Connect with us

    ಬಿಜೆಪಿ ಪ್ರತಿಭಟನೆ | ಜಿಲ್ಲೆಯಿಂದ 250 ಮಂದಿ ಭಾಗೀ | ಎ.ಮುರುಳಿ

    ಮುಖ್ಯ ಸುದ್ದಿ

    ಬಿಜೆಪಿ ಪ್ರತಿಭಟನೆ | ಜಿಲ್ಲೆಯಿಂದ 250 ಮಂದಿ ಭಾಗೀ | ಎ.ಮುರುಳಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 01 APRIL 2025

    ಚಿತ್ರದುರ್ಗ: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2 ರಂದು ನಡೆಯಲಿರುವ ಬೆಲೆ ಏರಿಕೆಯ ಕಾಂಗ್ರೆಸ್ ಸರ್ಕಾರ ವಿರುದ್ಧ ಅಹೋರಾತ್ರಿ ಧರಣಿಗೆ ಚಿತ್ರದುರ್ಗ ಜಿಲ್ಲೆಯಿಂದ ಸುಮಾರು 250 ಜನ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದ್ದಾರೆ.

    Also Read: ಯುಗಾದಿ ಜೂಜು | ಜಿಲ್ಲೆಯಲ್ಲಿ 850 ಜನರ ಬಂಧನ | ಪೊಲೀಸ್ ಇಲಾಖೆಯ ಭರ್ಜರಿ ಕಾರ್ಯಚರಣೆ

    ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಲೆ-ತೆರಿಗೆ ಹೆಚ್ಚಳದ ಮೂಲಕ ಬಡವರಿಗೆ ಬರೆ ಎಳೆಯುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ- ಪ್ರತಿಭಟನೆ ನಡೆಸಲಿದೆ.

    ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ, ಮುಸಲ್ಮಾನರಿಗೆ ಓಲೈಕೆ ಮಾತ್ರವಲ್ಲದೆ ಹಿಂದೂಗಳಿಗೆ ಅಪಮಾನ ಮಾಡಲಾಗಿದೆ. ಸರ್ಕಾರಿ ಕಾಮಗಾರಿಗಳಲ್ಲಿ ಮುಸಲ್ಮಾನರಿಗೆ ಶೇ.4 ಮೀಸಲಾತಿ ನೀಡಿದ್ದು, ಕಾನೂನಿನ ವಿರುದ್ಧವಾಗಿದೆ.

    ಉನ್ನತ ಶಿಕ್ಷಣಕ್ಕೆ ಹೊರದೇಶಕ್ಕೆ ಹೋಗುವ ಮುಸಲ್ಮಾನ ವಿದ್ಯಾರ್ಥಿಗಳಿಗೆ 20 ಲಕ್ಷ ಇದ್ದುದನ್ನು 30 ಲಕ್ಷಕ್ಕೆ ಏರಿಸಿದ್ದಾರೆ. ಹಿಂದೆ ಮುಸಲ್ಮಾನ ಹೆಣ್ಮಕ್ಕಳಿಗೆ ಶಾದಿ ಭಾಗ್ಯ ನೀಡಿದ್ದರು. ಇದೀಗ ಮುಸ್ಲಿಂ ಹೆಣ್ಮಕ್ಕಳ ಆತ್ಮರಕ್ಷಣೆಗೆ ನೂರಾರು ಕೋಟಿಯನ್ನು ರಾಜ್ಯ ಸರ್ಕಾರ ವೆಚ್ಚ ಮಾಡುತ್ತಿದೆ. ಇಮಾಮರ ವೇತನ ಹೆಚ್ಚಿಸಿದ್ದಾರೆ. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವ ಸರ್ಕಾರ ಇದಾಗಿದೆ ಎಂದು ದೂರಿದ್ದಾರೆ.

    Also Read: ಕರ್ತವ್ಯ ಲೋಪ | ಶುಶ್ರೂಷಾಧಿಕಾರಿ ಎಸ್.ಸಿದ್ದೇಶ್ವರ ಅಮಾನತು

    ಕೇವಲ ಮುಸ್ಲಿಮರಿಗೆ ಮಾತ್ರ ಇಂಥ ಯೋಜನೆಗಳು ಏಕೆ? ಮೋದಿಜೀ ಅವರು ಜನಧನ ಸೇರಿ ಹಲವು ಯೋಜನೆ ಜಾರಿಗೊಳಿಸಿದ್ದು, ಎಲ್ಲರಿಗೂ ಅವಕಾಶ ನೀಡಿದ್ದಾರೆ.

    ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮಿ ಯೋಜನೆಯನ್ನು ಹಿಂದೂಗಳಿಗೆ ಮಾತ್ರ ಕೊಟ್ಟಿಲ್ಲ. ಮುಸ್ಲಿಮರು ಸೇರಿ ಎಲ್ಲರಿಗೂ ಕೊಟ್ಟಿದ್ದರು. ಹಿಂದೂಗಳ ಅವಮಾನವನ್ನು ನಾವು ಖಂಡಿಸುತ್ತೇವೆ. ಸಿದ್ದರಾಮಯ್ಯನವರು ಹಾಲುಮತ ಸಮುದಾಯ, ಕಾಯಕ ಸಮುದಾಯಗಳ ನಿರ್ಲಕ್ಷಿಸಿದ್ದಾರೆ.

    ಪರಿಶಿಷ್ಟ ಜಾತಿ, ಪಂಗಡಗಳನ್ನು ಮತಬ್ಯಾಂಕ್ ಮಾಡಿಕೊಂಡ ಕಾಂಗ್ರೆಸ್ಸಿನವರು ಅವರಿಗೆ ಅನ್ಯಾಯ ಮಾಡುತ್ತಿದೆ. ಇದರ ವಿರುದ್ಧ ಹೋರಾಟ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

    ಕಾoಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿoದ ಬೆಲೆ ಏರಿಕೆ ನಿರಂತರವಾಗಿದೆ. ಪೆಟ್ರೋಲ್, ಡೀಸೆಲ್, ಸ್ಟಾಂಪ್ ಶುಲ್ಕ, ಹಾಲಿನ ದರ, ಮೆಟ್ರೊ ದರ ಏರಿಸುವ ಮೂಲಕ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜನಸಾಮಾನ್ಯರ ಮೇಲೆ ಬರೆ ಹಾಕುತ್ತಿದೆ.

    Also Read: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ | ಇಬ್ಬರು ಸಾವು | ಮೂವರಿಗೆ ಗಾಯ

    ದೇಶದಲ್ಲೇ ಅತ್ಯಂತ ದುಬಾರಿ ಜೀವನವನ್ನು ಈ ನಾಡಿನ ಜನ ನಡೆಸಬೇಕಾದ ದುಸ್ಥಿತಿಗೆ ಕಾಂಗ್ರೆಸ್ ಕಾರಣವಾಗಿದೆ. ಸೇವಿಸುವ ಗಾಳಿಯೊಂದನ್ನು ಬಿಟ್ಟರೆ ಉಳಿದೆಲ್ಲವುಗಳ ದರ ಏರಿಸಲಾಗಿದೆ. ಸಾಮಾನ್ಯ ಜನರು, ರೈತರ ಸಂಕಷ್ಟ ಅರ್ಥ ಮಾಡಿಕೊಳ್ಳದ ಸರ್ಕಾರ ಇದು ಎಂದಿದ್ದಾರೆ.

    ಏಪ್ರಿಲ್ 2 ರಂದು ಬೆಳಿಗ್ಗೆ 11 ಗಂಟೆಯಿoದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ. ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಿದ್ದನ್ನು ಆಕ್ಷೇಪಿಸಿ ಅದೇ ದಿನ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ.

    ಇದರಲ್ಲಿ ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.

    Also Read: ಖಾಲಿ ಹೊಟ್ಟೆಯಲ್ಲಿ ಈ 5 ಆಹಾರಗಳನ್ನು ಸೇವಿಸುತ್ತೀದ್ದೀರಾ…? ಹುಷಾರು!

    ರಾಜ್ಯ ಹೋರಾಟಕ್ಕೆ ಚಿತ್ರದುರ್ಗ ಜಿಲ್ಲೆಯಿಂದ 250 ಜನ ಜಿಲ್ಲಾ ಮಟ್ಟ ಹಾಗೂ ಮಂಡಲದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top