
CHITRADURGA NEWS | 17 DECEMBER 2024
ಚಿತ್ರದುರ್ಗ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರಿಗೆ 2018 ರಿಂದ ಕೇಂದ್ರ ಸರ್ಕಾರ ಗೌರವ ಧನ ಹೆಚ್ಚಳ ಮಾಡಿಲ್ಲ. ಯಾವುದೇ ಜೀವನ ಭದ್ರತೆಯಿಲ್ಲದೆ ದುಡಿಯುತ್ತಿದ್ದಾರೆ. ಮಾಸಿಕ ಗೌರವ ಧನ 26 ಸಾವಿರ ರೂ.ಗಳಿಗೆ ಹೆಚ್ಚಿಸಬೇಕೆಂದು ಡಿ.ಎಂ.ಮಲಿಯಪ್ಪ ಒತ್ತಾಯಿಸಿದರು.
ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ಡಿಸೆಂಬರ್ 17 | ಯಾವ ಅಡಿಕೆಗೆ, ಎಷ್ಟು ರೇಟ್

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿ.ಐ.ಟಿ.ಯು.ವತಿಯಿಂದ ಜಿಲ್ಲಾ ಪಂಚಾಯಿತಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್.ಬಣಕಾರ್ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿ ಮಾತನಾಡಿ.
ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ವರ್ಗ-3 ಮತ್ತು 4 ಎಂದು ಪರಿಗಣಿಸಿ ಸೇವೆ ಖಾಯಂಗೊಳಿಸಬೇಕು.
ಕ್ಲಿಕ್ ಮಾಡಿ ಓದಿ: ಎತ್ತಿನ ಗಾಡಿಗೆ ಲಾರಿ ಡಿಕ್ಕಿ | ಗಾಡಿಯಲಿದ್ದ ಮಹಿಳೆ, ಎರಡು ಎತ್ತುಗಳು ಮೃತ
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದಂತೆ ಹದಿನೈದು ಸಾವಿರ ರೂ.ಗಳಿಗೆ ಗೌರವ ಧನ ಹೆಚ್ಚಿಸಬೇಕು. ನಿವೃತ್ತಿಯಾದವರಿಗೆ ಇಡಿಗಂಟು ಮಾಸಿಕ ಹತ್ತು ಸಾವಿರ ರೂ.ಪಿಂಚಣಿ ನೀಡಬೇಕು. ಶಿಕ್ಷಣ ಇಲಾಖೆ ಎಸ್.ಡಿ.ಎಂ.ಸಿ.ಗಳಿಂದ ಪ್ರಾರಂಭಿಸಿರುವ ಎಲ್.ಕೆ.ಜಿ. ಯು.ಕೆ.ಜಿ. ನಿಲ್ಲಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್.ಕೆ.ಜಿ. ಯು.ಕೆ.ಜಿ. ತೆರೆಯಬೇಕು. ಐ.ಸಿ.ಡಿ.ಎಸ್.ಯೋಜನೆಗೆ ಪ್ರತ್ಯೇಕ ನಿರ್ದೇಶನಾಲಯ ಬೇಕು ಎಂದು ಒತ್ತಾಯಿಸಿದರು.
ಸಿ.ಐ.ಟಿ.ಯು. ಸಹ ಸಂಚಾಲಕ ಸಿ.ಕೆ.ಗೌಸ್‍ಪೀರ್ ಮಾತನಾಡಿದರು.
ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾ ಪಂಚಾಯಿತಿಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಕ್ಲಿಕ್ ಮಾಡಿ ಓದಿ: ರೈಲಿಗೆ ಸಿಲುಕಿ ವ್ಯಕ್ತಿ ಸಾವು | ಗುರುತು ಪತ್ತೆಗೆ ಮನವಿ
ಪ್ರತಿಭಟನೆಯಲ್ಲಿ ಇಂದಿರಮ್ಮ, ಜೆ.ಎನ್.ಗಂಗಮ್ಮ, ಬಿ.ಬೋರಮ್ಮ, ನಿರ್ಮಲ, ಆಶಾರಾಣಿ, ಮಂಜುಳ, ಕಮಲ, ಎಸ್.ಕಲ್ಯಾಣಮ್ಮ ಸೇರಿದಂತೆ ಇತರರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
