ಮುಖ್ಯ ಸುದ್ದಿ
ಹೊಸದುರ್ಗ-ಹೊಳಲ್ಕೆರೆ ಹೆದ್ದಾರಿಯನ್ನು ಆನಗೋಡು ವರೆಗೆ ವಿಸ್ತರಿಸಿ | ನಿತಿನ್ ಗಡ್ಕರಿಗೆ ಮನವಿ

CHITRADURGA NEWS | 12 MARCH 2025
ಚಿತ್ರದುರ್ಗ: ಸಂಸದ ಗೋವಿಂದ ಕಾರಜೋಳ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯ ಕಛೇರಿಯಲ್ಲಿ ಭೇಟಿ ಮಾಡಿ, ಕಳೆದ 7, 8 ತಿಂಗಳುಗಳಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆದ್ದಾರಿಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನು ಹೆದ್ದಾರಿ ಸಚಿವಾಲಯಕ್ಕೆ ಸಲ್ಲಿಸಲಾಗಿದೆ. ಈ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.
Also Read: ಟೀಚರ್ಸ್ ಕಾಲೋನಿ, ಜಡ್ಜ್ ಕ್ವಾಟ್ರಸ್ ರಸ್ತೆಗೆ ಡಾಂಬಾರು ಭಾಗ್ಯ ಯಾವಾಗ ?
ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ-48, ರಾಷ್ಟ್ಥೀಯ ಹೆದ್ದಾರಿ 150 ಎ ಈ ಎರಡೂ ಹೆದ್ದಾರಿಗಳು ಸಂಧಿಸುವ ಜಾಗದಲ್ಲಿ ಕ್ಲೋವರ್ ಲೀಫ್ ಜಂಕ್ಷನ್ ನಿರ್ಮಾಣ.
ಚಳ್ಳಕೆರೆ ನಗರ ಪರಿಮಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ-150 ಎ ಅನ್ನು ಒನ್ ಟೈಮ್ ಇಂಪ್ರೂವ್‍ಮೆಂಟ್ ಯೋಜನೆಯಡಿ ಅಭಿವೃದ್ದಿಪಡಿಸುವುದು.
ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48 ರಿಂದ ಚಳ್ಳಕೆರೆ-ಪಾವಗಡ-ಪುಟ್ಟಪರ್ತಿ-ರಾಷ್
Also Read: ಪ್ರಯಾಣಿಕರ ಗಮನಕ್ಕೆ | ಹುಬ್ಬಳ್ಳಿ – ಚಿತ್ರದುರ್ಗ ಎಕ್ಸ್‌ಪ್ರೆಸ್ ರೈಲು ಸಂಚಾರ ರದ್ದತಿ ಮುಂದುವರಿಕೆ
ಮೂಡಿಗೆರೆಯಿಂದ-ಚಿಕ್ಕಮಗಳೂರು-ಕಡೂರು
ಸಿರಾ ಪಟ್ಟಣ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ-48ನ್ನು ಒನ್ ಟೈಮ್ ಇಂಪ್ರೂವ್‍ಮೆಂಟ್ ಯೋಜನೆಯಡಿ ಅಭಿವೃದ್ದಿಪಡಿಸುವುದು.
ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಹಿರಿಯೂರು ಹತ್ತಿರ ಆದಿವಾಲ-ಪಟ್ರೆಹಳ್ಳಿ ಬಳಿ ಕೆಳಸೇತುವೆ ನಿರ್ಮಾಣ, ಸಿರಾ ತಾಲ್ಲೂಕು ಚಿಕ್ಕನಹಳ್ಳಿ ಬಳಿಯಿರುವ ಕೆಳಸೇತುವೆಯಲ್ಲಿರುವ ನ್ಯೂನ್ಯತೆಗಳನ್ನು ಸರಿಪಡಿಸುವುದು ಸೇರಿದಂತೆ ಇನ್ನಿತರೆ ಯೋಜನೆಗಳನ್ನು ಪ್ರಥಮ ಆದ್ಯತೆ ಮೇಲೆ ಪರಿಗಣಿಸುವಂತೆ ಮನವಿ ಮಾಡಿಕೊಂಡರು.
Also Read: ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಪತಿರಾಯ | ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರು ಸಕಾರಾತ್ಮಕವಾಗಿ ಸ್ಪಂದಿಸಿ ಸಂಸದರಿಗೆ ಭರವಸೆ ನೀಡಿದರು.
