ಹೊಳಲ್ಕೆರೆ
ಚೆಕ್ಡ್ಯಾಂ ನಿರ್ಮಾಣ ಕಾಮಗಾರಿಗೆ ಶಾಸಕ ಚಂದ್ರಪ್ಪ ಭೂಮಿಪೂಜೆ
CHITRADURGA NEWS | 04 JANUARY 2025
ಹೊಳಲ್ಕೆರೆ: ತಾಲ್ಲೂಕಿನ ಕುಮ್ಮಿನಘಟ್ಟ ಗ್ರಾಮದಲ್ಲಿ 2.10 ರೂ.ವೆಚ್ಚದಲ್ಲಿ ನೂತನ ಚೆಕ್ಡ್ಯಾಂ ನಿರ್ಮಾಣ ಕಾಮಗಾರಿಗೆ ಶನಿವಾರ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ ಸಲ್ಲಿಸಿದರು.
ಕ್ಲಿಕ್ ಮಾಡಿ ಓದಿ: ರೈತರಿಗೆ ಗುಡ್ ನ್ಯೂಸ್ | ಜಿಲ್ಲೆಯಲ್ಲಿ ರೂ.23.33 ಕೋಟಿ ಬೆಳೆವಿಮೆ ಬಿಡುಗಡೆ
ನಂತರ ಮಾತನಾಡಿದ ಶಾಸಕರು, ವ್ಯರ್ಥವಾಗಿ ಹರಿದು ಹೋಗುವ ಮಳೆ ನೀರನ್ನು ತಡೆಯುವುದಕ್ಕಾಗಿ ತಾಲ್ಲೂಕಿನ ಎಲ್ಲಾ ಹಳ್ಳಿಗಳಲ್ಲಿ ಚೆಕ್ಡ್ಯಾಂ ಕಟ್ಟಿಸಿರುವುದರ ಪರಿಣಾಮ ಬೋರ್ವೆಲ್ಗಳಲ್ಲಿ ನೀರು ಹೆಚ್ಚು ಬರುತ್ತವೆ ಎಂದು ಹೇಳಿದರು.
ತಾಲ್ಲೂಕಿನಾದ್ಯಂತ ಎಲ್ಲಾ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಿದ್ದೇನೆ. ಗುಣ ಮಟ್ಟದ ಶಾಲಾ-ಕಾಲೇಜು, ಹೈಟೆಕ್ ಆಸ್ಪತ್ರೆಗಳ ನಿರ್ಮಾಣ, ಮುರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರುರಾಣಿ ಚೆನ್ನಮ್ಮ ಶಾಲೆ, ಸರ್ಕಾರಿ ಶಾಲೆಗೆ ಬರುವ ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ಸ್ವಂತ ಖರ್ಚಿನಿಂದ ಬಸ್ಗಳನ್ನು ನೀಡಿದ್ದೇನೆ.
ರೈತರಿಗೆ ವಿದ್ಯುತ್ ಸಮಸ್ಯೆಯಾಗಬಾರದೆಂದು ಚಿಕ್ಕಜಾಜೂರಿನ ಕೋಟೆಹಾಳ್ ಸಮೀಪ 500 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗುತ್ತಿದ್ದು, ಜೋಗ್ಫಾಲ್ಸ್ನಿಂದ ನೇರವಾಗಿ ವಿದ್ಯುತ್ ಪೂರೈಕೆಯಾಗಲಿದೆ.
ಕ್ಲಿಕ್ ಮಾಡಿ ಓದಿ: ಕರ್ತವ್ಯ ಲೋಪ | ಸೇವೆಯಿಂದ ವಜಾ
ಎಲ್ಲಾ ಕಡೆ ನೀರಿನ ಟ್ಯಾಂಕ್ಗಳನ್ನು ಕಟ್ಟಿಸಿದ್ದೇನೆ. ಇನ್ನೆರಡು ತಿಂಗಳಲ್ಲಿ ಚೆಕ್ಡ್ಯಾಂ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಂಜಿನಿಯರ್ ಗಳಿಗೆ ಶಾಸಕ ಎಂ.ಚಂದ್ರಪ್ಪ ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಲಮ್ಮ ನಟರಾಜ್, ಸದಸ್ಯರುಗಳಾದ ರಮೇಶ್, ಚಂದ್ರಪ್ಪ, ತಿಮ್ಮಪ್ಪ, ಮಂಜುನಾಥ, ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಗಳಾದ ನಾಗರಾಜ್, ಶರಣಪ್ಪ ಹಾಗೂ ಗ್ರಾಮದ ಮುಖಂಡರುಗಳು ಇದ್ದರು.