Connect with us

    ಹಿರಿಯ ನಾಗರಿಕರಿಗೆ ಶಾಸಕರ ಅನುದಾನದಲ್ಲಿ ರೂ.20 ಲಕ್ಷ | ಕೆ.ಸಿ. ವೀರೇಂದ್ರ ಪಪ್ಪಿ

    K.C. Virendra Pappi

    ಮುಖ್ಯ ಸುದ್ದಿ

    ಹಿರಿಯ ನಾಗರಿಕರಿಗೆ ಶಾಸಕರ ಅನುದಾನದಲ್ಲಿ ರೂ.20 ಲಕ್ಷ | ಕೆ.ಸಿ. ವೀರೇಂದ್ರ ಪಪ್ಪಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 03 JANUARY 2025

    ಚಿತ್ರದುರ್ಗ: ಶಾಸಕರ ಅನುದಾನದಲ್ಲಿ ರೂ.20 ಲಕ್ಷ ಹಿರಿಯ ನಾಗರಿಕರಿಗಾಗಿಯೇ ಮೀಸಲು ಇರಿಸಿರುವುದಾಗಿ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಹೇಳಿದರು.

    ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಪತ್ರಕರ್ತರಿಗೆ ಪ್ರಶಸ್ತಿಗಳ ಮಳೆ | ರಾಜ್ಯಮಟ್ಟದ ಪುರಸ್ಕಾರಕ್ಕೆ ಐದು ಜನ ಆಯ್ಕೆ

    ನಗರದ ಜಿಲ್ಲಾ ಬಾಲಭವನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದ ವತಿಯಿಂದ ಹಮ್ಮಿಕೊಂಡಿದ್ದ “ಹಿರಿಯ ನಾಗರಿಕರಿಗೆ “ಉಚಿತ ನೇತ್ರ ತಪಾಸಣಾ ಶಿಬಿರ” ಉದ್ಘಾಟಿಸಿ ಅವರು ಮಾತನಾಡಿದರು.

    ಹಿರಿಯ ನಾಗರಿಕರ ಆರೋಗ್ಯ ಮತ್ತು ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು. ಈ ದೃಷ್ಟಿಯಿಂದ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಪ್ರತಿ ಜಿಲ್ಲೆಯಲ್ಲಿ 3 ವೃದ್ಧಾಶ್ರಮಗಳನ್ನು ಸ್ಥಾಪಿಸಲಾಗಿದೆ. ಹಿರಿಯರಿಗಾಗಿ 1090 ಸಹಾಯವಾಣಿ ತೆರಯಲಾಗಿದೆ. ಆರೋಗ್ಯ ಸಮಸ್ಯೆ ಹಾಗೂ ಕಾನೂನು ನೆರವು, ಆಪ್ತ ಸಮಾಲೋಚನೆ ಪಡೆಯಲು ಹಿರಿಯ ನಾಗರಿಕರು ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.

    ಕೆ.ಎಸ್.ಆರ್.ಟಿ. ಬಸ್ ಪ್ರಯಾಣ ದರದಲ್ಲೂ ಹಿರಿಯ ನಾಗರಿಕರಿಗೆ ರಿಯಾಯಿತಿ ನೀಡಲಾಗಿದೆ. ಸಂಧ್ಯಾ ಸುರಕ್ಷಾ ಯೋಜನೆಯಡಿ 60 ರಿಂದ 65 ವರ್ಷದವರಿಗೆ ರೂ.800 ಹಾಗೂ 65 ವರ್ಷ ಮೇಲ್ಪಟ್ಟವರಿಗೆ ರೂ.1200 ನೀಡಲಾಗುತ್ತಿದೆ. ಇದರೊಂದಿಗೆ 2007ರಲ್ಲಿ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆಯನ್ನು ಸಹ ಜಾರಿ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲೂ ಹಿರಿಯ ನಾಗರಿಕರ ಅವಹಾಲುಗಳನ್ನು ಆಲಿಸಲು ನ್ಯಾಯ ಮಂಡಳಿ ಸ್ಥಾಪಿಸಲಾಗಿದೆ ಎಂದರು.

    ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?

