
CHITRADURGA NEWS | 29 MARCH 2025
ಚಿತ್ರದುರ್ಗ: ಯುಗಾದಿ ಹಬ್ಬದ ಪ್ರಯುಕ್ತ ಬೀದಿಬದಿ ವ್ಯಾಪಾರಿಗಳು ವಹಿವಾಟು ನಡೆಸುವುದಕ್ಕೆ ಅನೂಕುಲವಾಗುವಂತೆ ನಗರದ ಹಳೇ ಮಾಧ್ಯಮ ಶಾಲಾ ಮೈದಾನಕ್ಕೆ ಮಾರುಕಟ್ಟೆಯನ್ನು ಸ್ಥಳಾಂತರಿಸಲಾಗಿದೆ.
Also Read: ಅಡಿಕೆ ಬೆಳೆಗಾರರಿಗೆ ಯುಗಾದಿ ಬಂಪರ್ | 54 ಸಾವಿರದತ್ತ ದಾಪುಗಾಲು

ವ್ಯಾಪಾರಿಗಳು ಎಂ.ಜಿ.ವೃತ್ತ, ಆನೆಬಾಗಿಲು ರಸ್ತೆ, ಮೆದೇಹಳ್ಳಿ ರಸ್ತೆ, ಹೊಳಲ್ಕೆರೆ ರಸ್ತೆ ಹಾಗೂ ಬಿ.ಡಿ. ರಸ್ತೆಗಳಲ್ಲಿ ವ್ಯಾಪಾರ ಮಾಡುವುದರಿಂದ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುವುದು.
ಜನ ದಟ್ಟಣೆ ಹೆಚ್ಚಾಗುವುದರಿಂದ ಸರಗಳ್ಳತನ, ಮೊಬೈಲ್ ಮತ್ತು ಪರ್ಸ್ ಕಳ್ಳತನಗಳು ನಡೆಯುತ್ತವೆ.
Also Read: ಯುಗಾದಿ ಹಬ್ಬಕ್ಕೆ ಮನೆಗೆ ಬಂದ ಅಮ್ಮನನ್ನೇ ಕೊಂದ ಮಗ
ಈ ಹಿನ್ನಲೆಯಲ್ಲಿ ಮಾರ್ಚ್ 28 ರಿಂದ 31 ವರೆಗೆ ಯುಗಾದಿ ಹಬ್ಬಕ್ಕೆ ಬೇಕಾಗುವ ವಸ್ತುಗಳನ್ನು ಮಾರಾಟ ಮಾಡಲು ಹಳೇ ಮಾಧ್ಯಮಿಕ ಶಾಲಾ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ ಎಂದು ನಗರ ಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
