ಮುಖ್ಯ ಸುದ್ದಿ
ಸರ್ಕಾರಿ ಕಲಾ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ | ದಾವಣಗೆರೆ ವಿವಿ ಕುಲಪತಿ ಪ್ರೊ.ಕುಂಬಾರ ಉದ್ಘಾಟನೆ

CHITRADURGA NEWS | 06 MARCH 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ, ಇತಿಹಾಸ ವಿಭಾಗ ಸರ್ಕಾರಿ ಕಲಾ ಕಾಲೇಜು(ಸ್ವಾಯತ್ತ), ಇತಿಹಾಸ ಅಧ್ಯಾಪಕರ ವೇದಿಕೆ, ದಾವಣಗೆರೆ ವಿಶ್ವವಿದ್ಯಾನಿಲಯ ವತಿಯಿಂದ ಸರ್ಕಾರಿ ಕಲಾ ಕಾಲೇಜಿನಲ್ಲಿ ಚಿತ್ರದುರ್ಗ ಜಿಲ್ಲೆಯ ಸ್ಥಾನಿಕ ಸಂಸ್ಥಾನಗಳು ಎರಡು ದಿನಗಳ ವಿಚಾರ ಸಂಕಿರಣವನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ್ ಉದ್ಘಾಟಿಸಿದರು.
Also Read: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ರೈತರು ಮೃತ
ಕುಲಪತಿ ಪ್ರೊ.ಬಿ.ಡಿ.ಕುಂಬಾರ್ ಮಾತನಾಡಿ, ಇತಿಹಾಸದ ಬಗ್ಗೆ ತಿಳುವಳಿಕೆಯಿಲ್ಲದಿದ್ದರೆ ಏನೂ ಸಾಧನೆ ಮಾಡಲು ಆಗುವುದಿಲ್ಲ.
ಸರ್ಕಾರಿ ಕಲಾ ಕಾಲೇಜಿಗೆ ತನ್ನದೆ ಆದ ಇತಿಹಾಸವಿದೆ. ಸ್ವಾತಂತ್ರ್ಯ ನಂತರ ಆರಂಭವಾದ ಕಾಲೇಜುಗಳಲ್ಲಿ ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು ಸೇರಿದೆ. ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ಒಳಪಡುವ 130 ಕಾಲೇಜುಗಳಲ್ಲಿ ಸರ್ಕಾರಿ ಕಲಾ ಕಾಲೇಜು ಸ್ವಾಯತ್ತಕ್ಕೊಳಪಟ್ಟಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ನಾಗರಹಾವು ಚಿತ್ರದ ಮೂಲಕ ಚಿತ್ರದುರ್ಗದ ಏಳುಸುತ್ತಿನ ಕೋಟೆ ನಾಡಿನಾದ್ಯಂತ ಪ್ರಸಿದ್ದಿ ಪಡೆದಿದೆ. ಪ್ರತಿ ವಿಷಯಕ್ಕೂ ಒಂದೊಂದು ಇತಿಹಾಸವಿದೆ. ಉಪನ್ಯಾಸಕರು, ಪ್ರಾಧ್ಯಾಪಕರುಗಳು ಮೊದಲು ಚಿತ್ರದುರ್ಗದ ಪಾಳೆಯಗಾರರು, ವೀರವನಿತೆ ಒನಕೆ ಓಬವ್ವಳ ಇತಿಹಾಸವನ್ನು ತಿಳಿದುಕೊಂಡು ವಿದ್ಯಾರ್ಥಿಗಳಿಗೆ ಪರಿಚಯಿಸಬೇಕು. ಮದಕರಿನಾಯಕರ ಕಾಲದಲ್ಲಿ ಆರ್ಥಿಕ, ಸಾಮಾಜಿಕ, ಕೌಟುಂಬಿಕ ಜೀವನ ಹೇಗಿತ್ತೆನ್ನುವುದರ ಬಗ್ಗೆ ಚಿಂತಿಸುವ ಅಗತ್ಯವಿದೆ ಎಂದು ಹೇಳಿದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಗುಡ್ಡದರಂಗವ್ವನಹಳ್ಳಿ ಸಮೀಪವಿರುವ ಸ್ನಾತಕೋತ್ತರ ಕೇಂದ್ರಕ್ಕೆ ವೀರವನಿತೆ ಒನಕೆ ಓಬವ್ವ ಎಂಬ ಹೆಸರು ಇಡಲು ತೀರ್ಮಾನಿಸಿದೇವೆ ಎಂದು ತಿಳಿಸಿದರು.
