
CHITRADURGA NEWS | 24 MARCH 2025
ಚಿತ್ರದುರ್ಗ: ಜಿಲ್ಲಾ ಮಾದಿಗ ನೌಕರರ ಸಾಂಸ್ಕøತಿಕ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಗ್ರಾಮೀಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕೃತ ಶ್ವೇತಾ ರೇವಣ್ಣಗೆ ಸನ್ಮಾನಿಸಲಾಯಿತು.
Also Read: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆ ಮತ್ತೆ ಏರಿಕೆ
ಜಿಲ್ಲಾ ಶಾಖೆ, ತಾಲ್ಲೂಕು ಶಾಖೆಗಳಿಗೆ ನೂತನವಾಗಿ ಆಯ್ಕೆಯಾಗಿರುವ ಮಾದಿಗ ಸಮುದಾಯದ ಪದಾಧಿಕಾರಿಗಳಿಗೆ ಕ್ರೀಡಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಶ್ವೇತಾ ರೇವಣ್ಣ ಸನ್ಮಾನ ಸ್ವೀಕರಿಸಿ ಮಾತನಾಡಿ,
ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಶಿಕ್ಷಣ, ಸಂಘಟನೆ, ಹೋರಾಟದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಬಹುದು ಎಂದು ಹೇಳಿದರು.
ಮಾದಿಗ ನೌಕರರ ಸಾಂಸ್ಕøತಿಕ ಸಂಘದ ಗೌರವಾಧ್ಯಕ್ಷ ಕೆ.ಜಿ.ಜಗದೀಶ್ ಮಾತನಾಡಿ, ಪರಿಶಿಷ್ಟ ಜಾತಿಯಲ್ಲಿ ಬಲಾಢ್ಯರ ನಡುವೆ ಮೀಸಲು ಕ್ಷೇತ್ರ ಸೌಲಭ್ಯ ಪಡೆಯಲು ವಿಫಲವಾಗಿರುವ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಹೋರಾಟಕ್ಕೆ ಮಾದಿಗ ನೌಕರರ ಬೆಂಬಲ ಅತ್ಯಗತ್ಯ ಎಂದು ಹೇಳಿದರು.
ಶಿಕ್ಷಣ ಇಲಾಖೆಯ ನಿವೃತ್ತ ಕಾರ್ಯದರ್ಶಿ ಎಂ.ರೇವಣಸಿದ್ದಪ್ಪ ಮಾತನಾಡಿ, ಮಾದಿಗ ಜನಾಂಗ ಸಮಾಜದಲ್ಲಿ ತನ್ನ ತನ ಉಳಿಸಿಕೊಳ್ಳಬೇಕಾದರೆ ಎಲ್ಲರೂ ಒಗ್ಗಟ್ಟಾಗಿ ಒಳ ಮೀಸಲಾತಿ ಅನುಷ್ಟಾನ ಕುರಿತು ಚರ್ಚಿಸಿ ಜಾಗೃತಿ ಮೂಡಿಸಬೇಕಿದೆ ಎಂದರು.
Also Read: ಒಂದು ದೇಶ – ಒಂದು ಚುನಾವಣೆ ಘೋಷಣೆಯಲ್ಲ | ಭಾರತೀಯರ ಹೃದಯ ಬಡಿತ | ಗೋವಿಂದ ಕಾರಜೋಳ
ವಾಣಿಜ್ಯ ಇಲಾಖೆ ಸಹಾಯಕ ಆಯುಕ್ತ ಎಂ.ನಾರಾಯಣಸ್ವಾಮಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾದಿಗ ನೌಕರರ ಸಂಘದ ಅಧ್ಯಕ್ಷ ಡಿ.ಜೆ.ಶ್ರೀನಿವಾಸ್, ಬಿ.ಸಿ.ಎಂ.ಇಲಾಖೆ ನಿವೃತ್ತ ಅಧಿಕಾರಿ ಜಗನ್ನಾಥ್, ಬಿ.ಸಿ.ಎಂ.ಅಧಿಕಾರಿ ರುದ್ರಮುನಿ, ನಿವೃತ್ತ ಪಿ.ಎಸ್.ಐ. ನಾಗರಾಜ್ ದಯಾನಂದ್, ಕಾರ್ಯದರ್ಶಿ ತಿಪ್ಪೇಸ್ವಾಮಿ, ಸರ್ಕಾರಿ ನೌಕರರ ಸಂಘದ ಖಜಾಂಚಿ ಮಲ್ಲಿಕಾರ್ಜುನ, ಕೆ.ವೀರಣ್ಣ, ಶಿವಪ್ರಕಾಶ್, ಟಿ.ಎಸ್.ಬಸಣ್ಣ ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
