ಮುಖ್ಯ ಸುದ್ದಿ
ಹಿರಿಯೂರು ತೋಟಗಾರಿಕೆ ವಿದ್ಯಾರ್ಥಿಗಳಿಂದ ಹಾಲಿನ ಮೌಲ್ಯವರ್ಧನೆ ಕುರಿತು ತರಬೇತಿ

CHITRADURGA NEWS | 20 JANUARY 2025
ಚಿತ್ರದುರ್ಗ: ತಾಲ್ಲೂಕಿನ ಕುಂಚಿಗನಾಳ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಈಚೆಗೆ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಹಾಲಿನ ಮೌಲ್ಯವರ್ಧನೆ ತರಬೇತಿ ಮತ್ತು ಪ್ರಾತ್ಯಕ್ಷಿಕೆ ನಡೆಯಿತು.
Also Read: Kannada Novel : 17. ಕೊಳ್ಳಿ ಇಕ್ಕಿದರು
ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯದ ಸಹಯೋಗದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.
ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ.ಡಿ.ಶಶಿಕಲಾ ಬಾಯಿ ಅವರು, ನಮ್ಮ ದಿನ ನಿತ್ಯದ ಆಹಾರ ಕ್ರಮದಲ್ಲಿ ಪೋಲಾಗುವ ಆಹಾರದಿಂದ ನಾವು ಹೇಗೆ ಸದುಪಯೋಗ ಪಡೆದುಕೊಳ್ಳಬೇಕು ಎಂಬುದರ ಕುರಿತು ತರಬೇತಿ ಮತ್ತು ಪ್ರಾತ್ಯಕ್ಷಿಕೆ ಮಾಡಿದರು.
ನಾವೇನು ಊಟ ಮಾಡುತ್ತಿದ್ದೇವೆ. ಯಾವ ಬಗೆಯ ಆಹಾರ ಸ್ವೀಕರಿಸುತ್ತಿದ್ದೇವೆ ಎಂಬುದನ್ನು ಮತ್ತು ಯಾಕೆ ಊಟ ಮಾಡುತ್ತಿದ್ದೇವೆ ಎಂಬುದನ್ನು ಮುಖ್ಯವಾಗಿ ಅರಿಯಬೇಕು ಎಂದು ಹೇಳಿದರು.
Also Read: ಇಂದಿನ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಧಾರಣೆ
ಸಮತೋಲಿತ ಆಹಾರದ ಕಡೆಗೆ ನಿರ್ಲಕ್ಷೆ ವಹಿಸುತಿದ್ದೇವೆ. ಗಾಳಿ, ನೀರಿನ ನಂತರ ಮನುಷ್ಯನಿಗೆ ಅತ್ಯವಶ್ಯವಾದ ಮೂರನೆಯ ಜೀವನದಾರವೇ ಆಹಾರ. ರಾಸಾಯನಿಕಗಳನ್ನು ಬಳಸಿ ಆಹಾರ ಧಾನ್ಯಗಳನ್ನು ಉತ್ಪಾದಿಸುತ್ತಿದ್ದೇವೆ. ನಮ್ಮ ದಿನನಿತ್ಯದ ಆಹಾರದಲ್ಲಿ ಮೂರು ಬಿಳಿ ಪದಾರ್ಥಗಳಾದ ಮೈದಾ, ಸಕ್ಕರೆ ಮತ್ತು ಅಕ್ಕಿಯನ್ನು ಮಿತಗೊಳಿಸಬೇಕು.
ಇಲ್ಲದಿದ್ದಲ್ಲಿ ನಮ್ಮ ಶರೀರದ ಜೀವಕೋಶಗಳಲ್ಲಿ ಸರಿಯಾದ ಕಾರ್ಯನಿರ್ವಹಣೆಗೆ ಇರಬೇಕಾದ ಅಂಶಗಳ ಅನುಪಾತ ಏರುಪೇರಾಗಿ ಹೆಚ್ಚು ಶಕ್ತಿಯ ವ್ಯಯವಾಗಿ ನಾವು ಕಾಯಿಲೆಗೆ ಎಡೆ ಮಾಡಿಕೊಡುತ್ತೇವೆ. ಜಂಕ್ ಫುಡ್‍ನಲ್ಲಿ ಅತಿ ಬೇಯಿಸಿದ ಆಹಾರಗಳಲ್ಲಿ, ಸಿದ್ಧ ಆಹಾರಗಳಲ್ಲಿ ಹೆಚ್ಚು ಹೆಚ್ಚು ಉಪ್ಪಿನಾಂಶ ಇರುವುದರಿಂದ ಅವುಗಳನ್ನು ಹೆಚ್ಚು ಉಪಯೋಗಿಸುವುದು ಅಪಾಯಕಾರಿ ಎಂದು ಹೇಳಿದರು.
