Connect with us

    ಒಳಮೀಸಲು ವಿಳಂಬ ಸಹಿಸಲು ಆಗದು | ಎಚ್. ಆಂಜನೇಯ

    H. Anjaneya

    ಮುಖ್ಯ ಸುದ್ದಿ

    ಒಳಮೀಸಲು ವಿಳಂಬ ಸಹಿಸಲು ಆಗದು | ಎಚ್. ಆಂಜನೇಯ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 20 MARCH 2025

    ಚಿತ್ರದುರ್ಗ: ಒಳಮೀಸಲಾತಿ ಜಾರಿಗೆ ಈಗಾಗಲೇ ಬಹಳಷ್ಟು ವಿಳಂಬ ಆಗಿದೆ. ಮಾದಿಗ ಸಮುದಾಯ ಪ್ರತಿಭಟನೆ ಹಾದಿ ಹಿಡಿದಿದೆ. ಈ ವಿಷಯಲ್ಲಿ ಯಾವುದೇ ಕಾರಣಕ್ಕೂ ವಿಳಂಬ ನೀತಿ ಅನುಸರಿಸುವುದನ್ನು ನಾವು ಸಹಿಸುವುದಿಲ್ಲ ಎಂದು ಮಾಜಿ ಸಚಿವ ಎಚ್. ಆಂಜನೇಯ ಹೇಳಿದರು.

    Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ? 

    ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಬಲಾಢ್ಯರ ಮಧ್ಯೆ ಕೂಲಿ-ಅನಕ್ಷರತೆ ಕಾರಣಕ್ಕೆ ಮೀಸಲು ಪಡೆಯುಲ್ಲಿ ವಿಫಲವಾಗಿರುವ ಮಾದಿಗ ಸಮುದಾಯಕ್ಕೆ ಒಳಮೀಸಲಾತಿಯೊಂದೇ ಏಕೈಕ ಆಸರೆ.

    ಜನಸಂಖ್ಯೆ ಆಧಾರಿತ ಒಳಮೀಸಲಾತಿ ಹೋರಾಟಕ್ಕೆ 30 ವರ್ಷದ ಇತಿಹಾಸ ಇದೆ. ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕು. ವಗೀಕರಣ ಮಾಡಬೇಕೆಂಬುದು ನಮ್ಮ ದಶಕದ ಒತ್ತಾಯ ಎಂದರು.

    ಸುಪ್ರೀಂ ಕೋರ್ಟ್ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇದೆ ಎಂದು ತೀರ್ಪು ನೀಡಿದ್ದು, ಮಾದಿಗ ಸಮುದಾಯಕ್ಕೆ ಜೀವ ಬಂದಂತಾಗಿದೆ. ಜೊತೆಗೆ ತೆಲಂಗಾಣ, ಹರಿಯಾಣ, ಪಂಜಾಬ್, ಆಂಧ್ರದಲ್ಲಿ ಮೀಸಲಾತಿ ಜಾರಿಗೆ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

    Also Read: ಬೈಕ್‍ಗೆ ಲಾರಿ ಡಿಕ್ಕಿ | ಸ್ಥಳದಲ್ಲೇ ಪತಿ ಸಾವು, ಪತ್ನಿಗೆ ಗಾಯ

    ರಾಜ್ಯದಲ್ಲೂ ಈ ಸಂಬಂಧ ನ್ಯಾ.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ, ಎರಡು ತಿಂಗಳು ಗಡುವು ನೀಡಲಾಗಿತ್ತು. ಗಡುವು ಅವಧಿ ಮುಗಿದರೂ ವರದಿ ಸಲ್ಲಿಕೆ ಆಗಿಲ್ಲ. ಆಯೋಗಕ್ಕೆ 40 ಇಲಾಖೆಗಳು ಸ್ಪಷ್ಟ ಅಂಕಿ-ಅಂಶ ನೀಡುವಲ್ಲೂ ನಿರ್ಲಕ್ಷ ತೋರಿದ್ದು, ದತ್ತಾಂಶ ಸಮಸ್ಯೆ ಎದುರಾಗಿದೆ ಎನ್ನಲಾಗಿದೆ. ಆದ್ದರಿಂದ ಮಾದಿಗ ಸಮುದಾಯದಲ್ಲಿ ಆತಂಕ ಎದುರಾಗಿದೆ ಎಂದು ತಿಳಿಸಿದರು.

