ಮುಖ್ಯ ಸುದ್ದಿ
ಧರ್ಮಸ್ಥಳ ಸಂಸ್ಥೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

CHITRADURGA NEWS | 14 FEBRUARY 2025
ಚಿತ್ರದುರ್ಗ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ತುರುವನೂರಿನ ಅಂಜಿನಮ್ಮನಿಗೆ ಮಂಜೂರಾಗಿರುವ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು.
Also Read: ಚಿತ್ರಹಳ್ಳಿ ಪೊಲೀಸರ ಕಾರ್ಯಾಚರಣೆ | ಐವರ ಬಂಧನ | 5 ಲಕ್ಷ ರೂ. ಮೌಲ್ಯದ ಶ್ರೀಗಂಧ ವಶ

ವಾತ್ಸಲ್ಯ ಮನೆ ಹಸ್ತಾಂತರಿಸಿ ಮಾತನಾಡಿದ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ಸೂರಿಲ್ಲದೆ ಅತ್ಯಂತ ನಿಕೃಷ್ಟವಾಗಿ ಬದುಕುತ್ತಿರುವ ನಿರ್ಗತಿಕರನ್ನು ಗುರುತಿಸಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಮನೆಗಳನ್ನು ಕಟ್ಟಿಸಿ, ವಸತಿ ಕಲ್ಪಿಸುವುದರ ಜೊತೆ ಪ್ರತಿ ತಿಂಗಳು ಒಂದು ಸಾವಿರ ರೂ.ಗಳ ಮಾಶಾಸನವನ್ನು ನೀಡಿ, ದಿನನಿತ್ಯದ ಬಳಕೆ ವಸ್ತುಗಳಿರುವ ವಾತ್ಸಲ್ಯ ಕಿಟ್‍ನ್ನು ವಿತರಣೆ ಮಾಡುತ್ತಿರುವುದರಿಂದ ಬಡವರಿಗೆ ಇದೊಂದು ಆಶಾಕಿರಣವಾಗಿದೆ ಎಂದು ಹೇಳಿದರು.
Also Read: ಐದನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆ
ಈ ಸಂದರ್ಭದಲ್ಲಿ ತಾಲ್ಲೂಕು ಯೋಜನಾಧಿಕಾರಿ ಬಿ.ಅಶೋಕ್, ಒಕ್ಕೂಟದ ಬಿ.ಅಧ್ಯಕ್ಷ ಜನಾರ್ಧನ್, ಆಂಜನೇಯಸ್ವಾಮಿ ದೇವಸ್ಥಾನದ ಅಧ್ಯಕ್ಷ ರಾಮಕೃಷ್ಣರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನಮ್ಮ, ಸದಸ್ಯರುಗಳಾದ ಡಿ.ಆರ್.ಮಂಜುನಾಥ್, ಗೀತ, ರೂಪ, ವಲಯ ಮೇಲ್ವಿಚಾರಕ ಮಧು, ಜ್ಞಾನವಿಕಾಸ ಸಮನ್ವಯಾಧಿಕಾರಿ ಚಂದ್ರಮ್ಮ, ಸೇವಾ ಪ್ರತಿನಿಧಿ ಲಕ್ಷ್ಮಣ್, ಸ್ವಸಹಾಯ ಸಂಘದ ಸದಸ್ಯರುಗಳು ಇದ್ದರು.
