CHITRADURGA NEWS | 02 FEBRUARY 2025
ಚಿತ್ರದುರ್ಗ: 2025-26ನೇ ಸಾಲಿಗೆ ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿತೆರಿಗೆ ಹಾಗೂ ನೀರಿನ ಶುಲ್ಕ ಸಮರ್ಪಕ ವಸೂಲಾತಿಗಾಗಿ ನಗರಸಭೆ ಕಾರ್ಯಾಲಯ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಅರ್ಹ ಮಹಿಳಾ ಸ್ವ-ಸಹಾಯ ಸಂಘಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
Also Read: ಫೆ.5 ಮತ್ತು 6 ರಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಜಿಲ್ಲಾ ಪ್ರವಾಸ
ಅರ್ಹ ಮಹಿಳಾ ಸ್ವ-ಸಹಾಯ ಸಂಘವು ಈಗಾಗಲೇ ಡೇ-ನಲ್ಡ್ ಅಭಿಯಾನದಡಿ ನೋಂದಾಯಿಸಿರಬೇಕು ಹಾಗೂ ಪಂಚಸೂತ್ರಗಳನ್ನು ಅನುಸರಿಸುತ್ತಿರಬೇಕು. ಸಂಘದ ಸದಸ್ಯರು ಕನಿಷ್ಠ 7ನೇ ತರಗತಿಯವರೆಗೆ ಶಿಕ್ಷಣ ಹಾಗೂ ಎಲೆಕ್ಟ್ರಾನಿಕ್ ಪರಿಕರಗಳ ಬಳಕೆ ಗೊತ್ತಿರಬೇಕು.
ಸಂಘದ ಹೆಸರಿನಲ್ಲಿ ಸಕ್ರಿಯ ಬ್ಯಾಂಕ್‍ಖಾತೆ ಹೊಂದಿರಬೇಕು ಹಾಗೂ ಬ್ಯಾಂಕಿನಲ್ಲಿ ತಮ್ಮ ಖಾತೆಯಲ್ಲಿ ಸಾಲ ಪಡೆದು ನಿಯಮಿತವಾಗಿ ಮರು ಪಾವತಿ ಮಾಡಿರಬೇಕು.
Also Read: ಎಸ್.ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ನಿರ್ದೇಶಕ ಎಸ್.ಜಿ.ಮಂಜುನಾಥ್ ನಿಧನ
ಆಸಕ್ತ ಮಹಿಳಾ ಸ್ವ-ಸಹಾಯ ಸಂಘಗಳು ನಗರಸಭಾ ಕಾರ್ಯಾಲಯ ಚಿತ್ರದುರ್ಗ ಕಚೇರಿಯಲ್ಲಿ ಡೇ-ನಲ್ಕ್ ಶಾಖೆಗೆ ಸಂಪರ್ಕಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
