Connect with us

    ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಮಂತ್ರ | ಸಚಿವ ಡಿ.ಸುಧಾಕರ್

    ಮುಖ್ಯ ಸುದ್ದಿ

    ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಮಂತ್ರ | ಸಚಿವ ಡಿ.ಸುಧಾಕರ್

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 14 APRIL 2025

    ಚಿತ್ರದುರ್ಗ: ಡಾ.ಅಂಬೇಡ್ಕರ್ ಅವರ ಶಿಕ್ಷಣ-ಸಂಘಟನೆ-ಹೋರಾಟ ಎಂಬ ಮೂರು ಸಿದ್ಧಾಂತಗಳನ್ನು ನಾವೆಲ್ಲರೂ ಪಾಲಿಸಬೇಕಾದ ಜೀವನದ ಮಂತ್ರವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಹೇಳಿದರು.

    Also Read: ಮಲ್ಲಾಡಿಹಳ್ಳಿಯ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 6 ರ‍್ಯಾಂಕ್

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ತ.ರಾ.ಸು. ರಂಗಮಂದಿರದಲ್ಲಿ ಸೋಮವಾರ ಏರ್ಪಡಿಸಲಾದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

    ಶಿಕ್ಷಣದಿಂದ ಜ್ಞಾನ, ಹೋರಾಟದಿಂದ ಹಕ್ಕುಗಳು, ಸಂಘಟನೆಯಿಂದ ಶಕ್ತಿ ಪಡೆದುಕೊಳ್ಳುವ ಮಾರ್ಗದಲ್ಲಿ ನಡೆಯುವುದು ನವ ಭಾರತ ನಿರ್ಮಾಣದ ಪ್ರಥಮ ಹೆಜ್ಜೆಯಾಗಿದೆ.

    ಡಾ. ಅಂಬೇಡ್ಕರ್ ಅವರು ಕೇವಲ ಸಮಾಜಸೇವಕರಲ್ಲ, ಅವರು ಭಾರತದ ಪುನರ್ ನಿರ್ಮಾಣಕ್ಕೆ ಕೊಡುಗೆ ನೀಡಿದ ಮಹಾತ್ಮ. ಶೋಷಿತರಿಗೆ ಧೈರ್ಯ, ಶಿಕ್ಷಣ, ಆತ್ಮಗೌರವ ಮತ್ತು ನ್ಯಾಯದ ಮಾರ್ಗವನ್ನು ತೋರಿದ ದಾರಿದೀಪ. ಅವರ ಜೀವನದ ಪ್ರಮುಖ ಕೊಂಡಿಯಾಗಿದ್ದು ಭಾರತದ ಸಂವಿಧಾನ. ಅವರು ಅಧ್ಯಕ್ಷರಾಗಿದ್ದ ಕರಡು ಸಮಿತಿಯ ಮಾರ್ಗದರ್ಶನದಲ್ಲಿ ರೂಪುಗೊಂಡ ನಮ್ಮ ಸಂವಿಧಾನವು ಸಮಾನತೆ, ಧರ್ಮನಿರಪೇಕ್ಷತೆ, ಸಾಮಾಜಿಕ ನ್ಯಾಯ ಮತ್ತು ವ್ಯಕ್ತಿಗತ ಹಕ್ಕುಗಳನ್ನು ನಮ್ಮೆಲ್ಲರಿಗೂ ನೀಡುವ ಪವಿತ್ರ ಗ್ರಂಥವಾಗಿದೆ.

    Also Read: ನಿವೃತ್ತ ಇಂಜಿನಿಯರ್ ಕೆ.ಸಿ.ನಿಂಗಪ್ಪ ನಿಧನ

    12ನೇ ಶತಮಾನದಲ್ಲಿ ಈ ಭೂಮಿಯಲ್ಲಿ ಸಮಾನತೆಯ ಸಂದೇಶ ಸಾರಿ ಹೋಗಿದ್ದ ಮಹಾ ಮಾನವತಾವಾದಿ ಬಸವಣ್ಣ ಮತ್ತು 20ನೆಯ ಶತಮಾನದಲ್ಲಿ ಅದೇ ಸಂದೇಶವನ್ನು ಜಾರಿಗೊಳಿಸಿದ ಡಾ|| ಬಾಬಾ ಸಾಹೇಬ ಅಂಬೇಡ್ಕರ್ ಇಬ್ಬರಲ್ಲೂ ಹಲವು ಸಾಮ್ಯತೆಗಳು ಕಾಣುತ್ತವೆ.

