ಮುಖ್ಯ ಸುದ್ದಿ
ಪ್ರವಾಸೋದ್ಯಮ ಇಲಾಖೆ | ಹೋಟೆಲ್, ರೆಸ್ಟೋರೆಂಟ್, ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ
CHITRADURGA NEWS | 24 JANUARY 2025
ಚಿತ್ರದುರ್ಗ: ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲು ಮಲ್ಟಿ ಕ್ಯೂಸಿನ್ ಕುಕ್‍ಗೆ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನಿಸಲಾಗಿದೆ. ಜ.24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ ಹಾಗೂ ಬೆಂಗಳೂರಿನ ಇನ್ಸ್‍ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ ಅವರ ಮೂಲಕ ವಸತಿ ಸಹಿತ ತರಬೇತಿ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ.
ಮಲ್ಟಿ ಕ್ಯೂಸಿನ್ ಕುಕ್ ತರಬೇತಿ ಪಡೆದವರಿಗೆ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಹಾಗೂ ಸ್ವ-ಉದ್ಯೋಗದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳು ಇವೆ. ಮಲ್ಟಿ ಕ್ಯೂಸಿನ್ ಕುಕ್ ತರಬೇತಿಗೆ 8ನೇ ತರಗತಿ ಉತ್ತೀರ್ಣರಾಗಿರಬೇಕು. 20 ರಿಂದ 45 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 5 ತಿಂಗಳ ಕಾಲ ತರಬೇತಿ ನೀಡಲಾಗುವುದು.
ಚಿತ್ರದುರ್ಗ ನಗರದ ಕೋಟೆ ಮುಂಭಾಗದ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಜ.24ರ ಮಧ್ಯಾಹ್ನ 1 ಗಂಟೆಯೊಳಗೆ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
Also Read: ವಿವಿ ಸಾಗರಕ್ಕೆ ಬಾಗೀನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆ 08194-234466 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಬಿ.ಹೆಚ್.ಶಶಿಕುಮಾರ್ ತಿಳಿಸಿದ್ದಾರೆ.