    2011ರ ಗಣತಿ, ಸದಾಶಿವ ಆಯೋಗ, ಕಾಂತರಾಜ್ ಆಯೋಗದ ವರದಿಯಲ್ಲಿನ ಅಂಕಿ-ಅಂಶ ಹಾಗೂ ಈಗಾಗಲೇ ಸಂಗ್ರಹಿಸಿರುವ ಮಾಹಿತಿಯ ಆಧಾರದಡಿ ನಾಗಮೋಹನ್ ದಾಸ್ ಆಯೋಗದಿಂದ ವರದಿ ತಕ್ಷಣ ಪಡೆದು, ಒಳಮೀಸಲಾತಿ ಜಾರಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಒಳಮೀಸಲಾತಿ ಜಾರಿ ವಿಷಯದಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಜಾರಿಗೆ ದಿಟ್ಟ ನಿರ್ಧಾರ ಕೈಗೊಳ್ಳಬೇಕು. ಒಂದೊಮ್ಮೆ ವಿಳಂಬವಾದಲ್ಲಿ ನಾನು ಸೇರಿ ಬಹುತೇಕರು ಬೀದಿಗಿಳಿದು ಹೋರಾಟ ನಡೆಸುವ ಅನಿವಾರ್ಯತೆ ಎದುರಾಗಲಿದೆ ಎಂದು ತಿಳಿಸಿದರು.

    Also Read: ಸುನಿತಾ – ಬುಚ್ ಜಗತ್ತಿಗೆ ಮಾದರಿ 

    6ನೇ ಗ್ಯಾರಂಟಿ ಎಂದು ಘೋಷಿಸಿದ್ದ ಮೀಸಲಾತಿ ವರ್ಗೀಕರಣವನ್ನು ಈ ತಿಂಗಳ ಅಂತ್ಯದೊಳಗೆ ಜಾರಿಗೊಳಿಸಬೇಕು. ಈ ಮೂಲಕ ಮಾದಿಗ ಹಾಗೂ ನೊಂದ ಸಮುದಾಯದ ಪ್ರೀತಿಗೆ ಪಾತ್ರರಾಗಬೇಕು ಎಂದು ಹೇಳಿದರು.

    ಜಾರಿಗೊಳಿಸಿದ ಬಳಿಕ ಏನಾದ್ರೂ ಸಮಸ್ಯೆಗಳು ಇದ್ದಲ್ಲಿ ಪರಿಶಿಷ್ಟ ಸಮುದಾಯಕ್ಕೆ ಸೀಮಿತಗೊಳಿಸಿ ಜಾತಿಗಣತಿ ನಡೆಸಲಿ. ಈಗ ಶಾಲಾ-ಕಾಲೇಜ್ ರಜೆ ಇರುವ ಕಾರಣಕ್ಕೆ ಶಿಕ್ಷಕ ವರ್ಗವನ್ನು ಸಮರ್ಥವಾಗಿ ಬಳಸಿಕೊಂಡು ಸರ್ವೇ ನಡೆಸಬಹುದು. ಆಧಾರ್ ಕಾರ್ಡ್ ಲಿಂಕ್ ಕೂಡ ಮಾಡಬಹುದು. ಈ ರೀತಿಯ ಸರ್ವೇ ಎಲ್ಲ ಸಮಸ್ಯೆಗಳಿಗೆ ಉತ್ತರ ಆಗಲಿದೆ ಎಂದರು.

    ಮಗು ಅಳುವುದಕ್ಕಿಂತ ಮುಂಚಿತವಾಗಿಯೇ ಹಾಲುಣಿಸುವ ಹೃದಯವಂತಿಕೆ ಅಗತ್ಯ. ಈ ವಿಷಯದಲ್ಲಿ ಸಿದ್ದರಾಮಯ್ಯ ನೊಂದ ಜನರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿ ದೃಢಪಡಿಸಿದ್ದಾರೆ. ಈಗ ಅವರ ಮುಂದಿರುವ ಒಳಮೀಸಲಾತಿ ವಿಷಯದಲ್ಲೂ ಅಮ್ಮನ ಹೃದಯದ ನಡೆ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    Also Read: ಸುನಿತಾ ವಿಲಿಯಮ್ಸ್ ತಾಳ್ಮೆ ಯುವ ಪೀಳಿಗೆಗೆ ಮಾದರಿ 

    ಸುದ್ದಿಗೋಷ್ಠಿಯಲ್ಲಿ ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್, ಜಿಪಂ ಮಾಜಿ ಸದಸ್ಯ ಬಿ.ಪಿ.ಪ್ರಕಾಶ್‌ಮೂರ್ತಿ, ತಾಪಂ ಮಾಜಿ ಸದಸ್ಯ ಸಮರ್ಥರಾಯ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top