Connect with us

    ಪ್ರಯಾಣಿಕರ ಗಮನಕ್ಕೆ | ಹುಬ್ಬಳ್ಳಿ – ಚಿತ್ರದುರ್ಗ ಎಕ್ಸ್‌ಪ್ರೆಸ್‌ ರೈಲು ಸಂಚಾರ ರದ್ದತಿ ಮುಂದುವರಿಕೆ

    railway 2

    ಮುಖ್ಯ ಸುದ್ದಿ

    ಪ್ರಯಾಣಿಕರ ಗಮನಕ್ಕೆ | ಹುಬ್ಬಳ್ಳಿ – ಚಿತ್ರದುರ್ಗ ಎಕ್ಸ್‌ಪ್ರೆಸ್‌ ರೈಲು ಸಂಚಾರ ರದ್ದತಿ ಮುಂದುವರಿಕೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 12 March 2025

    ಚಿತ್ರದುರ್ಗ: ಪ್ರಯಾಣಿಕರ ಕೊರತೆಯಿಂದಾಗಿ ರೈಲು ಸಂಖ್ಯೆ 17347/17348 ಎಸ್.ಎಸ್.ಎಸ್ ಹುಬ್ಬಳ್ಳಿ-ಚಿತ್ರದುರ್ಗ, ಎಸ್.ಎಸ್.ಎಸ್ ಹುಬ್ಬಳ್ಳಿ ದೈನಂದಿನ ಎಕ್ಸ್ಪ್ರೆಸ್ ರೈಲಿನ ಸಂಚಾರವನ್ನು ಚಿಕ್ಕಜಾಜೂರು ಮತ್ತು ಚಿತ್ರದುರ್ಗದ ನಡುವಿನ ಭಾಗಶಃ ರದ್ದತಿಯನ್ನು ಜೂನ್ 30, 2025 ರವರೆಗೆ ವಿಸ್ತರಿಸಲಾಗಿದೆ.

    Also Read: ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಪತಿರಾಯ | ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

    ಈ ಹಿಂದೆ ಮಾರ್ಚ್ 31, 2025 ರವರೆಗೆ ಮಾತ್ರ ಭಾಗಶಃ ರದ್ದತಿ ಇತ್ತು, ಆದರೆ ಈಗ ಅದನ್ನು ಏಪ್ರಿಲ್ 1 2025 ರಿಂದ ಜೂನ್ 30, 2025 ರವರೆಗೆ ವಿಸ್ತರಿಸಲಾಗಿದೆ.

    ಹುಬ್ಬಳ್ಳಿಯಿಂದ ಹೊರಡುವ ರೈಲು (ರೈ.ಸಂ.17347) ಚಿಕ್ಕಜಾಜೂರಿನಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸಲಿದೆ.

    ಚಿತ್ರದುರ್ಗದಿಂದ ಹುಬ್ಬಳ್ಳಿಗೆ ತೆರಳುವ ರೈಲು (ರೈ.ಸಂ.17348) ಚಿಕ್ಕಜಾಜೂರಿನಿಂದಲೇ ಪ್ರಯಾಣ ಆರಂಭಿಸಲಿದೆ.

    Also Read: ಪಿಎಂಶ್ರೀ ಯೋಜನೆಯಡಿ ಜಿಲ್ಲೆಗೆ 9.50 ಕೋಟಿ ರೂ. ಅನುದಾನ | ಲೋಕಸಭೆಯ ಮಾಹಿತಿ

    ಚಿಕ್ಕಜಾಜೂರು ಮತ್ತು ಚಿತ್ರದುರ್ಗದ ನಡುವಿನ ರೈಲು ಸಂಚಾರವು ಸಂಪೂರ್ಣವಾಗಿ ರದ್ದಾಗುತ್ತದೆ.

    ಪ್ರಯಾಣಿಕರು ಈ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳಿ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top