    ಇಬ್ಬರದು ಧ್ಯೆಯ, ಉದ್ದೇಶ ಒಂದೇ ಆಗಿತ್ತು, ಸಮಾಜದಲ್ಲಿ ಮೇಲು, ಕೀಳು ಎನ್ನುವ ಭಾವನೆ ಇರಬಾರದು, ಎಲ್ಲರಿಗೂ ಬದುಕಿನ ಹಕ್ಕು ಸಮಾನವಾಗಿ ಸಿಗಬೇಕು. ನೈಸರ್ಗಿಕ ಸಂಪನ್ಮೂಲಗಳ ಬಳಕೆಗೆ ಸಮಾನ ಅಧಿಕಾರವಿರಬೇಕು, ಎಲ್ಲಾ ಹಕ್ಕುಗಳು ಸಮಾನವಿರಬೇಕು ಎನ್ನುವ ಉದ್ದೇಶದೊಂದಿಗೆ ಅರಿವಿನ ಸಮಾಜ ನಿರ್ಮಿಸಿ, ಹೊಸ ಬೆಳಕನ್ನು ಕಾಣುವ ಹೊಸ ಕನಸು ಹೊತ್ತವರು ಡಾ. ಅಂಬೇಡ್ಕರ್ ಅವರು ಎಂದರು.

    ಸಮಾಜದಲ್ಲಿನ ಅಸಮಾನತೆಗಾಗಿ ಅಂಬೇಡ್ಕರ್ ಅವರಿಗೆ ಬಹಳ ದೊಡ್ಡಮಟ್ಟದ ಅಸಮಾಧಾನವಿತ್ತು, ಆದರೆ ಅದಕ್ಕಾಗಿ ಅವರೆಂದೂ ತಾಳ್ಮೆ ಕಳೆದುಕೊಳ್ಳಲಿಲ್ಲ. ಅಹಿಂಸೆಯ ಮಾರ್ಗ ತುಳಿಯಲಿಲ್ಲ ಅತ್ಯಂತ ಸಮಾಧಾನದಿಂದಲೇ ಅರಿವು ಮೂಡಿಸಲು ಪ್ರಯತ್ನಿಸಿದರು, ಅದೇ ತತ್ವದ ಆಧಾರದ ಮೇಲೆ ಸಂವಿಧಾನವನ್ನು ರಚಿಸಿದರು.

    Also Read: ನಿಮ್ಮ ಮಗುವಿಗೆ ಆಟಿಸಂ ಸಮಸ್ಯೆ ಇದೇ ಎಂಬುದನ್ನು ಈ ಲಕ್ಷಣಗಳ ಮೂಲಕ ತಿಳಿದುಕೊಳ್ಳಿ

    ಅವರ ಜೀವಿತದುದ್ದಕ್ಕೂ ಯಾರನ್ನೂ ದ್ವೇಷಿಸಲಿಲ್ಲ, ಯಾರ ಹಕ್ಕುಗಳನ್ನು ಅಧಿಕಾರವನ್ನು, ಅವರು ಕಸಿದುಕೊಳ್ಳಲು ಬಯಸಿರಲಿಲ್ಲ. ಮನುಷ್ಯನಾಗಿ ಹುಟ್ಟಿದವರು ಹೇಗೆ ಬದುಕಬಹುದು ಎಂದು ತೋರಿಸುವ ಮೂಲಕ ಇಡೀ ಮಾನವ ಕುಲಕ್ಕೆ ಆದರ್ಶರಾದರು.

    ಕಾನೂನು ತಜ್ಞರಾಗಿ ಸಮಾಜ ಸುಧಾರಕರಾಗಿ ಅರ್ಥ ಶಾಸ್ತ್ರಜ್ಞರಾಗಿ, ಪತ್ರಕರ್ತರಾಗಿ, ತತ್ವಜ್ಞಾನಿಯಾಗಿ, ಸಾಹಿತಿಯಾಗಿ ತಮ್ಮ ಇರುವಿಕೆಯನ್ನು ತೋರ್ಪಡಿಸಿದರು. ಹಾಗಾಗಿ ಅವರ ಹೆಸರೇ ನಮಗೆಲ್ಲಾ ಸ್ಪೂರ್ತಿ, ಸಾಧನೆಗೆ ಪ್ರೇರಣೆ, ಅವರ ಬದುಕು ತತ್ವ ಆದರ್ಶಗಳು ನಮ್ಮೆಲ್ಲರ ಪಾಲಿಗೆ ಸರ್ವಕಾಲಿಕ ಮಾರ್ಗದರ್ಶಕ. ಸಮಾನತೆಯಿಂದಲೆ ಪ್ರಗತಿ ಎನ್ನುವುದು ಅವರ ಪರಮೋಚ್ಚ ನಂಬಿಕೆಯಾಗಿತ್ತು ಎಂದರು.

