Connect with us

    ಒಂದು ದೇಶ – ಒಂದು ಚುನಾವಣೆ ಘೋಷಣೆಯಲ್ಲ | ಭಾರತೀಯರ ಹೃದಯ ಬಡಿತ | ಗೋವಿಂದ ಕಾರಜೋಳ

    ಮುಖ್ಯ ಸುದ್ದಿ

    ಒಂದು ದೇಶ – ಒಂದು ಚುನಾವಣೆ ಘೋಷಣೆಯಲ್ಲ | ಭಾರತೀಯರ ಹೃದಯ ಬಡಿತ | ಗೋವಿಂದ ಕಾರಜೋಳ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 24 MARCH 2025

    ಚಿತ್ರದುರ್ಗ: ಒಂದು ದೇಶ – ಒಂದು ಚುನಾವಣೆ ಕೇವಲ ಘೋಷಣೆಯಲ್ಲ ಪ್ರತಿಯೊಬ್ಬ ಭಾರತೀಯರ ಹೃದಯ ಬಡಿತ ಎಂದು ಸಂಸದ ಗೋವಿಂದ ಎಂ.ಕಾರಜೋಳ ಹೇಳಿದರು.

    Also Read: Kannada Novel: 25. ಉತ್ತರೆ ಮಳೆ ಸುರಿಯಿತು

    ನಗರದ ಡಾನ್ ಬಾಸ್ಕೋ ಕಾಲೇಜಿನಲ್ಲಿ ಭಾರತ ಸರ್ಕಾರದ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ದಾವಣಗೆರೆ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಏರ್ಪಡಿಸಿದ್ದ ವಿಕಸಿತ ಭಾರತ ಯುವ ಸಂಸತ್ತು, ಯುವಕರ ಭಾಷಣ ಸ್ವರ್ಧೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು.

    ಲೋಕಸಭೆ, ಎಲ್ಲಾ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವುದೇ ಒಂದು ರಾಷ್ಟ್ರ-ಒಂದು ಚುನಾವಣೆಯ ಪ್ರಮುಖ ಉದ್ದೇಶವಾಗಿದೆ.

    ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಾ ಯೋಜನೆಗಳಲ್ಲಿ ಇದೂ ಕೂಡ ಒಂದಾಗಿದೆ. ಕೇವಲ ಒಂದು ಘೋಷಣೆಯಲ್ಲ, ಬದಲಾಗಿ 140 ಕೋಟಿ ಭಾರತೀಯರ ಹೃದಯ ಬಡಿತವಾಗಿದೆ ಎಂದು ಹೇಳಿದರು.

    ದೇಶದಲ್ಲಿ ಚುನಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸುವ, ಪದೇ ಪದೇ ಚುನಾವಣೆಗಳು ನಡೆಯುವುದಕ್ಕೆ ತಡೆ ಒಡ್ಡುವ, ಸಮಯ ಹಾಗೂ ಸಂಪನ್ಮೂಲಗಳನ್ನು ಉಳಿಸುವ ಉದ್ದೇಶ ಈ ಯೋಜನೆಯ ಹಿಂದಿದೆ.

    Also Read: ಸಂಘಟನೆ ರಾಜಕೀಯಕ್ಕೆ ಬಳಸಬೇಡಿ | ಶಾಂತವೀರ ಶ್ರೀ

    ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ಭಾರತದಲ್ಲಿ ಈಗಾಗಲೇ ಅತ್ಯಂತ ಯಶಸ್ವಿಯಾಗಿ ಚುನಾವಣೆಗಳನ್ನು ನಡೆಸಿರುವ ಹಿನ್ನೆಲೆಯಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಕ್ರಿಯೆ ನಮ್ಮ ದೇಶಕ್ಕೆ ಸವಾಲಾಗಲಾರದು ಎನ್ನುವುದು ನನ್ನ ಅನಿಸಿಕೆಯಾಗಿದೆ ಎಂದರು.

    ದೇಶದಲ್ಲಿ ದುಡಿಯುವ ಯುವಕರ ಸಂಖ್ಯೆ ಒಟ್ಟಾರೆ ಜನಸಂಖ್ಯೆಯ ಶೇ.61 ರಷ್ಟಿದೆ, ಇಡೀ ಪ್ರಪಂಚದಲ್ಲಿಯೇ ಅತಿ ಹೆಚ್ಚು ದುಡಿಯುವ ಯುವಕರನ್ನು ಹೊಂದಿರುವ ದೇಶ ಭಾರತವಾಗಿದೆ. ಈ ಸಂಖ್ಯೆಯನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂಬುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಯಕೆಯಾಗಿದೆ.

