Connect with us

    ಚಿತ್ರದುರ್ಗ ಜಿಲ್ಲೆಯ ಹೊಸ ಮತದಾರರ ಪಟ್ಟಿ ಪ್ರಕಟ | ಯಾವ ತಾಲೂಕಿನಲ್ಲಿ ಎಷ್ಟು ಮತದಾರರು?

    New voter list published

    ಮುಖ್ಯ ಸುದ್ದಿ

    ಚಿತ್ರದುರ್ಗ ಜಿಲ್ಲೆಯ ಹೊಸ ಮತದಾರರ ಪಟ್ಟಿ ಪ್ರಕಟ | ಯಾವ ತಾಲೂಕಿನಲ್ಲಿ ಎಷ್ಟು ಮತದಾರರು?

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 06 JANUARY 2025

    ಚಿತ್ರದುರ್ಗ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು, ಜಿಲ್ಲೆಯಲ್ಲಿ 14,29,555 ಮತದಾರರು ಇದ್ದು, ಪುರುಷ-7,09,048, ಮಹಿಳೆ-7,20,420 ಹಾಗೂ ಇತರೆ-87 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.

    ಕ್ಲಿಕ್ ಮಾಡಿ ಓದಿ: ವಾಣಿವಿಲಾಸ ಸಾಗರ ಜಲಾಶಯದ ಇಂದಿನ ಮಟ್ಟ

     ಸೋಮವಾರ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದ ಅನ್ವಯ ವಿಧಾನಸಭಾ ಕ್ಷೇತ್ರವಾರು ಮತದಾರರ ಅಂತಿಮ ಪಟ್ಟಿಯನ್ನು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಪ್ರಚುರಪಡಿಸಿದರು.

    ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನುಸಾರ ಪ್ರತಿ ವರ್ಷ ಅಕ್ಟೋಬರ್ ಮಾಹೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಒಟ್ಟು 1,661 ಮತಗಟ್ಟೆಗಳಿದ್ದು, ಕರಡು ಮತದಾರರ ಪಟ್ಟಿ ಪ್ರಕಟಣೆಯನ್ವಯ ಈ ಮೊದಲು ಜಿಲ್ಲೆಯಲ್ಲಿ 14,35,994 ಮತದಾರರಿದ್ದರು. ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಂತರ ಜಿಲ್ಲೆಯಲ್ಲಿ 14,29,555 ಮತದಾರರಿದ್ದಾರೆ ಎಂದು ತಿಳಿಸಿದರು.

    ಕ್ಲಿಕ್ ಮಾಡಿ ಓದಿ: ಮಾದಾರ ಚನ್ನಯ್ಯ ಶ್ರೀ ಬಗ್ಗೆ ಅವಹೇಳನಕಾರಿ ಪೋಸ್ಟ್ | ದೂರು ದಾಖಲು

    ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ-2025ರ ಕಾರ್ಯಕ್ರಮದ ಅನ್ವಯ ಪ್ರಸಕ್ತ ಸಾಲಿನ ವರ್ಷದಲ್ಲಿ 13,758 ಮತದಾರರನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ. ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವಾಗ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಮರಣ, ಡಬಲ್ ಎಂಟ್ರಿ ಸೇರಿದಂತೆ ಒಟ್ಟು 20,197 ಮತದಾರರನ್ನು ನಿಯಮಾನುಸಾರವಾಗಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಒಟ್ಟು 11,727 ಮತದಾರರ ಹೆಸರು, ಭಾವಚಿತ್ರ ಬದಲಾವಣೆ, ತಂದೆ, ಗಂಡನ ಹೆಸರು ಹಾಗೂ ವಿಳಾಸ ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದರು.

    ವಿಧಾನಸಭಾ ಕ್ಷೇತ್ರವಾರು ಮತದಾರರ ಸಂಖ್ಯೆ :

    ಮತದಾರರ ಅಂತಿಮ ಪಟ್ಟಿಯನ್ವಯ ಜಿಲ್ಲೆಯಲ್ಲಿ ಒಟ್ಟು 14,29,555 ಮತದಾರರು ಇದ್ದು, ಪುರುಷ-7,09,048, ಮಹಿಳೆ-7,20,420 ಹಾಗೂ ಇತರೆ-87 ಮತದಾರರು ಇದ್ದಾರೆ. ವಿಧಾನಸಭಾ ಕ್ಷೇತ್ರವಾರು ಮತದಾರರ ಸಂಖ್ಯೆಯ ವಿವರ ಇಂತಿದೆ.

