ಮುಖ್ಯ ಸುದ್ದಿ
ಜಿಲ್ಲಾ ಆಸ್ಪತ್ರೆ ಅವ್ಯವಸ್ಥೆ ಮಹಿಳಾ ಆಯೋಗದ ಅಧ್ಯಕ್ಷೆ ತೀವ್ರ ಅಸಮಧಾನ

CHITRADURGA NEWS | 07 FEBRUARY 2025
ಚಿತ್ರದುರ್ಗ: ಜಿಲ್ಲಾಸ್ಪತ್ರೆಯ ಕಾರ್ಯವೈಖರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಬೇಸರ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಿಳಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಸ್ಪತ್ರೆಯ ಸ್ಥಿತಿಗತಿ ಅವಲೋಕನಕ್ಕಾಗಿ ಭೇಟಿ ನೀಡಿದಾಗ ಸಾಕಷ್ಟು ದೂರುಗಳು ಗಮನಕ್ಕೆ ಬಂದಿವೆ. ಜಿಲ್ಲಾಸ್ಪತ್ರೆಯ ವ್ಯವಸ್ಥೆಯು ಮನಸ್ಸಿಗೆ ನೋವುಂಟು ಮಾಡಿದೆ ಎಂದರು.
ಇದನ್ನೂ ಓದಿ: ಶ್ರೀರಾಮುಲುಗೆ ಪೈಪೋಟಿ ಕೊಡುವಷ್ಟು ದೊಡ್ಡ ನಾಯಕ ನಾನಲ್ಲ | ಬಿ.ವೈ.ವಿಜಯೇಂದ್ರ
ಆಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಬಿಸಿ ನೀರು ಇಲ್ಲ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಳವಡಿಸಿರುವ ಲಿಪ್ಟ್ ವರ್ಕ್ ಆಗುತ್ತಿಲ್ಲ ಎಂದು ಹೇಳಿದರು.
ಜಿಲ್ಲಾಸ್ಪತ್ರೆಯಿಂದ ನಡೆಯುತ್ತಿರುವ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳು ಕಲ್ಪಿಸದೇ ಇರುವುದಕ್ಕೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: ಜಿಲ್ಲಾ ಆಸ್ಪತ್ರೆ, ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನರ್ಸಿಂಗ್ ವಿದ್ಯಾರ್ಥಿಗಳನ್ನು ಸಭೆಗೆ ಕರೆಯಿಸಿದ ಆಯೋಗದ ಅಧ್ಯಕ್ಷರು, ಅವರಿಂದ ಅಹವಾಲುಗಳನ್ನು ಆಲಿಸಿದರು.
ಈ ವೇಳೆ ವಿದ್ಯಾರ್ಥಿಗಳು, ನರ್ಸಿಂಗ್ ಕಾಲೇಜಿಗೆ ಕೇವಲ 2 ಕೊಠಡಿ ಕೊಡಲಾಗಿದೆ, ಸೂಕ್ತ ಬೋಧಕರಿಂದ ಬೋಧನೆ ನಮಗೆ ದೊರೆಯುತ್ತಿಲ್ಲ, ಮೂಲಭೂತ ಸೌಕರ್ಯ ಸಿಗುತ್ತಿಲ್ಲ, ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿದರು.
ಇದನ್ನೂ ಓದಿ: B.Ed ಫಲಿತಾಂಶ | SRS ಕಾಲೇಜಿಗೆ ಮೂರು ರ್ಯಾಂಕ್
ಈ ಬಗ್ಗೆ ಖುದ್ದಾಗಿ ಭೇಟಿ ನೀಡಿ, ಸಮಸ್ಯೆ ಪರಿಹರಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭರವಸೆ ನೀಡಿದರು.
