CHITRADURGA NEWS | 10 MARCH 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್-1 ದೈಹಿಕ ಶಿಕ್ಷಕರ ಸಂಘ ಜಿಲ್ಲಾ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸರ್ಕಾರಿ ಪ್ರೌಢಶಾಲೆ ಪಾಲವ್ವನಹಳ್ಳಿಯ ಟಿ.ಮಂಜುನಾಥ ಆಯ್ಕೆಯಾಗಿದ್ದಾರೆ.
Also Read: ಹಕ್ಕಿ ಜ್ವರ ಭೀತಿ | ಮುನ್ನೆಚ್ಚರಿಕೆ ಕ್ರಮಕ್ಕೆ ADC ಸೂಚನೆ
ಉಪಾಧ್ಯಕ್ಷರಾಗಿ ಎಮ್.ಎಮ್.ಜಿ.ಜೆ.ಸಿ. ಹೊಳಲ್ಕೆರೆಯ ಆರ್.ಸುರೇಶ್, ಪ್ರಧಾನ ಕಾರ್ಯದರ್ಶಿಯಾಗಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಚಿತ್ರದುರ್ಗದ ಡಿ.ಕಲ್ಲೇಶ, ಖಜಾಂಚಿಯಾಗಿ ಸರ್ಕಾರಿ ಪ್ರೌಢಶಾಲೆ ಲಕ್ಷ್ಮಿಸಾಗರದ ಇ.ಎಲ್.ಮದನಕುಮಾರ್, ಜಂಟಿ ಕಾರ್ಯದರ್ಶಿಯಾಗಿ ಸರ್ಕಾರಿ ಪ್ರೌಢಶಾಲೆ ದೇವಪುರದ ಎನ್.ಟಿ.ದಿವಾಕರ, ಸಂಘಟನಾ ಕಾರ್ಯದರ್ಶಿಯಾಗಿ ಸರ್ಕಾರಿ ಪ್ರೌಢಶಾಲೆ ಬೀರೇನಹಳ್ಳಿಯ ಆರ್.ಪಾಂಡುರಂಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿದ್ದ ವಿಷಯ ಪರಿವೀಕ್ಷಕ ಮಹಾಲಿಂಗಪ್ಪ ನೂತನವಾಗಿ ಆಯ್ಕೆಯಾದವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