    ಮೊಳಕಾಲ್ಮೂರು : ಪುರುಷ-1,25,800, ಮಹಿಳೆ-1,25,575, ಇತರೆ-13, ಒಟ್ಟು 2,51,387 ಮತದಾರರಿದ್ದಾರೆ.

    ಚಳ್ಳಕೆರೆ : ಪುರುಷ-1,10,954, ಮಹಿಳೆ-1,13,139, ಇತರೆ-08, ಒಟ್ಟು 2,24,101.

     ಚಿತ್ರದುರ್ಗ: 1,31,022, ಮಹಿಳೆ-1,36,410, ಇತರೆ-39, ಒಟ್ಟು 2,67,471.

     ಹಿರಿಯೂರು: 1,22,266, ಮಹಿಳೆ-1,25,793, ಇತರೆ-16, ಒಟ್ಟು 2,48,075.

     ಹೊಸದುರ್ಗ: 1,00,596, ಮಹಿಳೆ-1,01,185, ಇತರೆ-01, ಒಟ್ಟು 2,01,782.

     ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಪುರುಷ- 1,18,410, ಮಹಿಳೆ-1,18,319, ಇತರೆ-10, ಒಟ್ಟು 2,36,739 ಮತದಾರರಿದ್ದಾರೆ.

    29,240 ಯುವ ಮತದಾರರು:  

    ಕರಡು ಮತದಾರರ ಪಟ್ಟಿಯಲ್ಲಿ 18 ರಿಂದ 19 ವರ್ಷದ 22,667 ಯುವ ಮತದಾರರಿದ್ದು, ಅಂತಿಮ ಪಟ್ಟಿಯನ್ವಯ ಈ ಸಂಖ್ಯೆ 29,240ಕ್ಕೆ ಏರಿಕೆಯಾಗಿದೆ. 369 ಸೇವಾ ಮತದಾರರಿದ್ದಾರೆ ಎಂದು ತಿಳಿಸಿದರು.

    ಕ್ಲಿಕ್ ಮಾಡಿ ಓದಿ: ಕಾಯಕಯೋಗಿ ಶ್ರೀ ಸಿದ್ಧರಾಮೇಶ್ವರ ಪ್ರಶಸ್ತಿಗೆ ಸಾಣೇಹಳ್ಳಿ ಶ್ರೀ ಆಯ್ಕೆ

    ಭಾರತ ಚುನಾವಣಾ ಆಯೋಗವು ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 14ಕ್ಕೆ ತಿದ್ದುಪಡಿ ಮಾಡಿ ಮತದಾರರ ನೋಂದಣಿ ನಿಯಮಗಳು 1960ಕ್ಕೆ ಅನುಗುಣವಾಗಿ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರ್ಪಡೆ ಮಾಡಲು 4 ಅರ್ಹತಾ ದಿನಾಂಕಗಳನ್ನು ನೀಡಿ, ಅವಕಾಶ ಕಲ್ಪಿಸಿದ್ದು, ಜನವರಿ 1, ಏಪ್ರಿಲ್ 1, ಜುಲೈ 1, ಅಕ್ಟೋಬರ್ 1ಕ್ಕೆ 18 ವರ್ಷ ಪೂರ್ಣಗೊಳ್ಳುವವರು ಹಾಗೂ ಅರ್ಹ ಮತದಾರರು ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದವರು.

    ಹಾಗೂ ಹೆಸರು ಕೈಬಿಟ್ಟುಹೋಗಿರುವವರು ಹಾಗೂ ಮತದಾರರ ಪಟ್ಟಿಯಲ್ಲಿ ಮಾಹಿತಿ ತಿದ್ದುಪಡಿ ಮಾಡಿಸಬೇಕಾದಲ್ಲಿ ಮತ್ತು ಅದೇ ವಿಧಾನ ಸಭಾ ಕ್ಷೇತ್ರದ ಬೇರೆ ಮತಗಟ್ಟೆಗೆ ವರ್ಗಾಯಿಸಬೇಕಾದಲ್ಲಿ ನಿಗಧಿಪಡಿಸಿರುವ ನಮೂನೆಗಳಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ತಮ್ಮ ವ್ಯಾಪ್ತಿಯ ಮತದಾನ ಕೇಂದ್ರದಲ್ಲಿ, ತಾಲ್ಲೂಕು ಕಚೇರಿಯಲ್ಲಿ, ಉಪವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ನೀಡಿ ಸ್ವೀಕೃತಿ ಪಡೆಯಬಹುದಾಗಿದೆ.

