ಮುಖ್ಯ ಸುದ್ದಿ
PDO ಸೇವೆಯಿಂದ ಅಮಾನತು

CHITRADURGA NEWS | 13 FEBRUARY 2025
ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕು ಜೆ.ಬಿ. ಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹೆಚ್.ಸುರೇಶ್ ಅವರನ್ನು ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬೆಲೆ ಏರಿಕೆ

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಸುರೇಶ್ ಅವರು ನಿಯುಕ್ತಿಗೊಳಿಸಿದ ಸ್ಥಳಕ್ಕೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೆ, ಒಬ್ಬ ಜವಾಬ್ದಾರಿಯುತ, ಸರ್ಕಾರಿ ನೌಕರರಾಗಿದ್ದುಕೊಂಡು, ಸರ್ಕಾರದ ಮತ್ತು ಮೇಲಾಧಿಕಾರಿಗಳ ಆದೇಶಗಳನ್ನು ಉಲ್ಲಂಘನೆ ಮಾಡುವ ಮೂಲಕ ಸರ್ಕಾರಿ ನೌಕರರ ವೃತ್ತಿಗೆ ತರವಲ್ಲದ ರೀತಿ ವರ್ತಿಸಿ, ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದ ಕಾರಣ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ.
ಇದನ್ನೂ ಓದಿ: APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಅಮಾನತು ಅವಧಿಯಲ್ಲಿ ಪ್ರಾಧಿಕಾರದ ಅನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಮತ್ತು ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಹಾಗೂ ನಿಯಮಾನುಸಾರ ಜೀವನಾಧಾರ ಭತ್ಯೆಗೆ ಅರ್ಹರಿರುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶದಲ್ಲಿ ತಿಳಿಸಿದ್ದಾರೆ.