    ಪ್ರತಿಯೊಂದು ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ ತೆರೆದು ವಿದ್ಯಾವಂತ ನಿರುದ್ಯೋಗಿ ಯುವಕರುಗಳಿಗೆ ಕೌಶಲ್ಯ ತರಬೇತಿ ನೀಡಿ ದುಡಿಯುವ ಕೈಗಳಿಗೆ ಉದ್ಯೋಗ ದೊರಕಿಸಿಕೊಡುವ ಕೆಲಸ ಮಾಡಿದ್ದಾರೆ.

    ಅಮೇರಿಕಾದಲ್ಲಿ ವಿಶ್ವದ ಎಲ್ಲಾ ದೇಶಗಳ ಜನರು ಉದ್ಯೋಗ ಮಾಡುತ್ತಿದ್ದಾರೋ ಅದೇ ರೀತಿ 2030 ರ ವೇಳೆಗೆ ವಿಶ್ವದ 195 ದೇಶಗಳಲ್ಲಿಯೂ ಭಾರತದ ಕೌಶಲ್ಯ ಭರಿತ ಯುವಕರು ಕೆಲಸ ಮಾಡುವಂತಾಗಬೇಕು ಎಂಬುದು ಮೋದಿ ಅವರ ಕನಸಾಗಿದೆ.

    Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್ ಎಷ್ಟಿದೆ?

    ಇಂದಿನ ಯುವಕರು ತಮ್ಮ ತಮ್ಮ ಬದುಕನ್ನು ರೂಪಿಸಿಕೊಂಡರೇ ಮಾತ್ರ ಸಾಲದು. ಯುವಕರು ಈ ದೇಶದ ಅಭಿವೃದ್ದಿಯಲ್ಲಿ ಪಾಲುದಾರರಾಗಬೇಕು. ಭಾರತದ ಭವಿಷ್ಯದ ರಾಯಭಾರಿಗಳಾಬೇಕು. ಈಗಾದಾಗ ಮಾತ್ರ ಸಮೃದ್ದ ಭಾರತವನ್ನು ನಿರ್ಮಾಣ ಮಾಡಲು ಸಾಧ್ಯ.

    ಈ ನಿಟ್ಟಿನಲ್ಲಿ ಪ್ರಧಾನಿಗಳು 2024 ರ ಸ್ವಾತಂತ್ರೋತ್ಸವ ಭಾಷಣದಲ್ಲಿ ಈ ದೇಶದ 1 ಲಕ್ಷ ಯುವಕರನ್ನು ರಾಜಕಾರಣ ಮಾಡಲು ಆಹ್ವಾನಿಸಿದರು. ಯುವಕರು ಹೆಚ್ಚು ಹೆಚ್ಚು ರಾಜಕಾರಣಕ್ಕೆ ಬರಬೇಕು. ಶುದ್ದ ರಾಜಕಾರಣದ ಅವಶ್ಯಕತೆ ದೇಶಕ್ಕೆ ಇದೆ ಎಂದು ಹೇಳಿದ್ದರು ಎಂದು ಸಂಸದರು ಸ್ಮರಿಸಿದರು.

    ಚಿತ್ರದುರ್ಗ, ದಾವಣಗೆರೆ ಜಿಲ್ಲೆಯಿಂದ ಭಾಗವಹಿಸಿದ್ದ ಸುಮಾರು 200 ವಿದ್ಯಾರ್ಥಿ, ವಿದ್ಯಾರ್ಥಿನಿಯರುಗಳಲ್ಲಿ 10 ಜನರು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು.

    ಇದೇ ಸಂದರ್ಭದಲ್ಲಿ ಆಯ್ಕೆಯಾದ 10 ಜನ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಮತ್ತು ಜ್ಯೂರಿಗಳಾಗಿ ಕೆಲಸ ನಿರ್ವಹಿಸಿದವರನ್ನು ಸನ್ಮಾನಿಸಿದರು.

    Also Read: ಹೊಳಲ್ಕೆರೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ | ಇಲ್ಲಿದೆ ಪೂರ್ಣ ವಿವರ

    ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ತಾಜಪೀರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಾಧುರಿ ಗಿರೀಶ್, ಮದುಗಿರಿ ಅಧ್ಯಕ್ಷ ಹನುಮಂತೇಗೌಡರು, ಡಾನ್‌ಬಾಸ್ಕೋ ಕಾಲೇಜು ಆಡಳಿತಾಧಿಕಾರಿ ವಿ.ಎಂ.ಮ್ಯಾಥ್ಯೂ, ನೆಹರು ಯುವ ಕೇಂದ್ರ ಸುಹಾಸ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top