    www.ceokarntaka.nic.inhttps://chitradurga.nic.in ವೆಬ್‍ಸೈಟ್‍ನಲ್ಲಿಯೂ ಸಹ ಪರಿಶೀಲಿಸಿಕೊಂಡು ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿಗಳನ್ನು ಗಿಊಂ ಂಠಿಠಿ ನಲ್ಲಿಯೂ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

    ಕ್ಲಿಕ್ ಮಾಡಿ ಓದಿ: 15. ಹಿರೇ ಬಡಗಿ ಗೌನಳ್ಳಿಗೆ ಬಂದರು | ಹಬ್ಬಿದಾ ಮಲೆ ಮಧ್ಯದೊಳಗೆ

    ರಾಜಕೀಯ ಪಕ್ಷದವರು ಪ್ರತಿಯೊಂದು ಮತಗಟ್ಟೆಗೆ ಮತಗಟ್ಟೆ ಮಟ್ಟದ ಏಜೆಂಟರನ್ನು ನೇಮಕ ಮಾಡಿ, ಏಜೆಂಟರು ತಮ್ಮ ವ್ಯಾಪ್ತಿಯ ಮತದಾರರ ಪಟ್ಟಿಗೆ ಅರ್ಹರನ್ನು ಸೇರಿಸುವ, ಬಿಡತಕ್ಕ, ತಿದ್ದುಪಡಿ, ಮಾಡಲು ಬಿಎಲ್‍ಓಗಳಿಗೆ ಸಹಾಯ ಮಾಡುವಂತೆ ಕೋರಿದರು.

    ಮತದಾರರ ಭಾವಚಿತ್ರವಿರುವ ಗುರತಿನ ಚೀಟಿಯು ನೇರವಾಗಿ ಆಯಾ ಮತದಾರರ ವಿಳಾಸಕ್ಕೆ ಅಂಚೆ ಮೂಲಕ ಉಚಿತವಾಗಿ ತಲುಪಿಸಲಾಗುವುದು.

    ಎಪಿಕ್ ಕಾರ್ಡ್ ಕಳೆದುಹೋದಲ್ಲಿ ಅಥವಾ ಬದಲಿ ಕಾರ್ಡ್ ಪಡೆಯಲು ಸಂಬಂಧಪಟ್ಟ ಬಿಎಲ್‍ಓ, ತಹಶೀಲ್ದಾರ್ ಅಥವಾ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿಯೇ ಅರ್ಜಿಯನ್ನು ಸಲ್ಲಿಸಿ, ಉಚಿತವಾಗಿ ಕಾರ್ಡ್ ಪಡೆಯಬಹುದಾಗಿದೆ.

    ಮತದಾರರ ಪಟ್ಟಿಯ ಬಗ್ಗೆ ಯಾವುದೇ ಸಂದೇಹಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಜಿಲ್ಲಾ ಸಂಪರ್ಕ ಕೇಂದ್ರದ ಸಹಾಯವಾಣಿ ಸಂಖ್ಯೆ-ಟೋಲ್ ಫ್ರೀ ಸಂಖ್ಯೆ 1950ಕ್ಕೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದರು.

    ಕ್ಲಿಕ್ ಮಾಡಿ ಓದಿ: ಹುಲ್ಲೂರು ಅನಂತರೆಡ್ಡಿ ನಿಧನ | ಬಸವೇಶ್ವರ ಐ ಬ್ಯಾಂಕ್ ಗೆ ನೇತ್ರದಾನ

    ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಸಿಪಿಐ(ಎಂ)ಡಿಒಸಿ ಸಿ.ಕೆ.ಗೌಸ್‍ಪೀರ್, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕಿರಣ್ ಸೇರಿದಂತೆ ಚುನಾವಣಾ ಶಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top