
CHITRADURGA NEWS | 04 JANUARY 2025
ಚಿತ್ರದುರ್ಗ: 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನಾಧಾರಿತ ಬೆಳೆವಿಮೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ 3584 ರೈತರಿಗೆ ರೂ.23.33 ಕೋಟಿ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿಯರು ವಿಮಾದಾರರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಕರ್ತವ್ಯ ಲೋಪ | ಸೇವೆಯಿಂದ ವಜಾ

ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನಧಾರಿತ ಬೆಳೆವಿಮೆ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಅಡಿಕೆ, ಮಾವು ಮತ್ತು ದಾಳಿಂಬೆ ಬೆಳೆಗೆ ಜಿಲ್ಲೆಯ 3648 ರೈತರು ರೂ.226.99 ಲಕ್ಷ ಪ್ರೀಮಿಯಂ ಪಾವತಿಸಿ ನೋಂದಾಯಿಸಿಕೊಂಡಿದ್ದು, ಈ ಪೈಕಿ 3584 ರೈತರಿಗೆ ರೂ.23.33 ಲಕ್ಷ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿಯರು ಜಿಲ್ಲೆ ಎಲ್ಲಾ ವಿಮಾದಾರರ ಖಾತೆಗೆ ಬಿಡುಗಡೆ ಮಾಡಿರುತ್ತಾರೆ.
ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಸಹಕರಿಸಿದ ಜಿಲ್ಲೆಯ ಎಲ್ಲ ರೈತರಿಗೆ ಅಭಿನಂದನೆ ಸಲ್ಲಿಸುತ್ತಾ, ಮುಂದಿನ ದಿನಗಳಲ್ಲಿ ಈ ಯೋಜನೆ ಅನುಷ್ಟಾನ ಮಾಡಲು ಸಹಕರಿಸಲು ಕೋರಿದ್ದಾರೆ.
ಕ್ಲಿಕ್ ಮಾಡಿ ಓದಿ: ದೇವಸ್ಥಾನ ಪೂಜಾರಿಕೆ ವಿಚಾರದಲ್ಲಿ ಗುಂಪು ಘರ್ಷಣೆ | ಹೊಸದುರ್ಗ ತಾಲೂಕಿನಲ್ಲಿ ಘಟನೆ
ಮುಂದಿನ ವರ್ಷಗಳಲ್ಲಿ ಈ ಯೋಜನೆಯಡಿ ನೋಂದಾಯಿಸಿಕೊಳ್ಳುವ ರೈತರು ಯೋಜನೆಯ ಸದುಪಯೋಗ ಪಡೆಯಲು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಕಡ್ಡಾಯವಾಗಿ ಬೆಳೆಯನ್ನು ಇಂದೀಕರಿಸಬೇಕು ಹಾಗೂ ಹಿಂದಿನ 2 ವರ್ಷಗಳಲ್ಲಿ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಕಡ್ಡಾಯವಾಗಿ ಬೆಳೆಯನ್ನು ನೊಂದಾಯಿಸಿಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