    ಅಂಬೇಡ್ಕರ್ ಅವರ ಕನಸಿನಂತೆ, ಎಲ್ಲಾ ಹಂತಗಳಲ್ಲಿಯೂ ಶಿಕ್ಷಣ-ಸಮಾನತೆಯನ್ನು ನೀಡುವಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಕಂಕಣ ಬದ್ಧವಾಗಿದೆ. ಅಂಬೇಡ್ಕರ್ ಜಯಂತಿ ಎನ್ನುವುದು ಕೇವಲ ಪುಷ್ಪಾರ್ಚನೆಗೆ ಸೀಮಿತವಾಗಬಾರದು.

    ಇದು ಪ್ರತಿಜ್ಞಾ ದಿನವಾಗಬೇಕು, ನಾವು ಜಾತಿಯ ಹೆಸರಿನಲ್ಲಿ ನಡೆಯುವ ಯಾವುದೇ ಹಿಂಸೆಯನ್ನು ವಿರೋಧಿಸೋಣ. ಎಲ್ಲ ಮಕ್ಕಳಿಗೂ ಸಮಾನ ಶಿಕ್ಷಣ, ಮಹಿಳೆಯರಿಗೆ ಗೌರವ, ದಲಿತರಿಗೆ ಸವಲತ್ತು, ಪರಿಶ್ರಮಿಕರಿಗೆ ಪರಿಗಣನೆ, ಎಲ್ಲ ವರ್ಗದ ಜನತೆಗೆ ಸನ್ಮಾನ, ಈ ಎಲ್ಲವನ್ನು ನಾವು ಕಲ್ಪಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಆಶಿಸಿದರು.

    Also Read: ಬೇಸಿಗೆಯಲ್ಲಿ ತ್ವಚೆಯ ಕಾಂತಿ ಹೆಚ್ಚಾಗಲು ಮಲಗುವ ಮೊದಲು ಇವೆರಡನ್ನು ಮುಖಕ್ಕೆ ಹಚ್ಚಿ

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, 1927 ರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಧೃಢ ನಿರ್ಧಾರ ಕೈಗೊಂಡು ಮನಸ್ಮøತಿ ಎನ್ನುವ ಅಲಿಖಿತ ಸಂವಿಧಾನವನ್ನು ಸುಟ್ಟು ಹಾಕಿದರು. ವಿದ್ಯಾಭ್ಯಾಸದಿಂದ ಅಂಬೇಡ್ಕರ್ ಗಳಿಸಿದ ವಿದ್ವತ್ ಇಂತಹ ಧೃಡ ನಿರ್ಧಾರ ಕೈಗೊಳ್ಳಲು ಕಾರಣವಾಯಿತು. ಬಹಳಷ್ಟು ಜನರು ಇದನ್ನು ವಿರೋಧಿಸಿದರು.

    ದೇಶದ ಸಂವಿಧಾನ ರಚನೆ ಮಾಡಿ, ದೇಶದಲ್ಲಿ ಜಾರಿಯಾದ ಮೇಲೂ ಅಂಬೇಡ್ಕರ್ ರಚಿಸಿದ ಸಂವಿಧಾನ ಒಪ್ಪದಂತೆ ವಿರೋಧಿಸಿ ಅಂದಿನ ಕಾಲದಲ್ಲಿ ಚಳುವಳಿಯನ್ನು ಸಹ ನಡೆಸಲಾಯಿತು. ಇಂದಿಗೂ ಸಂವಿಧಾನವನ್ನು ಬದಲಾವಣೆ ಮಾಡುವ ಹುನ್ನಾರ ದೇಶದಲ್ಲಿ ನಡೆಯುತ್ತಿದೆ.

    ಸಂವಿಧಾನವನ್ನು ರಕ್ಷಿಸಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ. ಸಂವಿಧಾನ ರಚಿಸಿ ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದವರು ಡಾ.ಬಿ.ಆರ್.ಅಂಬೇಡ್ಕರ್, ದೇಶದಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ರಾಜಯಕೀಯ ಸಮಾನತೆ ಮೂಡಬೇಕು ಎನ್ನುವುದು ಅವರ ಆಶಯವಾಗಿತ್ತು. ಇಂದು ಮಹಿಳೆಯರಿಗೆ ಸ್ವಾತಂತ್ರ್ಯ ದೊರಕಲು ಬಾಬಾ ಸಾಹೇಬ್ ಅಂಬೇಡ್ಕರ್ ಕಾರಣವಾಗಿದ್ದಾರೆ.

