Connect with us

    ಕಾಂಗ್ರೆಸ್ ಗೆ ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ | ಉಮೇಶ ಕಾರಜೋಳ

    Umesh Karajola

    ಮುಖ್ಯ ಸುದ್ದಿ

    ಕಾಂಗ್ರೆಸ್ ಗೆ ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ | ಉಮೇಶ ಕಾರಜೋಳ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 19 DECEMBER 2024

    ಚಿತ್ರದುರ್ಗ: ಅಂಬೇಡ್ಕರ್ ಅವರ ನಿಧನದ ನಂತರ ಅವರ ಪಾರ್ಥಿವ ಶರೀರ ಮಣ್ಣು ಮಾಡಲು ದೆಹಲಿಯಲ್ಲಿ ಕನಿಷ್ಠ ಅಡಿಯ ಜಾಗ ನೀಡದೆ ಮುಂಬೈಗೆ ಅವರ ದೇಹ ಸಾಗಿಸುವ ವ್ಯವಸ್ಥೆ ಮಾಡದೆ ಅವರನ್ನು ತಾತ್ಸಾರವಾಗಿ ನೋಡಿಕೊಂಡ ಕಾಂಗ್ರೆಸ್ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವ ಯಾವ ನೈತಿಕ ಹಕ್ಕು ಇಲ್ಲ ಎಂದು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ಹೇಳಿದ್ದಾರೆ.

    ಕ್ಲಿಕ್ ಮಾಡಿ ಓದಿ: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆಗೆ, ಗೋವಿಂದ ಕಾರಜೋಳ ಏನು ಹೇಳಿದ್ದಾರೆ ನೋಡಿ..

    ಅಂಬೇಡ್ಕರ್ ಅವರ ಜೀವಿತಾವಧಿಯ ಕಾಲದಲ್ಲಿ ಅವರನ್ನು ನಿರಂತರ ಅಪಮಾನಿಸಿ, ಅವರ ಅರ್ಹತೆ, ವಿದ್ವತ್ತನ್ನು ಗೌರವಿಸದೇ ರಾಜಕೀಯವಾಗಿ ಸಾಮಾಜಿಕವಾಗಿ ತುಳಿದು ಅವರನ್ನು ಚುನಾವಣೆಯಲ್ಲಿ ಸೋಲಿಸಿ ಬಳಿಕ ಅವರನ್ನು ಸೋಲಿಸಿದವರಿಗೆ ಪದ್ಮಭೂಷಣ ನೀಡಿ ಗೌರವಿಸಿತು.

    ಕಾಂಗ್ರೆಸ್ ಶೋಷಿತರನ್ನು ಮತ ಬ್ಯಾಂಕ್ ಮಾಡಿಕೊಂಡು ಇದುವರೆಗೂ ಅಧಿಕಾರದ ಸವಿ ಅನುಭವಿಸುತ್ತಾ ಬಂದಿದೆ.

    ಅಂಬೇಡ್ಕರ್ ಅವರಿಗೆ ಭಾರತರತ್ನ ನೀಡಿ ಗೌರವಿಸಿದ ಹೆಗ್ಗಳಿಕೆ ಭಾರತೀಯ ಜನತಾ ಪಾರ್ಟಿಯದ್ದು. ಅಂಬೇಡ್ಕರ್ ಅವರ ಇತಿಹಾಸ ಮುಂದಿನ ಭವಿಷ್ಯದೊಂದಿಗೆ ತಿಳಿಯುವಂತೆ ಸಂವಿಧಾನ ದಿನ ಆಚರಿಸುವ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದು ಭಾರತೀಯ ಜನತಾ ಪಾರ್ಟಿ.

    ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮೆಡಿಕಲ್ ಕಾಲೇಜು ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

    ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಕಾಂಗ್ರೆಸ್ ಅಂದು ಅಂಬೇಡ್ಕರ್ ಅವರನ್ನು ಅವಮಾನಿಸಿ ಇಂದು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಅಂಬೇಡ್ಕರ್ ಅವರ ಹೆಸರನ್ನು ಪಟಿಸುತ್ತಿರುವ ಕಾಂಗ್ರೆಸ್ ಗೋಮುಖ ವ್ಯಾಘ್ರತನವನ್ನು ಬಯಲು ಮಾಡುವ ನಿಟ್ಟಿನಲ್ಲಿ ಆಡಿದ ಮಾತುಗಳನ್ನು ತಿರುಚುವ ಮೂಲಕ ಅಪಪ್ರಚಾರ ನಡೆಸಿ ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹೊರಟಿರುವ ಕಾಂಗ್ರೆಸ್ ನಡೆ ನಾಚಿಕೆಗೇಡಿತನದ ಪರಮಾವಧಿಯಾಗಿದೆ ಎಂದು ಉಮೇಶ್ ಕಾರಜೋಳ ಖಂಡಿಸಿದ್ದಾರೆ.

    ರಾಷ್ಟ್ರ ಸಂತ ಡಾ.ಬಿ.ಆರ್ ಅಂಬೇಡ್ಕರ ಅವರನ್ನು ಸರ್ವರಿತಿಯೀಂದಲು ಗೌರವಿಸುವ ದೃಷ್ಟಿಯಿಂದ 2014 ರಲ್ಲಿ‌ ಅಧಿಕಾರಕ್ಕೆ ಬಂದ ಮೋದಿ ಸರ್ಕಾರದ ನೇತೃತ್ವದಲ್ಲಿ ಡಾ. ಬಿ.ಆರ್.ಅಂಬೇಡ್ಕರ ಅವರ ಕೊಡುಗೆಯನ್ನು ಸ್ಮರಿಸಿ ಅವರಿಗೆ ಗೌರವ ಸಲ್ಲಿಸುವ ದೃಷ್ಟಿಯಿಂದ ಅಂಬೇಡ್ಕರರಿಗೆ ಸಂಬಂಧಿಸಿದ 5 ಪ್ರಮುಖ ಸ್ಥಾನಗಳನ್ನ ಪಂಚತಿರ್ಥ ಕ್ಷೇತ್ರಗಳು ಎಂದು ಘೋಷಣೆ ಮಾಡಿದೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top