್ಯರ್ಥಪಡಿಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮುಂದಿನ ಲೋಕ್ ಅದಾಲತ್‍ನಲ್ಲಿ ಇತ್ಯರ್ಥಪಡಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಕ್ಲಿಕ್ ಮಾಡಿ ಓದಿ: ರಾಜ್ಯ ಸರ್ಕಾರದ ವಿರುದ್ಧ ಲಿಂಗಾಯತ ಯುವ ಪಡೆಯಿಂದ ಪ್ರತಿಭಟನೆ | ಸರ್ಕಾರ ವಜಾಕ್ಕೆ ಆಗ್ರಹ
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗದ ವಿಭಾಗೀಯ ಅಭಿಯಂತರ ರಜತ್ ತೆನಿಯಾ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್ ಸೇರಿದಂತೆ ಮತ್ತಿತರರು ಇದ್ದರು.