ಒಡೆದು ಹೋದ ಹಾಲಿನಿಂದ ಮಾಡುವ ಪದಾರ್ಥವೇ ಪನ್ನೀರ್ ಮತ್ತು ವೇ. ಪನೀರ್ ತಯಾರಿಕೆ ಮತ್ತು ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿದರು.
ಪನೀರ್ ಹಾಗೂ ವೇ ನಲ್ಲಿ ಔಷಧೀಯ ಗುಣಗಳಿರುವುದರಿಂದ ಪ್ರಸ್ತುತ ದಿನಗಳಲ್ಲಿ ಇದರ ಬಳಕೆ ಹೆಚ್ಚಾಗಿದೆ. ವಿಟಮಿನ್, ಕ್ಯಾಲ್ಸಿಯಂ ಪ್ರಮಾಣ ಅಧಿಕವಾಗಿದೆ. ಇದರಿಂದ ಸ್ತನ ಕ್ಯಾನ್ಸರ್ ಸೇರಿದಂತೆ ನಾನಾ ಕಾಯಿಲೆಗಳಿಗೆ ರಾಮಬಾಣವಾಗಿದೆ ಎಂದು ತಿಳಿಸಿದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಶೇಂಗಾ, ತೊಗರಿಕಾಳು ರೇಟ್ ಎಷ್ಟಿದೆ?
ಹಾಲಿನಿಂದ ಸುವಾಸಿತ ಹಾಲು, ಸುವಾಸಿತ ಹಾಲಿನ ಕ್ಯಾಂಡಿ, ವೇ ಕ್ಯಾಂಡಿ ಹಾಗೂ ಪನೀರನ್ನು ಅತಿ ಸುಲಭವಾಗಿ ಮನೆಯಲ್ಲಿ ಮಾಡುವ ವಿಧಾನ ತಿಳಿಸಿಕೊಟ್ಟರು. ನಂತರ ಈ ಉತ್ಪನ್ನಗಳನ್ನು ಗುಡಿ ಕೈಗಾರಿಕೆಗಳಾಗಿ ಹೇಗೆ ಮಾಡಬಹುದು ಎಂದು ತಿಳಿಸಿದರು. ಸಣ್ಣ ಮತ್ತು ಅತಿ ಸಣ್ಣ ಕ್ರಮಬದ್ಧಗಳಿಸುವ ಯೋಜನೆ (Pಒಈಒಇ) ಯೋಜನೆಗಳ ಬಗ್ಗೆ ಸ್ವ ವಿವರವಾಗಿ ಮಾಹಿತಿ ತಿಳಿಸಿದರು.
ಈ ಸಂದರ್ಭದಲ್ಲಿ ಕುಂಚಿಗನಾಳ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಮಂಜುಳಾ ದೇವಿ, ಮಂಜುಳಾ, ಇಂದ್ರಮ್ಮ, ಶಾರದಮ್ಮ, ತ್ರಿವೇಣಿ, ಅಂಗನವಾಡಿ ಶಿಕ್ಷಕರು ಹಾಗೂ ಗ್ರಾಮದ ಹಿರಿಯರು, ವಿವಿಧ ಸಂಘ ಸಂಸ್ಥೆಗಳ ಮಹಿಳೆಯರು ಇದ್ದರು. ಅಂತಿಮ ವರ್ಷದ ತೋಟಗಾರಿಕೆ ವಿದ್ಯಾರ್ಥಿಗಳಾದ ಸುಶ್ಮಿತಾ, ವೀರೇಶ್, ಭುವನ್, ವಿನಯ್, ರಶ್ಮಿತಾ, ಕೌಶಲ್ಯ, ನವಮಿ ಕಾವ್ಯ, ಮುಕ್ತ ಕಾರ್ಯಕ್ರಮ ನಡೆಸಿಕೊಟ್ಟರು.