    ವಿಜ್ಞಾನ ಎಷ್ಟೇ ಮುಂದುವರೆದರೂ, ಇಂದಿಗೂ ಕೃತಕವಾಗಿ ಕಣ್ಣು ತಯಾರಿಸುವುದು ಸಾಧ್ಯವಾಗಿಲ್ಲ. ನಮ್ಮ ಕಣ್ಣುಗಳ ರಕ್ಷಣೆ ನಮ್ಮದೇ ಜವಾಬ್ದಾರಿಯಾಗಿದೆ. ಕೆ.ಸಿ.ವಿರೇಂದ್ರ ಪಪ್ಪಿ ಅಭಿಮಾನಿ ಬಳಗ ಹಾಗೂ ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಕ್ಷೇತ್ರದ 10 ಪಂಚಾಯಿತಿಗಳಲ್ಲಿ ಹಿರಿಯ ನಾಗರಿಕರು ಸೇರಿದಂತೆ ಎಲ್ಲಾ ವರ್ಗದವರಿಗೆ ಉಚಿತ ಕಣ್ಣಿನ ತಪಾಸಣೆ ಶಿಬಿರ ನಡೆಸಲಾಗಿದೆ.

    4830 ಜನರಿಗೆ ಉಚಿತ ಕಣ್ಣಿನ ತಪಾಸಣೆ ನಡೆಸಲಾಗಿದೆ. 213 ಜನರನ್ನು ಬೆಂಗಳೂರಿನ ಶಂಕರ್ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯುದು ಉಚಿತವಾಗಿ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಮಾಡಿಸಿ, ಸುರಕ್ಷಿತವಾಗಿ ಮರಳಿ ಅವರ ಮನೆಗಳಿಗೆ ತಲುಪಿಸಲಾಗಿದೆ. 861 ಜನರಿಗೆ ಉಚಿತ ಕನ್ನಡಕ ವಿತರಿಸಲಾಗಿದೆ.

    ಮುಂದಿನ ದಿನಗಳಲ್ಲಿ ಉಳಿದ ಪಂಚಾಯಿತಿಗಳಲ್ಲಿಯೂ ಉಚಿತ ಕಣ್ಣಿನ ಶಿಬಿರ ಆಯೋಜಿಸಲಾಗುವುದು. ಇದರೊಂದಿಗೆ ಸರ್ಕಾರದ ವತಿಯಿಂದ ಆಯೋಜಿಸಲಾದ ಶಿಬಿರದಲ್ಲೂ ಕಣ್ಣಿನ ತಪಾಸಣೆ ಹಾಗೂ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಹಿರಿಯ ನಾಗರಿಕರು ಮಾಡಿಸಿಕೊಳ್ಳುವಂತೆ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಸಲಹೆ ನೀಡಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಮುಪ್ಪು ಎನ್ನುವುದು ಪ್ರತಿಯೊಬ್ಬರ ಜೀವನದಲ್ಲಿ ಬರಲಿದೆ. ವಯಸ್ಸಾದಂತೆ ನಮ್ಮ ದೇಹವು ಅನೇಕ ಸಮಸ್ಯೆಗಳಿಗೆ ಒಳಗಾಗುತ್ತದೆ. ಅದರಲ್ಲಿ ಪ್ರಮುಖವಾಗಿ ಕಣ್ಣುಗಳು ಅತೀ ಅವಶ್ಯಕ. ಇಲಾಖೆ ವತಿಯಿಂದ ಇದೇ ಪ್ರಥಮ ಬಾರಿಗೆ ನೇತ್ರ ತಪಾಸಣೆ ಶಿಬಿರ ಏರ್ಪಡಿಸಿ, ಶಸ್ತ್ರಚಿಕಿತ್ಸೆಗೆ ಅವಕಾಶ ಕಲ್ಪಿಸಿದ್ದು, ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದರು.

    ಕ್ಲಿಕ್ ಮಾಡಿ ಓದಿ: ವಿವಿ ಸಾಗರ ಜಲಾಶಯದ ಇಂದಿನ ಮಟ್ಟ

    ಜಿಲ್ಲಾಸ್ಪತ್ರೆಯ ನೇತ್ರ ತಜ್ಞ ಡಾ.ಪ್ರದೀಪ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾತನಾಡಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಪಯ್ಯ, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ನಾಗರಾಜ್, ತಾಲ್ಲೂಕು ಪಂಚಾಯಿತಿ ಇಒ ವೈ.ರವಿಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸಮೂರ್ತಿ ಸೇರಿದಂತೆ ಹಿರಿಯ ನಾಗರಿಕರು ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top