ಇತಿಹಾಸ ಸಂಶೋಧಕ ವಿಶ್ರಾಂತ ಪ್ರಾಂಶುಪಾಲರಾದ ಡಾ.ಬಿ.ರಾಜಶೇಖರಪ್ಪ ದಿಕ್ಸೂಚಿ ಭಾಷಣ ಮಾಡಿ, ಚಿತ್ರದುರ್ಗಕ್ಕೆ ವಿಶೇಷ, ಅಪರೂಪವಾದ ಸ್ಥಾನವಿದೆ. ಇಲ್ಲಿನ ಇತಿಹಾಸದ ಬಗ್ಗೆ ಜಗತ್ತಿನ ವಿಜ್ಞಾನಿಗಳು ಮಾತನಾಡಿದ್ದಾರೆ. ಜೀವದ ಉಗಮ ಮೊಟ್ಟ ಮೊದಲು ಆರಂಭವಾಗಿದ್ದು ಚಿತ್ರದುರ್ಗದಲ್ಲಿ ಎಂದು ಅಮೇರಿಕಾದ ವಿಜ್ಞಾನಿ ಹೇಳಿದ್ದಾರೆ ಎಂದರು.
ಡಾ.ಬಿ.ಸುರೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.
Also Read: ಜಿಲ್ಲಾಸ್ಪತ್ರೆ ಆವರಣದಲ್ಲಿ ತಂಗುದಾಣ | ಉಜ್ಜೀವನ್ ಬ್ಯಾಂಕ್‍ನಿಂದ ಕೊಡುಗೆ
ಈ ಸಂದರ್ಭದಲ್ಲಿ ಆಂಧ್ರಪ್ರದೇಶ ಅನಂತಪುರದ ಕೃಷ್ಣದೇವರಾಯ ವಿ.ವಿ.ಯ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಆರ್.ಶೇಷಶಾಸ್ತ್ರಿ, ಕರ್ನಾಟಕ ವಿವಿ ಧಾರವಾಡದ ಡಾ.ರು.ಮ.ಷಡಾಕ್ಷರಯ್ಯ, ಇತಿಹಾಸ ವಿಭಾಗ ದಾವಣಗೆರೆ ವಿ.ವಿ.ಯ ಪ್ರಾಧ್ಯಾಪಕ ಡಾ.ವೆಂಕಟರಾವ್ ಎಂ.ಪಲಾಟೆ, ಸ್ನಾತಕೋತ್ತರ ಇತಿಹಾಸ ವಿಭಾಗ ಮುಖ್ಯಸ್ಥ ಡಾ.ಆರ್.ಶಿವಪ್ಪ, ದಾವಣಗೆರೆ ವಿವಿ ಇತಿಹಾಸ ಅಧ್ಯಾಪಕರ ವೇದಿಕೆ ಅಧ್ಯಕ್ಷ ಪ್ರೊ.ಸಿ.ಜಗದೀಶ, ಐಕ್ಯೂಎಸಿ ಸಂಚಾಲಕಿ ಡಾ.ಆರ್.ತಾರಿಣಿ ಶುಭದಾಯಿನಿ, ಅಧ್ಯಾಪಕ ಸಂಘದ ಕಾರ್ಯದರ್ಶಿ ಡಾ.ಆರ್.ಗಂಗಾಧರ್, ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ಉಪ ನಿರ್ದೇಶಕ ಡಾ.ನೆಲ್ಕುದುರಿ ಸದಾನಂದ ಇದ್ದರು.