    ಭಾರತ ದೇಶ ಇಂದು ಆಧುನಿಕವಾಗಿ ಪ್ರಗತಿ ಹೊಂದಲು ಅಂಬೇಡ್ಕರ್ ಅವರ ಕೊಡುಗೆ ಮಹತ್ವÀದ್ದಾಗಿದೆ. ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರಿಗೆ ಗುತ್ತಿಗೆಯಲ್ಲೂ ಮೀಸಲಾತಿ ನೀಡಿದೆ. ಅಂಬೇಡ್ಕರ್ ಅವರ ಆಶಯ ಈಡೇರಿಸುವಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.

    Also Read: ಹೆರಿಗೆಯ ನಂತರ ನಿಮ್ಮ ಗರ್ಭಾಶಯ ಜಾರುತ್ತಿದೆಯೇ? ಹಾಗಾದ್ರೆ ಈ ಸಲಹೆ ಪಾಲಿಸಿರಿ

    ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಚಳ್ಳಕೆರೆ ಕೋಟೆ ಬೋರಮ್ಮ ಪಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಸಂಜೀವ್ ಕುಮಾರ್ ಪೋತೆ ಮಾತನಾಡಿದರು.

    ಕಾರ್ಯಕ್ರಮಕ್ಕೂ ಮುನ್ನ ರಂಗಮಂದಿರದಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಶಾಸಕ ವೀರೇಂದ್ರ ಪಪ್ಪಿ ಸೇರಿದಂತೆ ಎಲ್ಲ ಗಣ್ಯಮಾನ್ಯರು ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

    ಡಾ. ಅಂಬೇಡ್ಕರ್ ಜಯಂತಿ ಅಂಗವಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಸಮಾರಂಭದಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಇದೇ ಸಂದರ್ಭದಲ್ಲಿ ಬೋಧಿಸಿದರು.

    ವಿವಿಧ ಸಂಘಟನೆಗಳ ಮೂಲಕ ಸಮಾಜದ ಏಳಿಗೆಗಾಗಿ ಹೋರಾಟ ನಡೆಸಿ, ಜನಸೇವೆಗೈದ ಪರಿಶಿಷ್ಟ ಜಾತಿಯ ವಿವಿಧ ಮುಖಂಡರುಗಳನ್ನು ಇದೇ ಸಂದರ್ಭEducationದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಹಾಗೂ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಕೂಡ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

    Also Read: ಒಳಮೀಸಲಾತಿ ಸಿಗುವವರೆಗೆ ಜನ್ಮ ದಿನಾಚರಣೆ ಇಲ್ಲ | ಎಚ್.ಆಂಜನೇಯ

    ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನ್, ನಗರಸಭೆ ಪೌರಾಯುಕ್ತೆ ರೇಣುಕಾ, ಸಮಾಜ ಕಲ್ಯಾಣ ಇಲಾಖೆ ಜಂಟಿನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಲಿಡ್ಕರ್ ಮಾಜಿ ಅಧ್ಯಕ್ಷ ಶಂಕರ್, ಮುಖಂಡರುಗಳಾದ ರಾಜಣ್ಣ, ನಿರಂಜನಮೂರ್ತಿ, ಬಾಳೆಕಾಯಿ ಶ್ರೀನಿವಾಸ್, ಸಿ.ಹೆಚ್. ಮಂಜುನಾಥ್, ತಿಪ್ಪೇಸ್ವಾಮಿ, ಹೆಚ್. ಮಹಾಂತೇಶ್, ಕೆ.ಟಿ. ಶಿವಕುಮಾರ್, ವೈ. ರಾಜಣ್ಣ ತುರುವನೂರು, ಎಂ. ಶಿವಮೂರ್ತಿ, ಪಾಂಡುರಂಗಪ್ಪ, ಕೈನಡು ಚಂದ್ರಣ್ಣ, ನಾಗಭೂಷಣ್, ನರಸಿಂಹರಾಜು, ಸೋಮಶೇಖರ್, ಸಮೀವುಲ್ಲಾ ಮುಂತಾದವರು ಪಾಲ್ಗೊಂಡಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top