CHITRADURGA NEWS | 15 APRIL 2025
ಹಿರಿಯೂರು: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ವಿವಿಧೆಡೆ ಏಪ್ರಿಲ್ 16ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
Also Read: ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಪರಿಶೀಲನೆ | ಶಾಸಕ ಕೆ.ಸಿ.ವಿರೇಂದ್ರ (ಪಪ್ಪಿ)
ಹಿರಿಯೂರು ನಗರಸಭೆ ಪೌರಯುಕ್ತರ ಕೋರಿಕೆಯಂತೆ ಹಿರಿಯೂರು ಪಟ್ಟಣದಲ್ಲಿ ಟಿ.ಬಿ.ಸರ್ಕಲ್‍ನಿಂದ ತಾಲ್ಲೂಕು ಕಛೇರಿವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಇದೇ ಏಪ್ರಿಲ್ 16ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಹಿರಿಯೂರು ಪಟ್ಟಣದ ಪ್ರದೇಶಗಳಲ್ಲಿ ಹಾಗೂ ತಾಲ್ಲೂಕಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.
ಹಿರಿಯೂರು ಪಟ್ಟಣದ ಆವಧಾನಿನಗರ, ತಾಲ್ಲೂಕು ಕಛೇರಿ ಹಾಗೂ ಸುತ್ತಮುತ್ತ, ಆಜಾದ್‍ನಗರ, ಚಿಕ್ಕಪೇಟೆ, ತೇರುಮಲ್ಲೇಶ್ವರ ದೇವಸ್ಥಾನದ ಸುತ್ತಮುತ್ತ ಗಾಂಧಿವೃತ್ತ ಹುಳಿಯೂರು ರಸ್ತೆಯ ಹರಿಶ್ಚಂದ್ರ ಘಾಟ್ ಸುತ್ತಮುತ್ತ, ಲಕ್ಕವ್ವನಹಳ್ಳಿ, ದೊಡ್ಡಘಟ್ಟ, ಸೀಗೇಹಟ್ಟಿ, ಕೂನಿಕೆರೆ ಹಾಗು ಸುತ್ತ ಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‍ಸಾಬ್ ಕೋರಿದ್ದಾರೆ.
Also Read: ಹೊಳಲ್ಕೆರೆಯ ನಂಟು ಬಿಟ್ಟು ಹೋದ ಹಾಸ್ಯ ನಟ ಬ್ಯಾಂಕ್ ಜನಾರ್ದನ್

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
