ಮುಖ್ಯ ಸುದ್ದಿ
ಕೇಂದ್ರದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

CHITRADURGA NEWS | 09 APRIL 2025
ಚಿತ್ರದುರ್ಗ: ಕೇಂದ್ರ ಸರ್ಕಾರ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ದರವನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್‍ನ ಪದಾಧಿಕಾರಿಗಳು, ಕಾರ್ಯಕರ್ತರು ಇಲ್ಲಿನ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿಗಳ ಕಚೇರಿಯ ಒನಕೆ ಓಬವ್ವ ವೃತ್ತದವರೆಗೆ ಪ್ರತಿಭಟನೆ ನಡೆಸಿದರು.
Also Read: ದ್ವಿತೀಯ ಪಿಯುಸಿ ರಿಸಲ್ಟ್ | ಇವರೇ ನೋಡಿ ಜಿಲ್ಲೆಯ ಟಾಪರ್ಸ್ | ಜಿಲ್ಲೆಗೆ ಶೇ.59.87 ಫಲಿತಾಂಶ
ದಾರಿಯುದ್ದಕ್ಕೂ ಕೇಂದ್ರ ಸರ್ಕಾರದ ಧೋರಣೆ, ಬೆಲೆ ಏರಿಕೆಯ ವಿರುದ್ದ ಹಾಗೂ ಭಿತ್ತಿ ಪತ್ರ ಹಿಡಿದು ಮೋದಿ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.
ಪ್ರತಿಭಟನೆ ಯಲ್ಲಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್‍ನ ಅಬಕಾರಿ ಸುಂಕವನ್ನು ರೂ.2 ಹೆಚ್ಚಳ ಮಾಡುವುದರ ಮೂಲಕ ಬಡವರ ಬದುಕಿಗೆ ಕೊಳ್ಳಿ ಇಡಲಾಗಿದೆ.
ಇವುಗಳ ದರ ಏರಿಕೆಯಿಂದಾಗಿ ಬೇರೆ ಎಲ್ಲ ದರಗಳು ಸಹಾ ಏರಿಕೆಯಾಗುತ್ತವೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದವರು ಬದುಕು ಕಷ್ಟಕ್ಕೆ ದೂಡುತ್ತದೆ.k ಸರ್ಕಾರ ಈ ಕೂಡಲೇ ಏರಿಕೆ ಮಾಡಿದರುವ ದರವನ್ನು ಇಳಿಕೆ ಮಾಡಬೇಕು. ಈ ಬೆಲೆ ಏರಿಕೆಯಿಂದಾಗಿ ಹಣದುಬ್ಬರ ಹಾಗೂ ನಿರುದ್ಯೋಗ ಹೆಚ್ಚಾಗುತ್ತದೆ ಎಂದು ದೂರಿದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
ಪ್ರತಿಭಟನೆ ಯಲ್ಲಿ ಓಬಿಸಿ ಘಟಕದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ದಾದಪೀರ್, ರೋಹನ್, ಕುಮಾರ್, ಮಹಾಂತೇಶ್, ಚಂದನ್, ಮಧು ಶ್ರೀನಿವಾಸ್, ವಿರೇಶ್, ರೇವಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.
